ಬೆಂಗಳೂರು: ನೆರೆ ರಾಜ್ಯವು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದಾಕ್ಷಣ ರಾಜ್ಯ ಸರಕಾರ ನೀರು ಹರಿಸುವ ನಿರ್ಧಾರ ಕೈಗೊಳ್ಳುವ ಬದಲು ತಮಿಳುನಾಡು ಅರ್ಜಿಗೆ ಪ್ರತಿಯಾಗಿ ಕೂಡಲೇ ತಕರಾರು ಅರ್ಜಿ ಸಲ್ಲಿಸಬೇಕಿತ್ತು. ಈ ವಿಷಯದಲ್ಲಿ ಸರಕಾರದಿಂದ ಲೋಪವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಮಾತುಗಳಲ್ಲಿ ಹೇಳಿದರು. ಅಲ್ಲದೆ, ನಮ್ಮ ನೆಲ ಜಲ ಭಾಷೆ ರಕ್ಷಣೆ ಹಾಗೂ ನಮ್ಮ ನೀರಿನ ಹಕ್ಕು, ರೈತರ ಪ್ರಶ್ನೆ ಬಂದಾಗ ಪ್ರತಿಪಕ್ಷಗಳು ಮಾತನಾಡದೆ ಮೌನವಾಗಿರಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು.


COMMERCIAL BREAK
SCROLL TO CONTINUE READING

ಕಾವೇರಿ ವಿಷಯಕ್ಕೆ ಸಂಬಂಧಿಸಿ ವಿಧಾನಸಭೆ ಸಮ್ಮೇಳನ ಸಭಾಂಗಣದಲ್ಲಿ ಕರೆಯಲಾಗುತ್ತಿದ್ದ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಸಭೆಯಲ್ಲಿ  ತಮ್ಮ ಅಭಿಪ್ರಾಯ ಮಂಡಿಸಿದರು.


ರಾಜಕೀಯ ಎನ್ನಬೇಡಿ:
ರಾಜ್ಯದ ನೆಲ ಜಲ ಭಾಷೆ ವಿಚಾರದಲ್ಲಿ ಪ್ರತಿಪಕ್ಷಗಳು ಪ್ರಶ್ನೆ ಮಾಡಿದರೆ, ಅದನ್ನು ರಾಜಕೀಯ ಎಂದು ಭಾವಿಸುವುದು ತಪ್ಪು. ಹಾಗೇ ಭಾವಿಸುವ ಪ್ರಶ್ನೆಯೇ ಬೇಕಿಲ್ಲ. ನೀರನ್ನು ಹರಿಸುವ ಮೊದಲೇ ಸರ್ವಪಕ್ಷ ಸಭೆ ಕರೆದಿದ್ದರೆ ಅದಕ್ಕೊಂದು ಅರ್ಥ ಇರುತ್ತಿತ್ತು. ಈಗ ನೀವು ತಮಿಳುನಾಡಿಗೆ ನೀರು ಹರಿಸುತ್ತಿದ್ದೀರಿ. ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಅದಕ್ಕೆ ಈಗ ಏನು ಸಮಜಾಯಿಷಿ ನೀಡುತ್ತೀರಿ? ಎಂದು ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಅವರು ಬೇಸರ ವ್ಯಕ್ತಪಡಿಸಿದರು.


ಇದನ್ನೂ ಓದಿ- ತತ್ವ, ಸಿದ್ಧಾಂತಗಳನ್ನು ಒಪ್ಪಿಕೊಂಡು ಬಂದ್ರೆ ಬರಲಿ: ಸಚಿವ ಶಿವರಾಜ್ ತಂಗಡಗಿ


ಸರಕಾರ ಏತಕ್ಕೆ?
ನೀರು ಬೇಕಾದರೆ ರೈತರೇ ನ್ಯಾಯಾಲಯಕ್ಕೆ ಹೋಗಲಿ ಎಂದು ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಅವರು ಹೇಳಿಕೆ ನೀಡಿದ್ದಾರೆ. ಇಂಥ ಹೇಳಿಕೆ ಸರಿ ಅಲ್ಲ. ರೈತರೇ ನ್ಯಾಯಾಲಕ್ಕೆ ಹೋಗುವುದಾದರೆ ಸರಕಾರ ಏತಕ್ಕೆ ಬೇಕು? ಇಷ್ಟೆಲ್ಲಾ ವ್ಯವಸ್ಥೆ ಅಗತ್ಯ ಏನಿದೆ? ಈ ಬಗ್ಗೆ ತಪ್ಪು ತಿಳಿಯುವ ಅಗತ್ಯ ಇಲ್ಲ ಎಂದು ಕುಮಾರಸ್ವಾಮಿ ಅವರು ನೇರವಾಗಿ ಚಾಟಿ ಬೀಸಿದರು.


ಪ್ರತಿಪಕ್ಷಗಳನ್ನು ರಾಜಕೀಯ ಮಾಡಬೇಡಿ ಎಂದು ಹೇಳುತ್ತೀರಿ, ಆದರೆ ಇಂಥ ಸೂಕ್ಷ್ಮ ವಿಷಯಗಳಲ್ಲಿ ನಿಮ್ಮ ಜವಾಬ್ದಾರಿ ಏನಿದೆ? ಎಂದು  ಮತ್ತೆ ಮತ್ತೆ  ಖಾರವಾಗಿ ಪ್ರಶ್ನಿಸಿದ ಅವರು; ನೆಲ ಜಲ ಭಾಷೆ ವಿಷಯದಲ್ಲಿ ರಾಜಕೀಯದ ಅಗತ್ಯ ಇಲ್ಲ. ನಾವೆಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕು. ಆದರೆ, ಸರಕಾರವು ಹೊಣೆಗಾರಿಕೆಯಿಂದ ವರ್ತಿಸಬೇಕು ಎಂದರು.


ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ನಮ್ಮ ಅಧಿಕಾರಿಗಳು ಉತ್ತಮ ರೀತಿಯಲ್ಲಿ ರಾಜ್ಯದ ಪರ ಅಭಿಪ್ರಾಯ ತಿಳಿಸಿದ್ದಾರೆ. ಜಲ ಸಂಕಷ್ಟದ ಬಗ್ಗೆ ವಿವರಿಸಿದ್ದಾರೆ. ಆದರೆ, ಅಲ್ಲಿ ತಮಿಳುನಾಡು ಅಧಿಕಾರಿಗಳು ಪಟ್ಟು ಹಿಡಿದು ಸಭೆಯಿಂದ ಹೊರ ನಡೆದಿದ್ದಾರೆ. ಆದರೆ, ಸರ್ವೋಚ್ಚ ನ್ಯಾಯಾಲಯಕ್ಕೆ ತಮಿಳುನಾಡು ಅರ್ಜಿ ಹಾಕಿದಾಗ ನಾವು ಅಷ್ಟೇ ವೇಗದಿಂದ ಆಕ್ಷೇಪಣಾ ಅರ್ಜಿ ಸಲ್ಲಿಸಬೇಕಿತ್ತು ಎಂದು ಮಾಜಿ ಮುಖ್ಯಮಂತ್ರಿ ಅವರು ಪ್ರತಿಪಾದಿಸಿದರು.


ಹಿಂದೆ ಹೆಚ್.ಡಿ. ದೇವೇಗೌಡರು ಸೇರಿದಂತೆ ಇನ್ನೂ ಹಲವರು ಮುಖ್ಯಮಂತ್ರಿಗಳಾಗಿದ್ದಾಗ ಇಂಥ ಪರಿಸ್ಥಿತಿ ಎದುರಾದಾಗ ಅದನ್ನು ಹೇಗೆ ಎದುರಿಸಲಾಯಿತು ಎಂಬುದನ್ನು ಕಾನೂನು ತಜ್ಞರ ತಂಡದ ಮುಖ್ಯಸ್ಥ ಮೋಹನ್ ಕಾತರಕಿ ಅವರು ಈ ಸಭೆಯಲ್ಲಿಯೇ ಹೇಳಿದ್ದಾರೆ. ಅದೆಲ್ಲಾ ವಿಷಯಗಳನ್ನು ಈ ಸರಕಾರ ತಿಳಿದುಕೊಳ್ಳಬೇಕು ಎಂದರು.


ಇದನ್ನೂ ಓದಿ- ಹಾವೇರಿ ಜಿಲ್ಲೆಯ ಪ್ರತಿಷ್ಠಿತ ನಗರಗಳೇ ಕಳ್ಳರ ಟಾರ್ಗೆಟ್


ಯಾರ ಅಭಿಪ್ರಾಯ ಸರಿ ಇದೆ?:
ಈ ಸಭೆಯಲ್ಲಿ ಏನೇ ವಾದ ಮಾಡಿದರೂ ಕಾವೇರಿ ಪ್ರಾಧಿಕಾರ ಹಾಗೂ ಸರ್ವೋಚ್ಚ ನ್ಯಾಯಾಲಯದಲ್ಲಿ ಪರಿಣಾಮಕಾರಿ ವಾದ ಮಂಡಿಸಬೇಕು. ಅಲ್ಲದೆ, ಈ ದಿನ ಪತ್ರಿಕೆಯೊಂದರಲ್ಲಿ ಸಂಕಷ್ಟ ಸೂತ್ರದ ಬಗ್ಗೆ ನಮ್ಮ ಅಡ್ವೋಕೇಟ್ ಜನರಲ್ ಅವರು ಒಂದು ಹೇಳಿಕೆ ನೀಡಿದ್ದಾರೆ. ಆ ಹೇಳಿಕೆ ಸರಿ ಇದೆಯಾ? ಆದರೆ, ಮೋಹನ್ ಕಾತರಕಿ ಅವರು ಇದಕ್ಕೆ ತದ್ವಿರುದ್ದವಾದ ಮಾಹಿತಿಯನ್ನು ಈ ಸಭೆಗೆ ನೀಡಿದ್ದಾರೆ. ಹಾಗಾದರೆ, ಯಾರ ಮಾಹಿತಿ ಸರಿ ಇದೆ? ನನಗೆ ತಿಳಿದಿರುವ ಮಾಹಿತಿಯಂತೆ ಸಂಕಷ್ಟ ಸಮಯದಲ್ಲಿ ನೀರನ್ನು ಹಂಚಿಕೊಳ್ಳುವ ಬಗ್ಗೆ ಯಾವುದೇ ಸೂತ್ರ, ಪರಿಹಾರ ಇಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.