ಟೋಲ್ ಸಿಬ್ಬಂದಿಯಿಂದ ಕಾರು ಚಾಲಕನ ಮೇಲೆ ಹಲ್ಲೆ
ಕೇರಳ ಗಡಿಭಾಗದ ತಲಪಾಡಿ ಟೋಲ್ ಗೇಟ್ ನಲ್ಲಿ ಘಟನೆ ನಡೆದಿದ್ದು ಕರ್ನಾಟಕ -ಕೇರಳ ಗಡಿಭಾಗ ತಲಪಾಡಿಯಲ್ಲಿರುವ ಕೊನೆಯ ಟೋಲ್ ಗೇಟ್ ಇದಾಗಿದೆ.ಹಲ್ಲೆ ಮಾಡುವ ದೃಶ್ಯವನ್ನು ವಾಹನ ಸವಾರರು ಸೆರೆಹಿಡಿದಿದ್ದು ಕಾರು ಚಾಲಕರು ಕೇರಳ ಮೂಲದವರೆಂದು ತಿಳಿದುಬಂದಿದೆ.
ಮಂಗಳೂರು: ಟೋಲ್ ಸಿಬ್ಬಂದಿಯಿಂದ ಕಾರು ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾದ ಘಟನೆ ಮಂಗಳೂರಿನ ತಲಪಾಡಿ ಟೋಲ್ ಪ್ಲಾಜಾದಲ್ಲಿ ನಡೆದಿದೆ ಎನ್ನಲಾಗಿದ್ದು ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತ ವೀಡಿಯೋ ವೈರಲ್ ಆಗಿದೆ.
ಇದನ್ನೂ ಓದಿ: ಕರ್ನಾಟಕ ದರ್ಶನ ಅಧ್ಯಯನ ಪ್ರವಾಸ ಪುನರಾರಂಭ
ಕೇರಳ ಗಡಿಭಾಗದ ತಲಪಾಡಿ ಟೋಲ್ ಗೇಟ್ ನಲ್ಲಿ ಘಟನೆ ನಡೆದಿದ್ದು ಕರ್ನಾಟಕ -ಕೇರಳ ಗಡಿಭಾಗ ತಲಪಾಡಿಯಲ್ಲಿರುವ ಕೊನೆಯ ಟೋಲ್ ಗೇಟ್ ಇದಾಗಿದೆ.ಹಲ್ಲೆ ಮಾಡುವ ದೃಶ್ಯವನ್ನು ವಾಹನ ಸವಾರರು ಸೆರೆಹಿಡಿದಿದ್ದು ಕಾರು ಚಾಲಕರು ಕೇರಳ ಮೂಲದವರೆಂದು ತಿಳಿದುಬಂದಿದೆ.
ಇದನ್ನೂ ಓದಿ: ಮೇಕೆದಾಟು ಯೋಜನೆಗಾಗಿ “ದೆಹಲಿ ಚಲೋ”: ಜಂತರ್ ಮಂಥರ್ ನಲ್ಲಿ ಕನ್ನಡಿಗರ ಪ್ರತಿಭಟನೆ
ಕಾರ್ ನಲ್ಲಿದ ಕುಟುಂಬಸ್ಥರ ಮುಂದೇನೇ ಟೋಲ್ ಸಿಬ್ಬಂದಿ ಹಲ್ಲೆ ನಡೆಸಿದ್ದುಇವರ ವರ್ತನೆಗೆ ವಾಹನ ಸವಾರರು ಹಾಗೂ ಸಾರ್ವಜನಿಕರು ಟೋಲ್ ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಪರಸ್ಪರ ಹಲ್ಲೆ ನಡೆದಿದ್ದು ಕಾರು ಚಾಲಕನನ್ನ ಹಿಡಿದು ಸಿಬ್ಬಂದಿಗಳು ಥಳಿಸಿದ್ದಾರೆ.ಈ ಘಟನೆ ಉಳ್ಳಾಲ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೀಡೀಯೋ ವೈರಲ್ ಆಗಿದೆ. ಈ ಘಟನೆ ಕುರಿತು ಈ ವರೆಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ವರದಿಯಾಗಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.