ಡಿಕೆಶಿ ವಿರುದ್ಧದ ಪ್ರಕರಣ ರಾಜಕೀಯ ಪ್ರೇರಿತ: ಲಕ್ಷ್ಮೀ ಹೆಬ್ಬಾಳಕರ್

Lakshmi Hebbalkar : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಅಂದಿನ ಸರ್ಕಾರ ಸೇಡಿನ ರಾಜಕಾರಣ ಮಾಡಿ, ಅವರ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಿತ್ತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.   

Written by - Chetana Devarmani | Last Updated : Nov 24, 2023, 03:44 PM IST
  • ಅಂದಿನ ಸರ್ಕಾರ ಸೇಡಿನ ರಾಜಕಾರಣ ಮಾಡಿದೆ
  • ಡಿಕೆಶಿ ವಿರುದ್ಧದ ಪ್ರಕರಣ ರಾಜಕೀಯ ಪ್ರೇರಿತ
  • ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ
ಡಿಕೆಶಿ ವಿರುದ್ಧದ ಪ್ರಕರಣ ರಾಜಕೀಯ ಪ್ರೇರಿತ: ಲಕ್ಷ್ಮೀ ಹೆಬ್ಬಾಳಕರ್ title=

ಉಡುಪಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಅಂದಿನ ಸರ್ಕಾರ ಸೇಡಿನ ರಾಜಕಾರಣ ಮಾಡಿ, ಅವರ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಿತ್ತು. ಹಾಗಾಗಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿಕೆ ಶಿವಕುಮಾರ್ ವಿರುದ್ಧದ ಹಿಂದಿನ ಸರ್ಕಾರ ಹೊರಡಿಸಿದ್ದ ಆದೇಶವನ್ನು ವಾಪಸ್ ಪಡೆಯಲು ನಿರ್ಧಾರ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. 

ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದಿನ ಸ್ಪೀಕರ್ ಅವರ ಒಪ್ಪಿಗೆ ಹಾಗೂ ಅಕ್ಟೋಕೇಟ್ ಜನರಲ್ ಅವರಿಂದ ಮಾಹಿತಿ ಪಡೆಯದೆ ಅಂದಿನ ಸಿಎಂ ಮೌಕಿಕವಾಗಿ ಡಿಕೆಶಿ ಅವರ ವಿರುದ್ಧ ಆದೇಶ ನೀಡಿದ್ದರು. ಇದನೆಲ್ಲಾ ನೋಡಿದರೆ ಇದು ರಾಜಕೀಯ ಪ್ರೇರಿತ ಎಂದು ಕಾಣುತ್ತದೆ ಎಂದು ಹೇಳಿದರು. 

ಇದನ್ನೂ ಓದಿ : ಜಾತಿ‌ ಜನಗಣತಿ ವಿಚಾರಕ್ಕೆ ರಾಜ್ಯ ಸರ್ಕಾರ ಗೊಂದಲದಲ್ಲಿದೆ; ಕೇಂದ್ರ ಸಚಿವ ಜೋಶಿ ಟೀಕೆ 

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿ ಆದೇಶಿಸಿದ್ದ ಈ ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಆದೇಶವನ್ನು ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿನ್ನೆ ತೀರ್ಮಾನಿಸಲಾಗಿದೆ. 

ಪ್ರಕರಣವೇನು? : ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ವಿವಿಧ ಕಲಂಗಳ ಅಡಿಯಲ್ಲಿ 2020ರ ಅ. 3ರಂದು ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು. ‘ಸಿಬಿಐ ದಾಖಲಿಸಿರುವ ಎಫ್‌ಐಆರ್ ಕಾನೂನು ಬಾಹಿರವಾಗಿದ್ದು, ತನಿಖೆ ರದ್ದುಪಡಿಸಬೇಕು’ ಎಂದು ಕೋರಿ‌ ಶಿವಕುಮಾರ್, 2022ರ ಜುಲೈನಲ್ಲಿ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಪೀಠ, 2023ರ ಫೆಬ್ರುವರಿ 10ರಂದು ತನಿಖೆಗೆ ಮಧ್ಯಂತರ ತಡೆ ನೀಡಿತ್ತು.‌ ಈ ತಡೆ ಆದೇಶವನ್ನು ಈ ತನಕ ವಿಸ್ತರಿಸಿಕೊಂಡು ಬರಲಾಗಿತ್ತು. ವಿಚಾರಣೆಯನ್ನು 2023ರ ಜುಲೈ 31ರಂದು ಪೂರ್ಣಗೊಳಿಸಿದ್ದ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು. 

ಇದನ್ನೂ ಓದಿ : ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಡಿಕೆ ಶಿವಕುಮಾರ್ ವಿರುದ್ಧ CBI ತನಿಖೆ ವಾಪಸ್ ಪಡೆದ ಕಾಂಗ್ರೆಸ್ ಸರ್ಕಾರ‌

‘ಪ್ರಕರಣವನ್ನು ಸಿಬಿಐ ತನಿಖೆಗೆ ಹಸ್ತಾಂತರಿಸಿದ್ದ ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಬೇಕು‘ ಎಂದು ಕೋರಿ‌‌ ಡಿ.ಕೆ.ಶಿವಕುಮಾರ್‌ ಸಲ್ಲಿಸಿದ್ದ ಮತ್ತೊಂದು ಅರ್ಜಿಯನ್ನು ನಾಲ್ಕು ತಿಂಗಳ ಹಿಂದಷ್ಟೇ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿತ್ತು. ಇದೀಗ ಡಿ.ಕೆ.ಶಿವಕುಮಾರ್ ವಿರುದ್ಧದ ಇದೇ ಅಕ್ರಮ ಆಸ್ತಿ ಗಳಿಗೆ ಪ್ರಕರಣ ನ.29ರಂದು ಹೈ ಕೋರ್ಟ್ ಮುಂದೆ ವಿಚಾರಣೆಗೆ ಬರಲಿದೆ.‌ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News