ಕೋವಿಡ್-19 ಕುರಿತಾಗಿ ತಪ್ಪು ಮಾಹಿತಿ ನೀಡಿದಲ್ಲಿ ಕೇಸ್ ದಾಖಲು...!

 ಕೋವಿಡ್-19 ಕುರಿತಾಗಿ ವಿವಿಧ ಮಾಧ್ಯಮಗಳ ಮೂಲಕ ಕೆಲವು ವೈಧ್ಯಕೀಯ ಪರಿಣಿತರು ಹಾಗೂ ವೈದ್ಯರು ಸಾರ್ವಜನಿಕರಿಗೆ ಅಪೂರ್ಣವಾದ, ತಪ್ಪು ಮತ್ತು ಆಧಾರರಹಿತ ಮಾಹಿತಿಗಳನ್ನು ನೀಡಿದರೆ ಪ್ರಕರಣ ದಾಖಲಾಯಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಯುಕ್ತಾಲ ತಿಳಿಸಿದೆ.

Written by - Zee Kannada News Desk | Last Updated : Jan 19, 2022, 07:20 PM IST
  • ಕೋವಿಡ್-19 ಕುರಿತಾಗಿ ವಿವಿಧ ಮಾಧ್ಯಮಗಳ ಮೂಲಕ ಕೆಲವು ವೈಧ್ಯಕೀಯ ಪರಿಣಿತರು ಹಾಗೂ ವೈದ್ಯರು ಸಾರ್ವಜನಿಕರಿಗೆ ಅಪೂರ್ಣವಾದ, ತಪ್ಪು ಮತ್ತು ಆಧಾರರಹಿತ ಮಾಹಿತಿಗಳನ್ನು ನೀಡಿದರೆ ಪ್ರಕರಣ ದಾಖಲಾಯಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಯುಕ್ತಾಲ ತಿಳಿಸಿದೆ.
ಕೋವಿಡ್-19 ಕುರಿತಾಗಿ ತಪ್ಪು ಮಾಹಿತಿ ನೀಡಿದಲ್ಲಿ ಕೇಸ್ ದಾಖಲು...! title=

ಬೆಂಗಳೂರು: ಕೋವಿಡ್-19 ಕುರಿತಾಗಿ ವಿವಿಧ ಮಾಧ್ಯಮಗಳ ಮೂಲಕ ಕೆಲವು ವೈಧ್ಯಕೀಯ ಪರಿಣಿತರು ಹಾಗೂ ವೈದ್ಯರು ಸಾರ್ವಜನಿಕರಿಗೆ ಅಪೂರ್ಣವಾದ, ತಪ್ಪು ಮತ್ತು ಆಧಾರರಹಿತ ಮಾಹಿತಿಗಳನ್ನು ನೀಡಿದರೆ ಪ್ರಕರಣ ದಾಖಲಾಯಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಯುಕ್ತಾಲ ತಿಳಿಸಿದೆ.

ಇದನ್ನೂ ಓದಿ: O Antava..Oo Oo Antava Video: 'ಪುಷ್ಪ' ಚಿತ್ರದ ಈ ಹಾಡಿನ ಚಿತ್ರೀಕರಣದ ಮತ್ತೊಂದು ವಿಡಿಯೋ ವೈರಲ್

ಚಿಕಿತ್ಸೆ ಮತ್ತು ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಅನುಭವವನ್ನು ಹೊಂದಿರುವ ವೈದ್ಯಕೀಯ ಪರಿಣಿತರು ಹಾಗೂ ವೈದ್ಯರು ಸಾರ್ವಜನಿಕರಿಗೆ ಕೋವಿಡ್-19 ರ ಬಗ್ಗೆ ಮಾಹಿತಿ ನೀಡುವ ಸಂದರ್ಭದಲ್ಲಿ ಗರಿಷ್ಠ ಪ್ರಮಾಣದ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ.ಈ ಹಿನ್ನಲೆಯಲ್ಲಿ ವೈದ್ಯಕೀಯ ಪರಿಣಿತರು ಹಾಗೂ ವೈದ್ಯರು ಯಾವುದೇ ಮಾಧ್ಯಮಗಳು, ಸಾಮಾಜಿಕ ವೇದಿಕೆಗಳ ಮುಖೇನ ಮಾಹಿತಿ ನೀಡುವ ಮುನ್ನ ಕರ್ನಾಟಕ ಸರ್ಕಾರ ಮತ್ತು ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿ, ಸುತ್ತೋಲೆ, ಆದೇಶಗಳನ್ನು ಸಮಗ್ರವಾಗಿ ಅಧ್ಯಯನ ಮಾಡುವುದು ಅಪೇಕ್ಷಣೀಯ ಎಂದು ಹೇಳಿದೆ.

ಇದನ್ನೂ ಓದಿ: Divya Suresh: ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್​ಗೆ ಅಪಘಾತ..!

ಯಾವುದೇ ಮಾಧ್ಯಮ, ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಅಥವಾ ವಾಸ್ತವಕ್ಕೆ ದೂರವಾದ ದತ್ತಾಂಶಗಳನ್ನು ವಿನಿಮಯ ಮಾಡಿದಲ್ಲಿ, ಇದನ್ನು ಅಪರಾಧವೆಂದು ಪರಿಗಣಿಸಿ ವಿಪತ್ತು ನಿರ್ವಹಣಾ ಕಾಯ್ದೆ-2005 ರ ನಿಯಮ (54) ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020 ರ ನಿಯಮ 4(ಕೆ) ಅಡಿಯಲ್ಲಿ ಅಗತ್ಯ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಯುಕ್ತಾಲಯದ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Viral Video: ‘ಪುಷ್ಪ’ ಸಿನಿಮಾದ ಮತ್ತೊಂದು ಹಾಡಿಗೆ ಮಸ್ತ್ ಡ್ಯಾನ್ಸ್ ಮಾಡಿದ ತಾಂಜಾನಿಯಾದ ಯುವಕ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News