Cauvery Dispute: ಒಣಗಿದ ತರಕಾರಿ ಹಿಡಿದು ಆಕ್ರೋಶ..! ನೀರು ಬಿಡದಂತೆ ಆಗ್ರಹ
Cauvery Protest: ಕಾವೇರಿ ನೀರನ್ನು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಹರಿಸಬಾರದೆಂದು ಎಂದು ಇಂದು ಕನ್ನಡಪರ ಹೋರಾಟಗಾರರು ಒಣಗಿದ ತರಕಾರಿ, ಸೊಪ್ಪು ಹಿಡಿದು ಪ್ರತಿಭಟಿಸಿ ಆಕ್ರೋಶ ಹೊರಹಾಕಿದರು.
ಚಾಮರಾಜನಗರ: ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಒಣಗಿದ ವಿವಿಧ ಬಗೆಯ ತರಕಾರಿ ಹಿಡಿದು ತಮಿಳುನಾಡು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಇದನ್ನೂ ಓದಿ-ಗಂಗಾವತಿ ನಗರಸಭೆ ವ್ಯಾಪ್ತಿಗೆ ಹಳ್ಳಿಗಳನ್ನು ಸೇರಿಸಲು ಮುಂದಾದ ಜಿಲ್ಲಾಡಳಿತ, ಗ್ರಾಮಸ್ಥರ ಆಕ್ರೋಶ
ಕಾವೇರಿ ನೀರನ್ನು ತಮಿಳುನಾಡಿನ 3 ಬೆಳೆಗೆ ಹರಿಸಲಾಗುತ್ತಿದೆ. ಆದರೆ, ನಮ್ಮಲ್ಲಿ ಕುಡಿಯಲು ನೀರಿಲ್ಲ, ತರಕಾರಿ ಬೆಳೆಗಳು ಒಣಗುತ್ತಿವೆ, ನಮ್ಮ ರೈತರು, ಜನರು ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
ಇದನ್ನೂ ಓದಿ-ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳು ಸೇವೆ ನಡೆಸಿ ಆಕ್ರೋಶ ಹೊರಹಾಕಿದ ಕನ್ನಡಪರ ಸಂಘಟನೆಗಳು
ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು, ನೀರು ಹರಿಸಿ ಮತ್ತೇ ಮತ್ತೇ ರೈತರನ್ನು ಸಂಕಷ್ಟಕ್ಕೆ ದೂಡಬಾರದು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ವಿರುದ್ಧ ಗಾಯದ ಮೇಲೆ ಬರೆ ಎಳೆಯುತ್ತಿದ್ದು ವಾಸ್ತವ ಸ್ಥಿತಿ ಅರಿತು ಸಂಕಷ್ಟ ಸೂತ್ರ ಕೊಡಲಿ ಎಂದು ಹೋರಾಟಗಾರರು ಒತ್ತಾಯಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.