`ಜಾತಿ ಗಣತಿ ವರದಿ ಇನ್ನೂ ಸರ್ಕಾರದ ಕೈಸೇರಿಲ್ಲ, ಕೆಲವರು ಊಹೆಗಳ ಮೇಲೆ ಮಾತನಾಡುತ್ತಿದ್ದಾರೆ`
ಜಾತಿ ಗಣತಿ ವರದಿ ಇನ್ನೂ ಸರ್ಕಾರದ ಕೈಸೇರಿಲ್ಲ, ಕೆಲವರು ಊಹೆಗಳ ಮೇಲೆ ಮಾತನಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಹುಬ್ಬಳ್ಳಿ: ಜಾತಿ ಗಣತಿ ವರದಿ ಇನ್ನೂ ಸರ್ಕಾರದ ಕೈಸೇರಿಲ್ಲ, ಕೆಲವರು ಊಹೆಗಳ ಮೇಲೆ ಮಾತನಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಅವರು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುತ್ತಿದ್ದರು.
ನವದೆಹಲಿಯ ಸಂಸತ್ ಭವನದಲ್ಲಿ ಭದ್ರತಾ ಲೋಪವಾಗಿರುವ ಬಗ್ಗೆ ಸಂಸತ್ತಿನ ವಿಪಕ್ಷಗಳು ರಾಜಕೀಯ ಎಲ್ಲಿ ಮಾಡುತ್ತಿವೆ? ಸಂಸತ್ತಿನಲ್ಲಿ ಭದ್ರತಾ ಲೋಪವಾಗಿರುವುದು ಸತ್ಯ.ಈ ಸತ್ಯವನ್ನು ಹೇಳಿದರೆ ರಾಜಕೀಯ ಹೇಗಾಗುತ್ತೆ? ಎಂದು ಅವರು ಪ್ರಶ್ನಿಸಿದರು.ಜಾತಿ ಗಣತಿ ವರದಿ ಇನ್ನೂ ಸರ್ಕಾರದ ಕೈಸೇರಿಲ್ಲ.ಹೀಗಾಗಿ ಯಾರಿಗೂ ಆ ವರದಿಯಲ್ಲಿರುವ ಅಂಶಗಳೇನು ಎಂಬ ಮಾಹಿತಿ ಇಲ್ಲ,ಕೇವಲ ಊಹೆಗಳ ಮೇಲೆ ಮಾತನಾಡುತ್ತಿದ್ದಾರೆ.ವರದಿ ಬಂದ ಮೇಲೆ ಸಾಧಕ -ಬಾಧಕಗಳೇನು ಎಂದು ತಿಳಿಯುತ್ತದೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ: ಬೆಳಗಾವಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಆಕ್ರೋಶ!
ಹೆಣ್ಣುಮಕ್ಕಳ ಮೇಲಾಗುವ ದೌರ್ಜನ್ಯವನ್ನು ನಾನು ತೀವ್ರವಾಗಿ ಖಂಡಿಸಿದ್ದೇನೆ.ನಾಗರಿಕ ಸಮಾಜ ತಲೆತಗ್ಗಿಸುವಂತಹ ಹೇಯ ಕೃತ್ಯಗಳು ಎಲ್ಲಿಯೂ ನಡೆಯಬಾರದು.ಬೆಳಗಾವಿ ವಂಟಮೂರಿ ಗ್ರಾಮದಲ್ಲಿ ಮಹಿಳೆಯ ಮೇಲಾದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಸತ್ಯಶೋಧನಾ ತಂಡದ ಭೇಟಿ ರಾಜಕೀಯ ಪ್ರೇರಿತ. ಈ ಪ್ರಕರಣದಲ್ಲಿ ಸರ್ಕಾರ ಕಾನೂನು ರೀತ್ಯ ಎಲ್ಲ ಕ್ರಮಗಳನ್ನು ತೆಗೆದುಕೊಂಡಿದೆ. ಗೃಹಸಚಿವರು ಆಸ್ಪತ್ರೆಗೆ ತೆರಳಿ ಸಂತ್ರಸ್ಥೆಯನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ದೌರ್ಜನ್ಯಕ್ಕೊಳಗಾದ ಮಹಿಳೆಗೆ ಪರಿಹಾರ ನೀಡಲು ಕ್ರಮಕೈಗೊಳ್ಳಲಾಗಿದ್ದು, ಆರೋಪಿಗಳನ್ನು ತಕ್ಷಣ ಬಂಧಿಸಲಾಗಿದೆ.
ಇದನ್ನೂ ಓದಿ: ಸದನದಲ್ಲಿ ವಿರೋಧ ಪಕ್ಷದ ನಾಯಕನ ಕೊರತೆ ಕಾಣುತ್ತಿತ್ತು : ಸಲೀಂ ಅಹಮದ್
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಈ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದ್ದಾರೆ.ನ್ಯಾಷನಲ್ ಕ್ರೈಂ ಬ್ಯೂರೋ ಪ್ರಕಾರ ಬಿಜೆಪಿ ಅವಧಿಯಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ಹೆಚ್ಚು ನಡೆದಿವೆ. ಉತ್ತರಪ್ರದೇಶದ ಬಿಜೆಪಿಯ ಶಾಸಕರೊಬ್ಬರು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಪರಾಧಕ್ಕಾಗಿ 25 ವರ್ಷ ಜೈಲುಶಿಕ್ಷೆಗೆ ಗುರಿಯಾಗಿದ್ದಾರೆ.ಇದರ ಬಗ್ಗೆ ನಡ್ಡಾ ಪ್ರತಿಕ್ರಿಯೆ ನೀಡಿದ್ದಾರ? ಎಂದು ಅವರು ಪ್ರಶ್ನಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.