ಬೆಂಗಳೂರು: ರಾಜ್ಯ ಸರ್ಕಾರ ಮಸ್ಕಿ ಹಾಗೂ ಬಸವಕಲ್ಯಾಣ ಉಪ ಚುನಾವಮೆಯನ್ನು ದೃಷ್ಠಿಯಲ್ಲಿ ಇಟ್ಟುಕೊಂಡು ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಿತ್ತು. ಇಂತಹ ಸರ್ಕಾರದ ನಡೆಯನ್ನು ಕನ್ನಡ ಪರ ಸಂಘಟನೆಗಳ ಮುಖಂಡರು ವಿರೋಧ ವ್ಯಕ್ತ ಪಡಿಸಿದ್ದರು. ಇದರ ಬೆನ್ನಲ್ಲಿಯೇ ಮರಾಠ ಪ್ರಾಧಿಕಾರ ರಚನೆ ವಿರೋಧಿಸಿ ಡಿಸೆಂಬರ್ 5ಕ್ಕೆ, ಕನ್ನಡಪರ ಸಂಘಟನೆಗಳಿಂದ ಕರ್ನಾಟಕ(Karnataka) ಬಂದ್ ಗೆ ಕರೆ ನೀಡಲಾಗಿದೆ.


COMMERCIAL BREAK
SCROLL TO CONTINUE READING

ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಮರಾಠ ಪ್ರಾಧಿಕಾರ ರಚನೆ ಮಾಡಿದ್ದನ್ನು ವಿರೋಧಿಸಿ, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ ಕ್ರಮವನ್ನು ವಿರೋಧಿಸಲಾಯಿತು.


ಡಿಸಿಎಂ ಕನಸು ನನಸು ಮಾಡಿದ ಸಿಎಂ: 'ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ' ಸ್ಥಾಪನೆಗೆ ಗ್ರೀನ್ ಸಿಗ್ನಲ್


ಇದೇ ವೇಳೆ ಮಾತನಾಡಿದಂತ ಪ್ರಾಧಿಕಾರ ವಾಪಾಸ್ ಪಡೆದುಕೊಳ್ಳಬೇಕು. ಇಲ್ಲವಾದಲ್ಲಿ ಡಿಸೆಂಬರ್ 5ರಂದು ಕರ್ನಾಟಕ ಬಂದ್ ನಡೆಸಲಾಗುತ್ತದೆ. ಎಲ್ಲಾ ಕನ್ನಡ ಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಅವರು ಕರೆ ನೀಡಿದರು.


ಒಬ್ಬ ದಲಿತ ಶಾಸಕನಿಗೆ ನಿಮ್ಮ ಪಕ್ಷದಲ್ಲಿ ಬೆಲೆ ಇಲ್ಲವೇ? ಡಿಕೆಶಿ v/s ಬಿಜೆಪಿ ಟ್ವಿಟರ್ ವಾರ್!