ಬೆಂಗಳೂರು: ಕರ್ನಾಟಕದಲ್ಲಿ ಸಂಪುಟ ಪುನಾರಚನೆ ಚರ್ಚೆ ಹೆಚ್ಚಾಗುತ್ತಿದಂತೆ ಸಚಿವ ಕೆ.ಎಚ್. ಮುನಿಯಪ್ಪ ತಮ್ಮ ಸಚಿವ ಸ್ಥಾನದಿಂದ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ತಮ್ಮ ಪುತ್ರಿ ರೂಪಕಲಾ ಶಶಿಧರ್‌ ಅವರಿಗಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆಯನ್ನು ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ ಎಂದು ಮೂಲಗಳು ಹೇಳುತ್ತಿವೆ. 


COMMERCIAL BREAK
SCROLL TO CONTINUE READING

ಮುನಿಯಪ್ಪ, ತಮ್ಮ ಪುತ್ರಿಯ ರಾಜಕೀಯ ಭವಿಷ್ಯದ ಕುರಿತು ಎಚ್ಚರರಾಗಿದ್ದು, ಮಹಿಳಾ ಮತದಾರರ ಬೆಂಬಲವನ್ನು ಹೆಚ್ಚಳ ಆಗಲಿದೆ ಎಂದು ಹೈ ಕಮಾಂಡ್ ಗೆ ಮನದಟ್ಟು ಮಾಡುವ ಪ್ರಯತ್ನ ಮಾಡಿದ್ದಾರೆ. ಕೆಜಿಎಫ್‌ ಕ್ಷೇತ್ರದಿಂದ ಎರಡು ಬಾರಿ ಶಾಸಕಿ ಆಗಿರುವ ರೂಪಕಲಾ ಶಶಿಧರ್‌ ಈಗ ತಮ್ಮ ತಂದೆಯ ಖಾತೆಗಾಗಿ ಹೋರಾಟದಲ್ಲಿದ್ದಾರೆ.


ಇದನ್ನೂ ಓದಿ- ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ:ಹಗರಣ ಆರೋಪಕ್ಕೆ ಉತ್ತರ?


ಮಹಿಳಾ ಪ್ರತಿನಿಧಿಗೆ ಆದ್ಯತೆ:
ಮಹಿಳಾ ಖೋಟಾದ ಅಡಿಯಲ್ಲಿ, ಅವರ ಪುತ್ರಿಗೆ ಸಚಿವ ಸ್ಥಾನ ನೀಡುವುದು ಸೂಕ್ತ ಎಂದು ಮುನಿಯಪ್ಪ ವಾದಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳು ಮಹಿಳಾ ಮತದಾರರಿಗೆ ಆಕರ್ಷಣೆಯಾಗಿರುವುದರಿಂದ, ಈ ನಿರ್ಧಾರ ಮಹಿಳಾ ಮತದಾರರ ಬೆಂಬಲವನ್ನು ಇನ್ನಷ್ಟು ಬಲಪಡಿಸಲಿದೆ ಎಂದು ಮುನಿಯಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಕೋಲಾರಕ್ಕೆ ನಾಯಕತ್ವ:
ಕೋಲಾರ ಜಿಲ್ಲೆಯಲ್ಲೂ ಮಂತ್ರಿಮಂಡಲದಲ್ಲಿ ಪ್ರಾತಿನಿಧ್ಯ ಹೆಚ್ಚಾಗಿ ಸಿಕ್ಕಿಲ್ಲ, ಉಪಚುನಾವಣೆಯಲ್ಲೂ ಮಹಿಳಾ ಮತದಾರರು ಕಾಂಗ್ರೆಸ್‌ ಪಕ್ಷದ ಪರ ಒಲವು ತೋರಿಸಿರುವುದು ಈ ನಿರ್ಧಾರಕ್ಕೆ ಪೂರಕವಾಗಿದೆ, ಎಂದು ಹೈ ಕಮಾಂಡ್ ಬಳಿ ಹೇಳಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ- ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ : ಪ್ರತಿಪಕ್ಷ ನಾಯಕ ಆರ್‌.ಅಶೋಕ


ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಿರುವ ಮುನಿಯಪ್ಪ, ತಮ್ಮ ಪುತ್ರಿಗೆ ಖಾತೆ ಹಸ್ತಾಂತರಿಸುವಂತೆ ಹೈಕಮಾಂಡ್‌ಗೆ ಮನವಿ ಮಾಡಿಕೊಂಡಿದ್ದಾರೆ. ಆದರೆ, ಈ ಕುರಿತು ಹೈಕಮಾಂಡ್‌ ಏನೆಂದಿರಬಹುದು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮುನಿಯಪ್ಪ ಪುತ್ರಿಗೆ ಸಚಿವ ಸ್ಥಾನ ಸಿಗುತ್ತದೆಯೇ? ಅವರ ಮನವಿ ಹೈಕಮಾಂಡ್‌ ಒಪ್ಪುತ್ತದೆಯೇ? ಈ ಬಗ್ಗೆ ಹೈಕಮಾಂಡ್‌ ನಿರ್ಧಾರಕ್ಕೆ ರಾಜ್ಯ ಕಾಂಗ್ರೆಸ್ ಬೆಂಬಲ ಇರಲಿದ್ಯಾ? ಕಾದುನೋಡಬೇಕಿದೆ.


ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.