ಬೆಂಗಳೂರು: ಸಿಎಂ ಮನೆ ಭದ್ರತೆಯಲ್ಲಿದ್ದ ಪೊಲೀಸರಿಂದ ಗಾಂಜಾ ಮಾರಾಟಕ್ಕೆ ಯತ್ನ ಪ್ರಕರಣವನ್ನು ಸಿಸಿಬಿಗೆ (CCB) ವರ್ಗಾವಣೆ ಮಾಡಲಾಗಿದೆ. 


COMMERCIAL BREAK
SCROLL TO CONTINUE READING

ಜ.18 ರಂದು ಗಾಂಜಾ (Ganja) ಮಾರಾಟ ಯತ್ನ ಆರೋಪದಡಿ ಸಿಎಂ ನಿವಾಸದ (CM Residency) ಭದ್ರತೆಯಲ್ಲಿದ್ದ ಇಬ್ಬರು ಪೊಲೀಸರನ್ನು ಆರ್ ಟಿ ನಗರ ಪೊಲೀಸರು ಬಂಧಿಸಿದ್ದರು.


ಇದೀಗ ಈ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆಗೊಳಿಸಿ ಪೊಲೀಸ್ ಕಮೀಷನರ್ ಕಮಲ್ ಪಂತ್ (Kamal Pant) ಆದೇಶ ಹೊರಡಿಸಿದ್ದಾರೆ. ಸಿಎಂ ಖಾಸಗಿ ನಿವಾಸದ ಬಳಿ ಗಾಂಜಾ ಡೀಲ್ ನಡೆಸಿದ ಇಬ್ಬರು ಪೊಲೀಸ್ ಕಾನ್ ಸ್ಟೆಬಲ್ ಗಳನ್ನು ಬಂಧಿಸಲಾಗಿತ್ತು. 


ಕೋರಮಂಗಲ ಠಾಣೆಯ ಶಿವಕುಮಾರ್ ಹಾಗು ಸಂತೋಷ್, ಪೆಡ್ಲರ್ ಗಳ ಮೂಲಕ ಗಾಂಜಾ ತರಿಸಿಕೊಂಡು ಮಾರಾಟಕ್ಕೆ ಮುಂದಾಗಿದ್ದರು ಎಂದು ಆರೋಪಿಸಿಲಾಗಿದೆ. 


ಹೆಚ್ಚಿನ ತನಿಖೆ ಮತ್ತು ವಿಚಾರಣೆ ಸಲುವಾಗಿ ಈ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. 


ಇದೇ ಪ್ರಕರಣದ ಸಂಬಂಧ ಆರ್ ಟಿ ನಗರ ಠಾಣೆ ಇನ್ಸ್‌ಪೆಕ್ಟರ್  ಅಶ್ವಥ್ ಗೌಡ ಮತ್ತು ಸಬ್ ಇನ್ಸ್‌ಪೆಕ್ಟರ್ ಅವರನ್ನು ಸೂಕ್ತ ರೀತಿ ತನಿಖೆ ನಡೆಸದ ಹಿನ್ನೆಲೆ ಅಮಾನತುಗೊಳಿಸಲಾಗಿತ್ತು. 


ಇದನ್ನೂ ಓದಿ: ಪೆಡ್ಲರ್ ಗಳ ಮೂಲಕ ಗಾಂಜಾ ತರಿಸಿ ಮಾರಾಟಕ್ಕೆ ಯತ್ನ: ಸಿಎಂ ಮನೆ ಭದ್ರತೆಯಲ್ಲಿದ್ದ ಇಬ್ಬರು ಪೊಲೀಸರ ಬಂಧನ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.