Career: ಅಮೃತ್ ಮುನ್ನಡೆ ಯೋಜನೆಯಡಿ ಉಚಿತ ಕೋರ್ಸ್ : ಅರ್ಜಿ ಆಹ್ವಾನ
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ವತಿಯಿಂದ ಅಮೃತ್ ಮುನ್ನಡೆ ಎಂಬ ಹೊಸ ಯೋಜನೆಯ ಮುಖಾಂತರ ಉಚಿತ ವಿವಿಧ ಕೌಶಲ್ಯ ಕೋರ್ಸ್ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು : ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ವತಿಯಿಂದ ಅಮೃತ್ ಮುನ್ನಡೆ ಎಂಬ ಹೊಸ ಯೋಜನೆಯ ಮುಖಾಂತರ ಉಚಿತ ವಿವಿಧ ಕೌಶಲ್ಯ ಕೋರ್ಸ್ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ ಜಿಲ್ಲೆಯ ಯುವ ಜನತೆಗೆ ಕೌಶಲ್ಯ ಅಭಿವೃದ್ಧಿಪಡಿಸಿ ಅವರನ್ನು ಉದ್ಯೋಗವಂತರನ್ನಾಗಿ ಮಾಡಲು ಕೊಪ್ಪಳ ನಗರಕ್ಕೆ ಸಮೀಪವಿರುವ ತಾಲ್ಲೂಕಿನ ದದೇಗಲ್ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಅಮೃತ್ ಮುನ್ನಡೆ ಎಂಬ ಹೊಸ ಯೋಜನೆಯ ಮುಖಾಂತರ ಹಿಂದುಳಿದ ವರ್ಗಕ್ಕೆ ಸೇರಿರುವ ಅಭ್ಯರ್ಥಿಗಳಿಗೆ ಉಚಿತ ವಿವಿಧ ಕೌಶಲ್ಯ ಕೋರ್ಸ್ಗಳಿಗೆ ತರಬೇತಿ ನೀಡಲಾಗುತ್ತಿದೆ.
ಇದನ್ನೂ ಓದಿ: "ದುಡ್ಡು ಹಾಳಾದ್ರೆ ಹೇಗೋ ಸಂಪಾದಿಸಬಹುದು, ಆದರೆ ವ್ಯಕ್ತಿತ್ವವನ್ನು ಹೇಗೆ ಸಂಪಾದಿಸೋದು?" ಅದಿತಿ ಹೀಗೆ ಹೇಳಿದ್ದೇಕೆ?
ಎಸ್.ಎಸ್.ಎಲ್.ಸಿ (SSLC) ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ಸಿಎನ್‌ಸಿ ಮಿಲ್ಲಿಂಗ್ ಮಷಿನ್ ಆಪರೇಟರ್, ಸಿಎನ್‌ಸಿ ಟರ್ನಿಂಗ್ ಮಷಿನ್ ಆಪರೇಟರ್ ಮತ್ತು ಮಿಲ್ಲಿಂಗ್ ಮಷಿನ್ ಆಪರೇಟರ್ ಕೋರ್ಸ್ಗಳು ಮತ್ತು ಐಟಿಐ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ಸಿಎನ್‌ಸಿ ಪ್ರೋಗ್ರಾಮಿಂಗ್ & ಅಪರೇಷನ್ ಕೋರ್ಸ್ ಹಾಗೂ ಐಟಿಐ, ಡಿಪ್ಲೋಮಾ, ಬಿಇ ವಿದ್ಯಾಭ್ಯಾಸ ಹೊಂದಿದ ಅಭ್ಯರ್ಥಿಗಳಿಗೆ ಕ್ಯಾಮ್ & ಕ್ಯಾಡ್ ಕೋರ್ಸ್ಗಳು ಲಭ್ಯವಿದ್ದು, 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ‘ಅಧಿಕಾರವಿಲ್ಲದೆ ನಿರುದ್ಯೋಗಿಯಾಗಿರುವವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?’
ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಗದಗ ರಸ್ತೆ, ದದೇಗಲ್ ಗ್ರಾಮ ಕೊಪ್ಪಳ, ಮೊ.ಸಂ. 9902556110 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.