ಬೆಂಗಳೂರು: ಕರ್ನಾಟಕ ಲಲಿತಕಲಾ ಅಕಾಡೆಮಿಯು 52ನೇ ವಾರ್ಷಿಕ ಕಲಾ ಸ್ಪರ್ಧೆ ಹಾಗೂ ಕಲಾ ಪ್ರದರ್ಶನಕ್ಕೆ ಚಿತ್ರಕಲಾವಿದರಿಂದ ಅರ್ಜಿ ಆಹ್ವಾನಿಸಿದೆ. 


COMMERCIAL BREAK
SCROLL TO CONTINUE READING

ಒಟ್ಟು 10 ಕಲಾಕೃತಿಗಳ ಕಲಾವಿದರಿಗೆ ತಲಾ ₹25 ಸಾವಿರ ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕವನ್ನು ನೀಡಲಾಗುತ್ತದೆ. ಪ್ರವೇಶ ಶುಲ್ಕ ₹300 ನಗದು ರೂಪದಲ್ಲಿ ಅಥವಾ ಡಿಡಿ ಮೂಲಕ ರಿಜಿಸ್ಟ್ರಾರ್‌, ಕರ್ನಾಟಕ ಲಲಿತಕಲಾ ಅಕಾಡೆಮಿಗೆ ಪಾವತಿಸಬೇಕಾಗುತ್ತದೆ. 


ಇದನ್ನೂ ಓದಿ: ಶಿವಮೊಗ್ಗದಲ್ಲಿ ನಾಯಿ ಕಚ್ಚಿ ಮಹಿಳೆ ಸಾವು..!


ಭರ್ತಿ ಮಾಡಿದ ಅರ್ಜಿ ನಮೂನೆಯ ಜೊತೆಗೆ ಕಲಾಕೃತಿಯ ಛಾಯಾಚಿತ್ರ ಹಾಗೂ ದಾಖಲಾತಿಗಳನ್ನು ಸೆಪ್ಟೆಂಬರ್‌ 21ರ ಒಳಗೆ ಇ-ಮೇಲ್‌ ವಿಳಾಸ kla.karnataka@gmail.comಗೆ ಕಳುಹಿಸಬೇಕು. ರಿಜಿಸ್ಟ್ರಾರ್‌, ಕರ್ನಾಟಕ ಲಲಿತಕಲಾ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು - 560002 ಈ ವಿಳಾಸಕ್ಕೆ ನೇರವಾಗಿ ಅಥವಾ ಅಂಚೆಯ ಮೂಲಕ ಸಲ್ಲಿಸಬಹುದಾಗಿದೆ. 


ಲಕೋಟೆಯ ಮೇಲೆ 52ನೇ ವಾರ್ಷಿಕ ಕಲಾ ಪ್ರದರ್ಶನಕ್ಕಾಗಿ ಅರ್ಜಿ ಎಂದು ನಮೂದಿಸಿರಬೇಕು. ಹೆಚ್ಚಿನ ವಿವರಕ್ಕೆ ಅಧಿಕೃತ ವೆಬ್‌ಸೈಟ್‌ https://lalitkala.karnataka.gov.in/ ಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ 080 22480297 ಸಂಪರ್ಕಿಸಬಹುದು. 


ಇದನ್ನೂ ಓದಿ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2024


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.