ಕಾವೇರಿ ಕಿಚ್ಚು: ಇಂದು ಬೆಂಗಳೂರು ಬಂದ್- ಏನಿರುತ್ತೆ? ಏನಿರಲ್ಲ?
Bengaluru Bandh: ರಾಜ್ಯದಲ್ಲಿ ಕಾವೇರಿ ಕಿಚ್ಚು ಹೆಚ್ಚಾಗಿದ್ದು ಇಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. 95ಕ್ಕೂ ಹೆಚ್ಚು ಸಂಘಟನೆಗಳಿಂದ ಬಂದ್‌ಗೆ ಬೆಂಬಲ ವ್ಯಕ್ತವಾಗಿದ್ದು ರಾಜ್ಯ ರಾಜಧಾನಿಯ ಮೂಲೆ ಮೂಲೆಯಲ್ಲೂ ಕಾವೇರಿ ಕಿಚ್ಚು ಹೆಚ್ಚಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
Bengaluru Bandh: ಈ ವರ್ಷ ಮಳೆ ಅಭಾವದಿಂದಾಗಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಿದೆ. ಈ ಮಧ್ಯೆ, ನೆರೆ ರಾಜ್ಯ ತಮಿಳುನಾಡಿಗೆ ಪ್ರತಿನಿತ್ಯ 5,000 ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವಂತೆ ನ್ಯಾಯಾಲಯ ನೀಡಿರುವ ತೀರ್ಪನ್ನು ವಿರೋಧಿಸಿ ಕರ್ನಾಟಕದಲ್ಲಿ ಇಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. ಇನ್ನೂ ರೈತ ಮುಖಂಡ ಕುರುಬೂರು ಶಾಂತಕುಮಾರ್ ಮಂಗಳವಾರ ಬೆಂಗಳೂರು ಬಂದ್‌ಗೆ ಕರೆ ನೀಡಿದ್ದರೆ, ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ‘ಕನ್ನಡ ಒಕ್ಕೂಟ’ ಬ್ಯಾನರ್ ಅಡಿಯಲ್ಲಿ ಸೆಪ್ಟೆಂಬರ್ 29 ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.
ಕರ್ನಾಟಕದ ಕಾವೇರಿ ನದಿಯಿಂದ ನೆರೆಯ ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಮತ್ತು ವಿರೋಧ ಪಕ್ಷಗಳು ಮಂಗಳವಾರ ಬೆಂಗಳೂರು ಬಂದ್‌ಗೆ ಕರೆ ನೀಡಿರುವುದರಿಂದ ಸಿಲಿಕಾನ್ ಸಿಟಿ ಸಂಪೂರ್ಣ ಬಂದ್ ಆಗುವ ನಿರೀಕ್ಷೆಯಿದೆ. ಬಂದ್ ಹಿನ್ನಲೆಯಲ್ಲಿ ನಗರದ ಎಲ್ಲಾ ಶಾಲಾ-ಕಾಲೇಜುಗಳಿಗೆ ಸಾರ್ವಜನಿಕ ರಜೆ ಘೋಷಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ತಿಳಿಸಿದ್ದಾರೆ. ಬೆಂಗಳೂರು ನಗರದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವಂತಿಲ್ಲ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ತಿಳಿಸಿದ್ದಾರೆ.
ಇದೇ ವೇಳೆ ಕನ್ನಡ ಪರ ಸಂಘಟನೆಗಳಿಂದ ಫ್ರೀಡಂ ಪಾರ್ಕ್, ರಾಜಭವನ, ಟೌನ್‌ಹಾಲ್‌ನಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆ. ಆದರೆ, ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶ ನೀಡಲಾಗುವುದು. ಬೇರೆಡೆ ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ- ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ : ʼಕಾವೇರಿʼ ಬಂದ್ ಹಿನ್ನೆಲೆ ಹೈಅಲರ್ಟ್ ಘೋಷಣೆ
ಬೆಂಗಳೂರು ಬಂದ್‌ಗೆ ಖಾಕಿ ಫುಲ್ ಅಲರ್ಟ್:
ಇನ್ನೂ ಬೆಂಗಳೂರು ಬಂದ್ ಹಿನ್ನಲೆಯಲ್ಲಿ ಮಧ್ಯರಾತ್ರಿಯಿಂದಲೇ ನಗರದಲ್ಲಿ ಖಾಕಿ ಕಣ್ಗಾವಲು ಹಾಕಲಾಗಿದೆ. ರಾತ್ರಿ 12 ಗಂಟೆಯಿಂದಲೇ ಹೊಯ್ಸಳ ಸಿಬ್ಬಂದಿ ಸಿಟಿ ರೌಂಡ್ಸ್ ಮಾಡುತ್ತಾ ಆಯ್ದ ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ತಿರುಗುತ್ತಿದ್ದರು. ಇದಲ್ಲದೆ, ಬೆಂಗಳೂರು ಕಮಿಷನರ್ ಪ್ರತಿ ಏರಿಯಾದಲ್ಲಿ ನಿಗಾ ವಹಿಸಿ ಗಸ್ತು ಮಾಡಲು ಸೂಚನೆ ನೀಡಿದ್ದು, ಸಣ್ಣ ಪುಟ್ಟ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳುವಂತೆಯೂ ಹಾಗೂ ಹೋರಾಟ, ಧರಣಿ, ಪ್ರತಿಭಟನೆಗಳ ಮಾಹಿತಿ ಸಂಗ್ರಹಿಸಲು ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೆ, ಮುಂಜಾಗ್ರತಾ ಸಲುವಾಗಿ ಅನುಮಾನಿತ ವ್ಯಕ್ತಿಗಳನ್ನ ವಶಕ್ಕೆ ಪಡೆಯಲು ಮತ್ತು ದುಷ್ಕೃತ್ಯಗಳಲ್ಲಿ ಭಾಗಿಯಾಗುವ ಕೆಲವು ಕಿಡಿಗೇಡಿಗಳನ್ನ ವಶಕ್ಕೆ ಪಡೆಯಲು ಸೂಚನೆ ನೀಡಲಾಗಿದೆ.
ಇದಲ್ಲದೆ, ರಾಜ್ಯದಲ್ಲಿ ತಮಿಳು ಭಾಷಿಕರು ವಾಸಿಸುವ ಪ್ರದೇಶಗಳಲ್ಲಿ ಬಂದೋಬಸ್ತ್ ಮತ್ತು ಪೊಲೀಸ್ ಗಸ್ತು, ಅಯಾ ಠಾಣಾ ವ್ಯಾಪ್ತಿಯಲ್ಲಿ ಗಸ್ತು ಕೈಗೊಳ್ಳಲು ಸೂಚನೆ ನೀಡಲಾಗಿದೆ. ಮುನ್ನೆಚ್ಚರಿಕೆ ಸಲುವಾಗಿ ಬೆಳ್ಳಂಬೆಳಗ್ಗೆ ರಸ್ತೆ ಮೇಲೆ ಖಾಕಿ ಪಹರೆ ನಡೆಸಿದ್ದು ಪ್ರಮುಖ ವೃತ್ತ, ರಸ್ತೆಗಳು, ಜಂಕ್ಷನ್, ಏರಿಯಾಗಳಲ್ಲಿ ಹದ್ದಿನ ಕಣ್ಣು ಇರಿಸಿದ್ದಾರೆ. ಇದಲ್ಲದೆ, ತಮಿಳುನಾಡು ವಾಹನಗಳು, ಬಸ್ ಗಳ ಹಾನಿಯಾಗದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಇದಕ್ಕಾಗಿ ಪ್ರಮುಖ ವೃತ್ತಗಳು ಹಾಗೂ ರಸ್ತೆ ಬದಿಯಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಬಂದ್ ರೂಪುರೇಷೆ:
-ಬೆಳಗ್ಗೆ 11 ಗಂಟೆ ಅಷ್ಟು ಹೊತ್ತಿಗೆ ಟೌನ್ ಹಾಲ್ ಬಳಿ ಸೇರಲಿರುವ ಜಲ ಸಂರಕ್ಷಣ ಸಮಿತಿ ಸದಸ್ಯರು
- ಸುಮಾರು 100ಕ್ಕೂ ಅಧಿಕ ವಿವಿಧ ಸಂಘಟನೆಗಳ ಭಾಗಿ
- ರೈತ ಮುಖಂಡರು, ಕನ್ನಡ ಪರ ಹೋರಾಟಗಾರರು, ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಸೇರಿ ಸಾವಿರಾರು ಸಂಖ್ಯೆಯಲ್ಲಿ ಭಾಗಿ
- ಅಲ್ಲಿಂದ ನೇರ ನೇರಾ ಮೈಸೂರು ಬ್ಯಾಂಕ್ ವೃತ್ತದತ್ತ ಹೊರಡಲಿರುವ ರ್ಯಾಲಿ
- ಮೈಸೂರು ವೃತ್ತದಲ್ಲಿ ಶಕ್ತಿ ಪ್ರದರ್ಶನಕ್ಕೆ ಭರ್ಜರಿ ತಯಾರಿ
ಖಾಸಗಿ ಸಾರಿಗೆ ಸಂಘಟನೆ ರ್ಯಾಲಿ
- ಶಾಲಾ ವಾಹನ ಒಕ್ಕೂಟ ಹೊರತು ಪಡಿಸಿ, ಆದರ್ಶ್ ಆಟೋ ಯೂನಿಯನ್, ಓಲಾ ಉಬರ್ ಅಸೋಸಿಯೇಶನ್ ಹೊರತು ಪಡಿಸಿ ಉಳಿದ ಎಲ್ಲಾ ಸಂಘಟನೆ ಬಂದ್ ಗೆ ಸಾಥ್
- 35ಕ್ಕೂ ಅಧಿಕ ಸಂಘಟನೆ ಸ್ವಯಂ ಪ್ರೇರಿತರಾಗಿ ಬಂದ್ ಅಲ್ಲಿ ಭಾಗಿ
- ಸುಮಾರು 2/3ಸಾವಿರಕ್ಕೂ ಅಧಿಕ ಮಂದಿ ರ್ಯಾಲಿ ಅಲ್ಲಿ ಭಾಗಿ
- ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಿಂದ ಬೆಳಿಗ್ಗೆ 9 ಗಂಟೆಯಿಂದ ಆರಂಭ ಆಗುವ ಬ್ರಹತ್ ರ್ಯಾಲಿ
- ಮೈದಾನದಿಂದ ಫ್ರೀಡಂ ಪಾರ್ಕ್ ಜಾಯಿನ್ ಆಗಲಿರುವ ಪ್ರತಿಭಟನಾಕಾರರು
- ಅಲ್ಲಿಂದ ನೇರವಾಗಿ ಜಲ ಸಂರಕ್ಷಣ ಸಮಿತಿ ಜೊತೆ ಸೇರಿ ಫ್ರೀಡಂ ಪಾರ್ಕ್ ನತ್ತ ಸಾಗಲಿರುವ ರ್ಯಾಲಿ
- ಆಟೋ, ಟ್ಯಾಕ್ಸಿ, ಖಾಸಗಿ ಬಸ್ ಮಾಲೀಕರು ಚಾಲಕರು ಸಾತ್
- ದೊಡ್ಡ ಮಟ್ಟದ ಶಕ್ತಿ ಪ್ರದರ್ಶನಕ್ಕೆ ಭರ್ಜರಿ ತಯಾರಿ ಮಾಡಿಕೊಳ್ಳಲಾಗಿದೆ.
ಇದನ್ನೂ ಓದಿ- ಕಾವೇರಿ ನೆಪದಲ್ಲಿ ಬಿಜೆಪಿ-ಜೆಡಿಎಸ್ ಅವರು ರಾಜಕೀಯ ಮಾಡುತ್ತಿದ್ದಾರೆ- ಸಿಎಂ ಸಿದ್ದರಾಮಯ್ಯ
ಬೆಂಗಳೂರು ಬಂದ್: ಇಂದು ಏನಿರುತ್ತೆ?
* ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ ಸೇವೆಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ.
* ಮೆಟ್ರೋ ಸೇವೆಗಳು ಎಂದಿನಂತೆ ಲಭ್ಯವಿರುತ್ತವೆ.
* ಓಲಾ.. ಉಬರ್.. ಟ್ಯಾಕ್ಸಿ ಆಟೋ ಎಂದಿನಂತೆ ಕಾರ್ಯನಿರ್ವಹಿಸಲಿವೆ.
* ರಾಜಧಾನಿಯಲ್ಲಿ ಎಂದಿನಂತೆ ಬ್ಯಾಂಕ್‌ಗಳು ಕಾರ್ಯನಿರ್ವಹಿಸಲಿವೆ.
* ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು, ಔಷಧಾಲಯಗಳು
* ಪೆಟ್ರೋಲ್ ಬಂಕ್‌ಗಳು
* ಅಪ್ಲಿಕೇಶನ್ ಆಧಾರಿತ ಟ್ಯಾಕ್ಸಿಗಳು
* ಇದಲ್ಲದೆ, ಸಾರ್ವಜನಿಕರಿಗೆ ಅಗತ್ಯ ಸೇವೆಗಳಿಗೆ ಯಾವುದೇ ಅಡ್ಡಿ ಇರುವುದಿಲ್ಲ.
ಬೆಂಗಳೂರು ಬಂದ್: ಏನಿರಲ್ಲ?
>> ಬೆಂಗಳೂರು ಬಂದ್ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಶಾಲಾ-ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದೆ.
>> ಮತ್ತೊಂದೆಡೆ ವರ್ಕ್ ಫ್ರಮ್ ಹೋಂ ಸೌಲಭ್ಯವಿರುವ ಕಛೇರಿಗಳು ತಮ್ಮ ಉದ್ಯೋಗಿಗಳನ್ನು ಮನೆಯಿಂದಲೇ ಕೆಲಸ ಮಾಡುವಂತೆ ಕೇಳಿಕೊಂಡಿವೆ.
>> ವಾಣಿಜ್ಯ ಸಂಸ್ಥೆಗಳು, ಮಾಲ್‌ಗಳು, ಕೈಗಾರಿಕೆಗಳು
>> ಥಿಯೇಟರ್‌ಗಳು, ಮಲ್ಟಿಪ್ಲೆಕ್ಸ್‌ಗಳು ತೆರೆದಿರುವುದಿಲ್ಲ.
ಏನಿದು ಕಾವೇರಿ ಜಲವಿವಾದ?
ಹಲವು ದಶಕಗಳಿಂದ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಕಾವೇರಿ ಜಲವಿವಾದ ಮುಂದುವರೆದಿದೆ. ಈ ವರ್ಷ ಮೊದಲೇ ಸರಿಯಾಗಿ ಮಳೆಯಾಗದೆ ರೈತರು ಸಂಕಷ್ಟದಲ್ಲಿದ್ದಾರೆ. ಇದಲ್ಲದೆ, ರಾಜ್ಯದ ಕೆಲವು ಜಿಲ್ಲೆಗಳಿಗೆ ಜೀವ ಜಲವಾಗಿರುವ ಕಾವೇರಿ ನದಿ ನೀರಿನ ಒಡಲು ಬರಿದಾಗಿರುವುದರಿಂದ ಕುಡಿಯುವ ನೀರಿಗೂ ಆಹಾಕಾರ ಹೆಚ್ಚಾಗಿದೆ. ಈ ಮಧ್ಯೆ, 2023ರ ಸೆಪ್ಟೆಂಬರ್ 13 ರಿಂದ 15 ದಿನಗಳ ಕಾಲ ತಮಿಳುನಾಡಿಗೆ 5,000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಆದೇಶ ನೀಡಿದೆ. ಪ್ರಾಧಿಕಾರದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತಾದರೂ, ಕೋರ್ಟ್ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿರುವುದು ರಾಜ್ಯದ ಜನತೆಗೆ ಗಾಯದ ಮೇಲೆ ಬರೆ ಎಳೆದಂತಾಗಿದ್ದು ಆಕ್ರೋಶಕ್ಕೆ ಕಾರಣವಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=q9auZ2eqeZo
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.