ಬೆಳಗಾವಿ: ಇದೇ ತಿಂಗಳು 11ರಂದು(ಭಾನುವಾರ) ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. 


COMMERCIAL BREAK
SCROLL TO CONTINUE READING

ಮೂಲಗಳ ಪ್ರಕಾರ, ಶನಿವಾರ(ಆಗಸ್ಟ್ 10) ಬಿಎಸ್‍ವೈ ನವದೆಹಲಿಗೆ ತೆರಳಲಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಪಕ್ಷದ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಮತ್ತಿತರ ನಾಯಕರನ್ನು ಭೇಟಿಯಾಗಿ ಸಂಪುಟ ವಿಸ್ತರಣೆಗೆ ಅನುಮತಿ ಪಡೆಯಲಿದ್ದಾರೆ.


ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಸಮ್ಮತಿ ಪಡೆಯುವ ಸಲುವಾಗಿ ಎರಡು ದಿನಗಳ ಹಿಂದೆಯಷ್ಟೇ ನವದೆಹಲಿಗೆ ತೆರಳಿದ್ದ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿ ಸಾವಿರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ  ದೆಹಲಿ ಪ್ರವಾಸ ಮೊಟಕುಗೊಳಿಸಿ ನಿನ್ನೆ ರಾಜ್ಯಕ್ಕೆ ವಾಪಸ್ ಆಗಿದ್ದರು.


ಈ ಕಾರಣದಿಂದಾಗಿ ಶುಕ್ರವಾರ ನಡೆಯಬೇಕಿದ್ದ ಸಂಪುಟ ವಿಸ್ತರಣೆ ಮುಂದೂಡಿಕೆಯಾಗಿತ್ತು. ಇದರಿಂದಾಗಿ ಸಂಪುಟ ಸೇರ್ಪಡೆಯ ನಿರೀಕ್ಷೆಯಲ್ಲಿದ್ದ ಆಕಾಂಕ್ಷಿಗಳಿಗೂ ನಿರಾಸೆಯಾಗಿತ್ತು.