ಬೆಂಗಳೂರು: ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರನ ಬಲಿ ಪಡೆದ ಭ್ರಷ್ಟ 40% ಕಮಿಷನ್ ಬಿಜೆಪಿ ಸರ್ಕಾರದ ವಿರುದ್ಧ ಜನ ಜಾಗೃತಿ ಮೂಡಿಸಲು ನಾವು 5 ದಿನಗಳ ಕಾಲ ರಾಜ್ಯ ಪ್ರವಾಸ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ರಾಜ್ಯದ ಪ್ರತಿ ಜಿಲ್ಲೆಗೂ ನಮ್ಮ ಪಕ್ಷದ ನಾಯಕರ ನೇತೃತ್ವದಲ್ಲಿ ತಂಡಗಳಾಗಿ ತೆರಳಿ, ಜನರ ಜೀವ ಮತ್ತು ರಾಜ್ಯದ ಮಾನ ಕಾಪಾಡಲು ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವಂತೆ ಮನವಿ ಮಾಡುತ್ತೇವೆ. ನಾಳೆ ಬೆಳಿಗ್ಗೆ 10 ಗಂಟೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಘೇರಾವ್ ಹಾಕುತ್ತೇವೆ’ ಎಂದಿದ್ದಾರೆ.


ಕರ್ನಾಟಕದ 40% ನಲ್ಲಿ ಪ್ರಧಾನಿ ಮೋದಿಯವರೂ ಪಾಲು ಪಡೆಯುತ್ತಿದ್ದಾರಾ?: ಕಾಂಗ್ರೆಸ್


‘ಇದು ಕೇವಲ ಕಾಂಗ್ರೆಸ್ ಪಕ್ಷದ ರಾಜಕೀಯ ಪ್ರತಿಭಟನೆಯಾಗಬಾರದು. ಜನರ ಬೆವರ ಗಳಿಕೆಯ ತೆರಿಗೆ ಹಣವನ್ನು ಲೂಟಿ‌ಮಾಡುತ್ತಿರುವ ಮತ್ತು ರಾಷ್ಟಮಟ್ಟದಲ್ಲಿ ರಾಜ್ಯದ ಮಾನ ಹರಾಜು ಹಾಕುತ್ತಿರುವ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಯೊಬ್ಬ ಕನ್ನಡಿಗನೂ ಬೀದಿಗಿಳಿಯಬೇಕಾಗಿದೆ. ಸಚಿವ ಕೆ.ಎಸ್.ಈಶ್ವರಪ್ಪ ಮೇಲೆ ನಿನ್ನೆಯೇ ಎಫ್‍ಐಆರ್ ದಾಖಲಾಗಿದೆ. ಸಂತೋಷ್ ಪಾಟೀಲ್ ಆತ್ಮಹತ್ಯೆಗೂ ಮುನ್ನ ವಾಟ್ಸ್‍ಆ್ಯಪ್ ಮೂಲಕ ಕಳುಹಿಸಿರುವ ಡೆತ್ ನೋಟ್‍ನಲ್ಲಿ ತನ್ನ ಸಾವಿಗೆ ಸಚಿವ ಈಶ್ವರಪ್ಪ ಅವರೇ ನೇರ ಕಾರಣ ಎಂದು ಬರೆದಿದ್ದಾರೆ’ ಎಂದು ಹೇಳಿದ್ದಾರೆ.


ಸಂತೋಷ್ ಆತ್ಮಹತ್ಯೆ ಪ್ರಕರಣ 40% ಕಾಂಗ್ರೆಸ್ ಟೂಲ್ ಕಿಟ್‍ನ ಭಾಗ: ಬಿಜೆಪಿ


ಕಾಂಗ್ರೆಸ್ ನಿಯೋಗ ಇಂದು ರಾಜ್ಯಪಾಲರನ್ನು ಭೇಟಿಮಾಡಿ ಮನವಿ ಪತ್ರ ಕೊಟ್ಟಿದೆ. ರಾಜ್ಯಪಾಲರು ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಮತ್ತು ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸಲು ಬಿಜೆಪಿ ಸರ್ಕಾರಕ್ಕೆ ನಿರ್ದೇಶನ ನೀಡುತ್ತಾರೆಂಬ ಭರವಸೆ ನಮಗಿದೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.  


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.