ಅಪಘಾತದಲ್ಲಿ ಗಾಯಗೊಂಡ ಅಪರಿಚಿತನಿಗೆ ಸಂಚಾರಿ ಪೊಲೀಸರ ಆರೈಕೆ! ಮಾನವೀಯತೆ ಅಂದ್ರೆ ಇದೆ ಅಲ್ವೇ..?
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಗೆ ಸಂಚಾರಿ ಪೊಲೀಸರ (Traffic Police) ಆರೈಕೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಬೆಂಗಳೂರು: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಗೆ ಸಂಚಾರಿ ಪೊಲೀಸರ (Traffic Police) ಆರೈಕೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಉಪ್ಪಾರಪೇಟೆ ಸಂಚಾರಿ ಪೊಲೀಸರು ನಿಮಾನ್ಸ್ (Nimhans) ಆಸ್ಪತ್ರೆಯಲ್ಲಿ ಆಪರೇಷನ್ ಮಾಡಿಸಿದ್ದಾರೆ. ಅಲ್ಲದೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗೆ ಮೂರು ಪಾಳಿಯಂತೆ ಸಿಬ್ಬಂದಿ ಹೋಗಿ ಆರೈಕೆ ಮಾಡುತ್ತಿದ್ದಾರೆ.
ಇದನ್ನೂ ಓದಿ: ಶಿಕ್ಷಣ ವ್ಯವಸ್ಥೆಯಲ್ಲಿ ಮತೀಯವಾದ ತುರುಕಲು ಸಿದ್ದರಾಮಯ್ಯ ಪ್ರಯತ್ನ: ಬಿಜೆಪಿ ಆರೋಪ
ಫೆಬ್ರವರಿ 2ನೇ ತಾರೀಖು ಬೆಳಗ್ಗೆ ಉಪ್ಪಾರಪೇಟೆ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿಗೆ ಲಾರಿ ಡಿಕ್ಕಿ (Road Accident) ಹೊಡೆದಿದೆ. ರಸ್ತೆ ದಾಟುವಾಗ ಅಪಘಾತ ಸಂಭವಿಸಿದ್ದು, ಘಟನೆ ಬಳಿಕ ಚಾಲಕ ಪರಾರಿಯಾಗಿದ್ದಾನೆ.
ತಲೆಗೆ ತೀವ್ರ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಅಪರಿಚಿತ ವ್ಯಕ್ತಿಯನ್ನು ಪೊಲೀಸರು, ಕೂಡಲೇ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುವಿನ ಹೆಸರು ಸಹ ತಿಳಿಡು ಬಂದಿಲ್ಲ. ಯಾವುದೇ ಐಡಿ ಕಾರ್ಡ್ ಸಹ ಹೊಂದಿರದ ಕಾರಣ, ಕುಟುಂಮಬಸ್ಥರ ಮಾಹಿತಿ ಪಡೆಯಲು ಹರಸಾಹಸ ಪಡುವಂತಾಗಿದೆ.
ಇದನ್ನೂ ಓದಿ: ಪುನೀತ್ ಅಭಿಮಾನಿಗಳಿಗೆ ಗುಡ್ ನ್ಯೂಸ್.. 'ಜೇಮ್ಸ್' ಅಧಿಕೃತ ಟೀಸರ್ ಬಿಡುಗಡೆ ಡೇಟ್ ಫಿಕ್ಸ್
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ವ್ಯಕ್ತಿಗೆ ಆಪರೇಷನ್ ಮಾಡಿಸಿ ಮೂರು ಪಾಳಿಯಂತೆ ಸಂಚಾರಿ ಪೊಲೀಸರೇ ಆರೈಕೆ ಮಾಡುತ್ತಿದ್ದಾರೆ. ಸಿಬ್ಬಂದಿಯ ಈ ಕಾರ್ಯಕ್ಕೆ ಹಿರಿಯ ಅಧಿಕಾರಿಗಳ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.