Cauvery Dispute Bengaluru Bandh: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ಬೆಂಗಳೂರು ಬಂದ್ ಕರೆ ನೀಡಿರುವ ಹಿನ್ನೆಲೆ ತಮಿಳುನಾಡು ಗಡಿಯನ್ನು ಬಂದ್ ಮಾಡುವ ಮೂಲಕ ಊಟಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿದೆ. 


COMMERCIAL BREAK
SCROLL TO CONTINUE READING

ಚಾಮರಾಜನಗರ ಅಧಿಕಾರಿಗಳು ಸಂಪರ್ಕಿಸಿ ಪರಿಸ್ಥಿತಿ ಶಾಂತಿಯುತವಾಗಿರುವುದನ್ನು ತಿಳಿಸಿದ ಬಳಿಕ ಬೆಳಗ್ಗೆ 8.30 ರ ಬಳಿಕ ಕರ್ನಾಟಕ ವಾಹನಗಳು ಸೇರಿದಂತೆ ಎಲ್ಲಾ ರಾಜ್ಯದ ನೋಂದಣಿ ವಾಹನಗಳ ಓಡಾಟಕ್ಕೆ ಅವಕಾಶ ಮಾಡಿಕೊಟ್ಟಿದೆ. ಆದರೆ, ತಮಿಳುನಾಡು ವಾಹನಗಳನ್ನು ಕರ್ನಾಟಕ ಪ್ರವೇಶಿಸಿಲು ನಿರ್ಬಂಧ ಮುಂದುವರೆಸಿದ್ದಾರೆ.


ಇದನ್ನೂ ಓದಿ- ಕಾವೇರಿ ಕಿಚ್ಚು: ಇಂದು ಬೆಂಗಳೂರು ಬಂದ್- ಏನಿರುತ್ತೆ? ಏನಿರಲ್ಲ?


ತಮಿಳುನಾಡು ಗಡಿ ಹೊಂದಿಕೊಂಡಿರುವ  ಗುಂಡ್ಲುಪೇಟೆ ತಾಲೂಕಿನ ಕೆಕ್ಕನಹಳ್ಳ ಚೆಕ್ ಪೋಸ್ಟ್ ನಲ್ಲಿ  ಎಲ್ಲಾ ರೀತಿಯ ವಾಹನಗಳನ್ನು ನಿರ್ಬಂಧಿಸಿ ಬಂದ್ ಮುಗಿಯುವ ತನಕ ವಾಹನಗಳು ಸಂಚರಿಸುವುದು ಬೇಡ ಎಂದು ಸೂಚಿಸಿದ್ದರು. ಬೆಳಗ್ಗೆ 6 ಗಂಟೆಯಿಂದ ಎರಡು ರಾಜ್ಯಗಳ ವಾಹನ ಸಂಚಾರವನ್ನು ಊಟಿ ಜಿಲ್ಲಾಡಳಿತ ನಿರ್ಬಂಧಿಸಿ ಆದೇಶ ಹೊರಡಿಸಲಾಗಿತ್ತು. ಆದರೆ, ಆದೇಶವನ್ನು ಈಗ ಮಾರ್ಪಟು ಮಾಡಿ ಕೇವಲ ತಮಿಳುನಾಡು ನೋಂದಣಿ ವಾಹನಗಳು ಕರ್ನಾಟಕಕ್ಕೆ ತೆರಳುವುದು ಬೇಡ ಎಂದು ಊಟಿ ಜಿಲ್ಲಾಡಳಿತ ನಿರ್ಧರಿಸಿದೆ. 


ಇದನ್ನೂ ಓದಿ- ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ : ʼಕಾವೇರಿʼ ಬಂದ್‌ ಹಿನ್ನೆಲೆ ‌ಹೈಅಲರ್ಟ್ ಘೋಷಣೆ


ಏಕಾಏಕಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿದ್ದರಿಂದ ಎರಡು ರಾಜ್ಯದ ವಾಹನ ಸವಾರರು 2 ತಾಸು ಪರದಾಡುವಂತಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂಬ ಉದ್ದೇಶದಿಂದ ವಾಹನ ಸಂಚಾರ ನಿರ್ಬಂಧ ಹೇರಲಾಗಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=q9auZ2eqeZo
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.