CAREER: ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ : ವಿವಿಧ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ
ಕೊಪ್ಪಳ ತಾಲ್ಲೂಕಿನ ದದೇಗಲ್‌ನ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಿಂದ ಉದ್ಯಮಶೀಲತೆ, ಕೌಶಲ್ಯ ಅಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಂಯುಕ್ತಾಶ್ರದಲ್ಲಿ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ ಹಾಗೂ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಅಡಿಯಲ್ಲಿ ವಿವಿಧ ಕೋರ್ಸಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು: ಕೊಪ್ಪಳ ತಾಲ್ಲೂಕಿನ ದದೇಗಲ್‌ನ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಿಂದ ಉದ್ಯಮಶೀಲತೆ, ಕೌಶಲ್ಯ ಅಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಂಯುಕ್ತಾಶ್ರದಲ್ಲಿ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ ಹಾಗೂ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಅಡಿಯಲ್ಲಿ ವಿವಿಧ ಕೋರ್ಸಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಡಾ.ಸೋಮಶೇಖರ ಇಮ್ರಾಪೂರಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ
ಟರ್ನರ್, ಮಿಲ್ಲರ್, ಗ್ರೆಂಡರ್, ಸಿಎನ್‌ಸಿ, ಟೂಲ್ ರೂಮ್ ಮೆಕ್ಯಾನಿಸ್ಟ್, ಡಿಸೈನ್ ಸಾಫ್ಟ್ವೇರ್, (ಮೆಕ್ಯಾನಿಕಲ್) ಕೊರ್ಸಗಳು ಲಭ್ಯವಿದ್ದು, ತರಬೇತಿಗಾಗಿ ಎಸ್.ಎಸ್.ಎಲ್.ಸಿ, ಐಟಿಐ, ಡಿಪ್ಲೋಮ, ಬಿಇ ವಿದ್ಯಾರ್ಹತೆ ಹೊಂದಿರಬೇಕು. ಈ ಕೋರ್ಸ್ ಮುಗಿಸಿದ ಪ್ರತಿಯೊಬ್ಬರಿಗೂ ಪ್ರಮಾಣಪತ್ರ ನೀಡಲಾಗುವದರ ಜೊತೆಗೆ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿಲ್ಲಿ ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಶಿಷ್ಯವೇತನ ನೀಡಲಾಗುವದು.
ಇದನ್ನೂ ಓದಿ: Basavaraja Bommai : ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ : ಸಿಎಂ ಬೊಮ್ಮಾಯಿ
ಅಭ್ಯರ್ಥಿಗಳು ಅರ್ಜಿಯನ್ನು ಪ್ರತಿ ತಿಂಗಳ ಕೊನೆಯ ವಾರದೊಳಾಗಾಗಿ ಕಾಲೇಜಿನ ಕಾರ್ಯಾಲಯಕ್ಕೆ ಅಥವಾ ಪ್ರಾಂಶುಪಾಲರು ಸರ್ಕಾರಿ ಉಪಕರಣಗಾರ ತರಬೇತಿ ಕೇಂದ್ರ ಗದಗ ರೋಡ್ ದದೇಗಲ್ ಕೊಪ್ಪಳ, ಇವರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರಾದ ಸುರೇಶ್ ರಾಥೋಡ್ ಮೊ. 9902556110/ 9945846240 ಕ್ಕೆ ಸಂಪರ್ಕಿಸಬಹುದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.