Career Updates: ಜೆಎಸ್‍ಎಸ್ ಶಾಲೆ ಹಾಗೂ ಉಚಿತ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕನ್ನಡ ಮಾಧ್ಯಮಕ್ಕೆ 1 ರಿಂದ 8ನೇ ತರಗತಿವರೆಗೆ ಮತ್ತು ಇಂಗ್ಲೀಷ್ ಮಾಧ್ಯಮಕ್ಕೆ 1, 5 ಹಾಗೂ 8ನೇ ತರಗತಿಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶವಿದೆ. ಗ್ರಾಮಾಂತರ ಪ್ರದೇಶದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಬಾಲಕ ಹಾಗೂ ಬಾಲಕಿಯರಿಗೆ ಪ್ರವೇಶ ನೀಡಲಾಗುವುದು.

Written by - Manjunath N | Last Updated : Mar 28, 2024, 11:40 PM IST
  • ಕನ್ನಡ ಮಾಧ್ಯಮಕ್ಕೆ 1 ರಿಂದ 8ನೇ ತರಗತಿವರೆಗೆ ಮತ್ತು ಇಂಗ್ಲೀಷ್ ಮಾಧ್ಯಮಕ್ಕೆ 1, 5 ಹಾಗೂ 8ನೇ ತರಗತಿಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶವಿದೆ.
  • ಗ್ರಾಮಾಂತರ ಪ್ರದೇಶದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಬಾಲಕ ಹಾಗೂ ಬಾಲಕಿಯರಿಗೆ ಪ್ರವೇಶ ನೀಡಲಾಗುವುದು
  • ಈ ವಿಳಾಸಕ್ಕೆ ಕಳುಹಿಸಿ ಪಡೆಯಬಹುದು. ಕ್ಯೂ.ಆರ್. ಕೋಡ್ ಮೂಲಕವು ಅರ್ಜಿಗಳನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದು
Career Updates: ಜೆಎಸ್‍ಎಸ್ ಶಾಲೆ ಹಾಗೂ ಉಚಿತ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಅರ್ಜಿ ಆಹ್ವಾನ title=

ಮೈಸೂರು: ಸುತ್ತೂರು ಶ್ರೀಕ್ಷೇತ್ರದ ಜೆಎಸ್‍ಎಸ್ ಶಾಲೆ ಹಾಗೂ ಉಚಿತ ವಿದ್ಯಾರ್ಥಿ ನಿಲಯದ 2024-25ನೇ ಸಾಲಿನ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕನ್ನಡ ಮಾಧ್ಯಮಕ್ಕೆ 1 ರಿಂದ 8ನೇ ತರಗತಿವರೆಗೆ ಮತ್ತು ಇಂಗ್ಲೀಷ್ ಮಾಧ್ಯಮಕ್ಕೆ 1, 5 ಹಾಗೂ 8ನೇ ತರಗತಿಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶವಿದೆ. ಗ್ರಾಮಾಂತರ ಪ್ರದೇಶದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಬಾಲಕ ಹಾಗೂ ಬಾಲಕಿಯರಿಗೆ ಪ್ರವೇಶ ನೀಡಲಾಗುವುದು.

ಅರ್ಜಿಯನ್ನು ಶಾಲಾ ಕಚೇರಿಯಲ್ಲಿ ಖುದ್ದಾಗಿ ಪಡೆಯಬಹುದು ಅಥವಾ www.jssschoolsuttur.org ಹಾಗೂ www.jssonline.org ವೆಬ್‍ಸೈಟ್‍ನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದು. ದೂರವಾಣಿಯಲ್ಲಿ ಸಂಪರ್ಕಿಸಿದರೆ ವಾಟ್ಸ್‍ಆಪ್ ಮೂಲಕವೂ ಅರ್ಜಿ ನಮೂನೆಯನ್ನು ಕಳುಹಿಸಿಕೊಡಲಾಗುವುದು.

ಇದನ್ನೂ ಓದಿ: ಕಂಠಪೂರ್ತಿ ಕುಡಿದು ಕಾರು ಚಲಾಯಿಸಿದ ಯುವತಿ

ಅಂಚೆ ಮುಖಾಂತರ ಅರ್ಜಿ ಪಡೆಯಲು ಇಚ್ಛಿಸುವವರು, ವಿದ್ಯಾರ್ಥಿಯು ಪ್ರವೇಶ ಬಯಸುವ ತರಗತಿಯ ವಿವರ ಹಾಗೂ ಸ್ವ-ವಿಳಾಸವುಳ್ಳ 5 ರೂ.ಗಳ ಪೋಸ್ಟಲ್ ಸ್ಟ್ಯಾಂಪ್ ಹಚ್ಚಿದ ಲಕೋಟೆಯನ್ನು ಆಡಳಿತಾಧಿಕಾರಿಗಳು, ಜೆಎಸ್‍ಎಸ್ ಸಂಸ್ಥೆಗಳು, ಸುತ್ತೂರು-571129, ನಂಜನಗೂಡು ತಾಲ್ಲೂಕು, ಮೈಸೂರು ಜಿಲ್ಲೆ. ಈ ವಿಳಾಸಕ್ಕೆ ಕಳುಹಿಸಿ ಪಡೆಯಬಹುದು. ಕ್ಯೂ.ಆರ್. ಕೋಡ್ ಮೂಲಕವು ಅರ್ಜಿಗಳನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದು.May be an image of Monticello

ಭರ್ತಿ ಮಾಡಿದ ಅರ್ಜಿಗಳನ್ನು ಮೇ 15ರ ಒಳಗಾಗಿ ಸಲ್ಲಿಸಬೇಕು.

ಇದನ್ನೂ ಓದಿ: ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆಲ್ಲಿಸಲು ಪ್ಲ್ಯಾನ್

ಭರ್ತಿ ಮಾಡಿದ ಅರ್ಜಿಯ ಜೊತೆಗೆ ಹಿಂದಿನ ತರಗತಿಯ ಅಂಕಪಟ್ಟಿ, ಭಾವಚಿತ್ರ, ವಿದ್ಯಾರ್ಥಿ ಮತ್ತು ಪೋಷಕರ ಆಧಾರ್‍ಕಾರ್ಡ್, ರೇಷನ್‍ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಅಂಚೆ ಮುಖಾಂತರ ಆಡಳಿತಾಧಿಕಾರಿಗಳು, ಜೆಎಸ್‍ಎಸ್ ಸಂಸ್ಥೆಗಳು, ಸುತ್ತೂರು-571129, ನಂಜನಗೂಡು ತಾಲ್ಲೂಕು, ಮೈಸೂರು ಜಿಲ್ಲೆ ಈ ವಿಳಾಸಕ್ಕೆ ಕಳುಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮೊ.7411486938 ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ದೂ.08221-232054, ಪ್ರೌಢಶಾಲೆಯ ದೂ.08221-232653, ಬಸವೇಶ್ವರ ವಿದ್ಯಾರ್ಥಿನಿಲಯದ ದೂ.08221-232332, ಸಂಯೋಜನಾಧಿಕಾರಿಗಳ ಕಚೇರಿಯ ದೂ.08221-232217 ಗೆ ಸಂಪರ್ಕಿಸಬಹುದು ಎಂದು ಜೆಎಸ್‍ಎಸ್ ಶಾಲೆಯ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News