ಸಚಿವ ಕೆ.ಜೆ.ಜಾರ್ಜ್ ವಿರುದ್ಧ ದೂರು ದಾಖಲು
ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ವಿರುದ್ಧ ಮತ್ತೊಂದು ಭೂ ಕಬಳಿಕೆ ಆರೋಪ ಕೇಳಿಬಂದಿದೆ.
ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ವಿರುದ್ಧ ಮತ್ತೊಂದು ಭೂ ಕಬಳಿಕೆ ಆರೋಪ ಕೇಳಿಬಂದಿದೆ. ಇದರ ಸಂಬಂಧ ಬಿಜೆಪಿ ಮುಖಂಡ ಎನ್.ಆರ್. ರಮೇಶ್, ಜಾರ್ಜ್ ವಿರುದ್ಧ ಲೋಕಾಯುಕ್ತ, ಎಸಿಬಿ ಹಾಗೂ ಬಿಎಂಟಿಎಫ್ ನಲ್ಲಿ ದೂರು ದಾಖಲಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ದಾಖಲೆ ಬಿಡುಗಡೆ ಮಾಡಿದ ಬಿಬಿಎಂಪಿ ಪ್ರತಿಪಕ್ಷದ ಮಾಜಿ ನಾಯಕ, ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ಅವರು ಸಚಿವ ಕೆ.ಜೆ. ಜಾರ್ಜ್ ಪಾಲುದಾರಿಕೆಯ ಎಂಬೆಸಿ ಗಾಲ್ಫ್ ಲಿಂಕ್ ಟೆಕ್ ಪಾರ್ಕ್ ಹೆಸರಿನಲ್ಲಿ 52.03 ಎಕರೆ ಜಾಗವನ್ನು ನಕಲಿ ದಾಖಲೆ ಸೃಷ್ಟಿಸಿ ಕಬಳಿಕೆ ಮಾಡಲಾಗಿದೆ ಎಂದು ಆರೋಪಿಸಿದ ರಮೇಶ್, ಸಚಿವ ಜಾರ್ಜ್ ವಿರುದ್ಧ ನಗರದ ಎಸಿಎಂಎಂ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ಹೇಳಿದರು.