ಬೆಂಗಳೂರು: ಎಸ್‍ಸಿ/ಎಸ್‍ಟಿ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ಮೆಟ್ರಿಕ್‍ಪೂರ್ವ ವಿದ್ಯಾರ್ಥಿಗಳ ವಿದ್ಯಾರ್ಥಿವೇತನವನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಎಸ್‍ಸಿ/ಎಸ್‍ಟಿ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ಮೆಟ್ರಿಕ್‍ಪೂರ್ವ ವಿದ್ಯಾರ್ಥಿಗಳ ವಿದ್ಯಾರ್ಥಿವೇತನವನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡನೀಯ. ಸರ್ಕಾರ ತನ್ನ ಈ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸುತ್ತೇನೆ.


ದಲಿತರು, ಆದಿವಾಸಿಗಳು, ಹಿಂದುಳಿದ ವರ್ಗಗಳು, ಮಹಿಳೆಯರು ಮತ್ತು ಅಲ್ಪಸಂಖ್ಯಾತರನ್ನು ತುಳಿದು ಆಳಬೇಕು ಎಂಬ ಬಿಜೆಪಿಯ ಅಜೆಂಡ ನಿಧಾನಕ್ಕೆ ಕಾರ್ಯಗತವಾಗುತ್ತಿದೆ. ನಾನು ಕಳೆದ ಕೆಲವು ವರ್ಷಗಳಿಂದ ಗಮನಿಸಿದಂತೆ ಮೋದಿಯವರ ಬಾಯಲ್ಲಿ ಹೇಳಿಸಿದ ಘೋಷಣೆಗಳಿಗೆ ವಿರುದ್ಧ ದಿಕ್ಕಿನಲ್ಲಿ ಸತ್ಯ ಹುದುಗಿರುತ್ತದೆ.


ಇದನ್ನೂ ಓದಿ : Shocking: ಶಾಲಾ ಮಕ್ಕಳ ಬ್ಯಾಗ್‌ನಲ್ಲಿ ಕಾಂಡೋಮ್ & ಗರ್ಭ ನಿರೋಧಕ ಮಾತ್ರೆಗಳು ಪತ್ತೆ!


ಬಿಜೆಪಿಯವರು ಸಬ್ ಕಾ ವಿಕಾಸ್ ಎಂದರೆ ಅದು ದಲಿತ, ಹಿಂದುಳಿದವರು, ಮಹಿಳೆಯರು, ಅಲ್ಪಸಂಖ್ಯಾತರ ದಮನ ಎಂದು ಅರ್ಥ. ಬಹುಸಂಖ್ಯಾತರ ವಿನಾಶದ ಯೋಜನೆಗಳನ್ನು ರೂಪಿಸುವಾಗ ಸರ್ವರ ವಿಕಾಸ ಎಂದು ಸುಳ್ಳು ಹೇಳುತ್ತಾರೆ.


ನಮ್ಮಲ್ಲಿ ಹೈಸ್ಕೂಲಿಗೆ ದಾಖಲಾಗುವವರ ಪ್ರಮಾಣ ಶೇ.75 ರಷ್ಟಿದೆ. ಅಂದರೆ ಶೇ.25 ರಷ್ಟು ಮಕ್ಕಳು ಶಾಲಾಶಿಕ್ಷಣದಿಂದ ಹೊರಗಿದ್ದಾರೆ ಎಂದರ್ಥ. ಮಕ್ಕಳಿಗೆ ಬಿಸಿಯೂಟ, ಸಮವಸ್ತ್ರ, ಶೂ, ಕೆನೆ ಭರಿತ ಹಾಲು, ಸೈಕಲ್ ಹೀಗೆ ವಿವಿಧ ಸೌಲಭ್ಯ ನೀಡಿ ಶಾಲೆಗೆ ಕರೆತಂದು ವಿದ್ಯಾಭ್ಯಾಸ ನೀಡಿ ದಮನಿತರ ಮಕ್ಕಳು ಉದ್ಧಾರವಾಗಲಿ ಎಂಬ ಉದ್ದೇಶದಿಂದ ಈ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲಾಗಿತ್ತು.


ಜೊತೆಯಲ್ಲಿ ಮಕ್ಕಳಿಗೆ ವಿದ್ಯಾರ್ಥಿ ವೇತನದ ವ್ಯವಸ್ಥೆಯೂ ಇತ್ತು.ಅತಿಥಿ ಉಪನ್ಯಾಸಕರಿಗೆ ಅಭದ್ರತೆಯ ಆತಂಕ ಬೇಡ: ಸಚಿವ ಅಶ್ವತ್ಥ ನಾರಾಯಣ


ಏಕಾ ಏಕಿ ವಿದ್ಯಾರ್ಥಿವೇತನ ನಿಲ್ಲಿಸುವುದರಿಂದ ಶಾಲೆಗಳ ದಾಖಲಾತಿ ಪ್ರಮಾಣ ಕಡಿಮೆಯಾಗುತ್ತದೆ. ಪೋಷಕರ ಮೇಲೆ ಅವಲಂಬಿತರಾಗದೆ ವಿದ್ಯಾರ್ಥಿವೇತನದಿಂದ ಅಗತ್ಯ ಶೈಕ್ಷಣಿಕ ಸಾಮಗ್ರಿಗಳನ್ನು ಖರೀದಿಸುತ್ತಿದ್ದ ಮಕ್ಕಳು ಈಗ ಪೋಷಕರ ಮೇಲೆ ಅವಲಂಬಿತರಾಗುವ ಅನಿವಾರ್ಯತೆಯನ್ನು ಸೃಷ್ಟಿಸುತ್ತಿದೆ. ಈಗಾಗಲೇ ಮೋದಿ ಅವರ ಸರ್ಕಾರ ಪೆನ್ನು, ಪೆನ್ಸಿಲ್, ಬರವಣಿಗೆ ಪುಸ್ತಕ, ಡ್ರಾಯಿಂಗ್ ಶೀಟ್ ಸೇರಿ ಎಲ್ಲದರ ಮೇಲೂ ಜಿಎಸ್‍ಟಿ ವಿಧಿಸಿದೆ.


ಒಂದು ಕಡೆ ಕೇಂದ್ರ ಸರ್ಕಾರ ಕೇವಲ ಶೇ.3 ರಷ್ಟು ಜನಸಂಖ್ಯೆ ಹೊಂದಿರುವ ಜಾತಿ ಸಮುದಾಯದ ಮಂದಿಯ ವಾರ್ಷಿಕ ಆದಾಯ 8 ಲಕ್ಷ ರೂ ಇದ್ದರೂ ಅವರನ್ನು ಆರ್ಥಿಕವಾಗಿ ಹಿಂದುಳಿದವರು ಎಂದು ತೀರ್ಮಾನಿಸಿ ಶೇ.10 ರಷ್ಟು ಮೀಸಲಾತಿ ಕೊಡಲು ಸಂಭ್ರಮಿಸುತ್ತಿದೆ. ಮತ್ತೊಂದು ಕಡೆ ವಾರ್ಷಿಕ 2 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವ ಶೇ.95 ರಷ್ಟು ಜನಸಂಖ್ಯೆ ಇರುವ ಜನ ಸಮುದಾಯದ ಬಡ ಮಕ್ಕಳ ವಿದ್ಯಾರ್ಥಿವೇತನವನ್ನು ನಿಲ್ಲಿಸಿಬಿಟ್ಟಿದೆ.


ಆದರೆ, ಈ ದೇಶದ ಶೇ.50ರಷ್ಟಿರುವ ರೈತ ಕುಟುಂಬಗಳ ಸರಾಸರಿ ಆದಾಯ ವಾರ್ಷಿಕವಾಗಿ 1 ಲಕ್ಷ ರೂಗಳಿಗಿಂತ ಕಡಿಮೆ ಎಂದು ಮೋದಿ ಸರ್ಕಾರದ ದಾಖಲೆಗಳೆ ಹೇಳುತ್ತವೆ. ಇನ್ನು ಕೂಲಿ ಕಾರ್ಮಿಕ ಸಮುದಾಯದ ಆದಾಯ ಕೇಳುವುದೇ ಬೇಡ. ಹೀಗಿದ್ದರೂ ವಾರ್ಷಿಕ 8 ಲಕ್ಷ ಆದಾಯ ಇರುವ ಶೇ.3 ಜನಸಂಖ್ಯೆಯ ಮಂದಿ ಮಾತ್ರ ಮೋದಿ ಮತ್ತು ಬಿಜೆಪಿಗರ ಕಣ್ಣಿಗೆ ಬಡವರಾಗಿ ಕಾಣುತ್ತಿದ್ದಾರೆ.


ಸಾಲದ್ದಕ್ಕೆ ಇ.ಡಬ್ಲ್ಯು.ಎಸ್ ಕೋಟಾದ ಮಕ್ಕಳಿಗೆ ಮಾತ್ರ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಕಂಪನಿಗಳೂ ಸೇರಿದಂತೆ ಹಲವು ಖಾಸಗಿ ಕಂಪನಿಗಳು ಸಿಎಸ್‍ಆರ್ ನಿಧಿಯಡಿ ಹತ್ತಾರು ಕೋಟಿ ದೇಣಿಗೆ ನೀಡುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಹೀಗಾಗಿ ಬಿಜೆಪಿಗೆ ಕೇವಲ ಶೇ.3 ರಷ್ಟು ಜನಸಂಖ್ಯೆ ಇರುವ ಜನರ ಬಗ್ಗೆ ಮಾತ್ರ ಕಾಳಜಿ.


ಎರಡು ವರ್ಷಗಳಿಂದ ವಿದ್ಯಾರ್ಥಿವೇತನ ನೀಡದೆ ಸತಾಯಿಸುತ್ತಿದ್ದ ಸರ್ಕಾರ ಈಗ ರದ್ದು ಮಾಡಿದೆ. ರಾಜ್ಯದಲ್ಲಿ 15 ಜಿಲ್ಲೆಗಳ ಮಕ್ಕಳಿಗೆ ಸಮವಸ್ತ್ರ ಕೊಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಕಳಪೆ ಶೂ ಸಾಕ್ಸ್ ವಿತರಿಸಿದೆ. ಮಕ್ಕಳಿಂದಲೇ ತಿಂಗಳಿಗೆ 100ರೂ ವಸೂಲಿ ಮಾಡುವ ಹುನ್ನಾರಕ್ಕೂ ಕೈ ಹಾಕಿದ್ದ ರಾಜ್ಯ ಸರ್ಕಾರ ಸಾರ್ವಜನಿಕರ ಛೀಮಾರಿ ಬಳಿಕ ತಾತ್ಕಾಲಿಕವಾಗಿ ನಿಲ್ಲಿಸಿದೆ.


ಸೈಕಲ್‍ಗಳನ್ನು ವಿತರಿಸದ ಕಾರಣದಿಂದ 10 ಕಿಮೀ ದೂರದವರೆಗೂ ನಡೆದು ಬರುವ ಕೊಡಗು-ಮಲೆನಾಡು ಸೇರಿದಂತೆ ಸಾವಿರಾರು ವಿದ್ಯಾರ್ಥಿಗಳು ಅದರಲ್ಲೂ ಹೆಚ್ಚಿನ ಪ್ರಮಾಣದ ಹೆಣ್ಣು ಮಕ್ಕಳು ಶಿಕ್ಷಣ ಮೊಟಕುಗೊಳಿಸಿರುವ ಬಗ್ಗೆ ಸಮೀಕ್ಷೆಗಳು ಬರುತ್ತಿವೆ.


ಇದನ್ನೂ ಓದಿ- Betel Benefits: ಅಲ್ಸರ್ ವಿರುದ್ಧ ರಾಮಬಾಣ ಔಷಧಿ ವಿಳ್ಯದೆಲೆ, ರಕ್ತದಲ್ಲಿನ ಸಕ್ಕರೆಗೂ ಕಡಿವಾಣ


ಆದ್ದರಿಂದ ಮೋದಿಯವರ ಸರ್ಕಾರ ವಿದ್ಯಾರ್ಥಿ ವೇತನವನ್ನು ಸ್ಥಗಿತಗೊಳಿಸದೆ ಅದನ್ನು ಇನ್ನಷ್ಟು ಹೆಚ್ಚಿಸಬೇಕು. ಮೋದಿ ಸರ್ಕಾರದ ಈ ಶೂದ್ರ ವಿರೋಧಿ ನಿಲುವನ್ನು ರಾಜ್ಯ ಸರ್ಕಾರ ಹಾಗೂ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರುಗಳು, ಮುಖ್ಯವಾಗಿ ಕೇಂದ್ರದ ಸಮಾಜ ಕಲ್ಯಾಣ ಸಚಿವ ಶ್ರೀ ನಾರಾಯಣಸ್ವಾಮಿಯವರು ದಿಟ್ಟವಾದ ಧ್ವನಿ ಎತ್ತಿ ವಿದ್ಯಾರ್ಥಿ ವಿರೋಧಿ ನಿಲುವು ತೆಗೆದುಕೊಳ್ಳವುದಿಲ್ಲ ಎಂದು ಘೋಷಿಸಬೇಕು. ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ಈ ನಿರ್ಧಾರ ಹಿಂಪಡೆಯುವಂತೆ ಆಗ್ರಹಿಸಬೇಕೆಂದು ಒತ್ತಾಯಿಸುತ್ತೇನೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.