ತಮಿಳುನಾಡಿಗೆ ಕಾವೇರಿ ನೀರು.. ಸರ್ಕಾರದ ವಿರುದ್ಧ `ಕೇಸರಿ` ಕಿಚ್ಚು..!
BJP Protest : ಕೆ ಆರ್ ಎಸ್ ಜಲಾಶಯದಿಂದ ಕಾವೇರಿ ನದಿ ಮೂಲಕ ತಮಿಳುನಾಡಿಗೆ ನೀರು ಹರಿಸುತ್ತಿರುವ ವಿಚಾರ ಇದೀಗ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ರಾಜ್ಯ ಸರ್ಕಾರದ ನಡೆ ಖಂಡಿಸಿ ಇವತ್ತು ಕಮಲಪಡೆ ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ಮಾಡೋ ಮೂಲಕ ಹೈಡ್ರಾಮಾ ಮಾಡಿತು. ಬಿಜೆಪಿ ಪ್ರತಿಭಟನೆಗೆ ಮಂಡ್ಯ ಸಂಸದೆ ಸುಮಲತಾ ಕೂಡ ಸಾಥ್ ನೀಡಿದ್ರು.
Kaveri River : ಹೌದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ ಆರ್ ಎಸ್ ಜಲಾಶಯದಿಂದ ಕಾವೇರಿ ನದಿಯ ಮೂಲಕ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನ ವಿರೋಧಿಸಿ ಇವತ್ತು ಮಂಡ್ಯದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು. ಅಂದಹಾಗೆ ಕೆ ಆರ್ ಎಸ್ ಜಲಾಶಯ ಮಂಡ್ಯ ಜಿಲ್ಲೆಯ ರೈತರ ಜೀವನಾಡಿ. ಈ ಬಾರಿ ಕೃಷ್ಣರಾಜಸಾಗರ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿಲ್ಲ.
ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗದ ಹಿನ್ನೆಲೆಯಲ್ಲಿ ಜಲಾಶಯ ಭರ್ತಿ ಆಗಿಲ್ಲ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಅಭಾವ ಎದುರಾಗಲಿದೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಕೆ ಆರ್ ಎಸ್ ಜಲಾಶಯದಿಂದ ಕಾವೇರಿ ನದಿಯ ಮೂಲಕ ತಮಿಳುನಾಡಿಗೆ ಪ್ರತಿನಿತ್ಯ 12 ಸಾವಿರ ಕ್ಯೂಸೆಕ್ ನೀರನ್ನ ಹರಿಸಲಾಗುತ್ತಿದೆ. ರಾಜ್ಯ ಸರ್ಕಾರದ ಈ ನಡೆಯನ್ನ ಖಂಡಿಸಿ ಇವತ್ತು ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು.
ಮಂಡ್ಯದ ಸಂಜಯ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ, ರಾಜ್ಯ ಸರ್ಕಾರ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ವಿರುದ್ದ ವಿನೂತನವಾಗಿ ಪ್ರತಿಭಟನೆ ನಡೆಸಿ, ಘೋಷಣೆಗಳನ್ನ ಕೂಗಿ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದ್ರು. ಪ್ರತಿಭಟನೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್, ಬೆಂಗಳೂರು ಸಂಸದ ಪಿ.ಸಿ ಮೋಹನ್ ಸೇರಿ ಅನೇಕರು ಭಾಗಿಯಾಗಿದ್ರು. ಇದೇ ವೇಳೆ ಮಾತನಾಡಿದ ಮಂಡ್ಯ ಸಂಸದೆ ಸುಮಲತಾ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದ್ರು.
ಇದನ್ನೂ ಓದಿ-Gruha Lakshmi Scheme: ಆಗಸ್ಟ್ 30ಕ್ಕೆ 1.09 ಕೋಟಿ ಮಹಿಳೆಯರ ಖಾತೆಗೆ ಬರಲಿದ್ದಾಳೆ ‘ಗೃಹಲಕ್ಷ್ಮಿ’!
ಇನ್ನು ಸದ್ಯ 124.80 ಅಡಿ ಗರಿಷ್ಠ ಸಾಮರ್ಥ್ಯದ ಡ್ಯಾಮ್ ನಲ್ಲಿ ಇದೀಗ 105 ಅಡಿ ನೀರು ಮಾತ್ರ ಸಂಗ್ರಹವಾಗಿದೆ. ಇಂತಹ ಪರಿಸ್ಥಿತಿಯಲ್ಲೂ ಸುಪ್ರೀಂ ಕೋರ್ಟ್ ನ ಆದೇಶವಿಲ್ಲದಿದ್ದರು ತಮಿಳುನಾಡಿಗೆ ನೀರನ್ನ ಹರಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಇವತ್ತು ಬಿಜೆಪಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿತು. ಪ್ರತಿಭಟನೆ ವೇಳೆ ಕಿವಿಯ ಮೇಲೆ ಹೂವು ಇಟ್ಟುಕೊಂಡು, ಹುರಳಿಯನ್ನ ರಸ್ತೆಗೆ ಚೆಲ್ಲಿ, ಬಾಯಿ ಬಡೆದುಕೊಂಡು, ಟೈಯರ್ ಗೆ ಬೆಂಕಿ ಹಾಕಿ ಪ್ರತಿಭಟನೆ ನಡೆಸಿದ್ರು.ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಅಲ್ಲದೆ ಬೆಂಕಿಯನ್ನ ನಂದಿಸಿ, ಪ್ರತಿಭಟನಾಕಾರನ್ನ ಚದುರಿಸಲು ಪೊಲೀಸರು ಹರಸಾಹಸ ಪಟ್ಟರು. ಇಲ್ಲಿಗೆ ಬಿಜೆಪಿ ಪ್ರತಿಭಟನೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಇದೇ ತಿಂಗಳ 26ರಿಂದ ಮತ್ತೆ ಪ್ರತಿಭಟನೆ ನಡೆಸಲು ಬಿಜೆಪಿ ಪ್ಲಾನ್ ಮಾಡಿದೆ.
ಒಟ್ಟಾರೆ ತಮಿಳುನಾಡಿಗೆ ನೀರು ಹರಿಸುತ್ತಿರುವುದು ರಾಜಕೀಯ ತಿರುವು ಪಡೆದುಕೊಂಡಿದ್ದು, ಇದೇ ವಿಚಾರವನ್ನ ರಾಜಕೀಯ ಲಾಭ ಪಡೆಯಲು ಬಿಜೆಪಿ ಪ್ಲಾನ್ ಮಾಡಿ ರಾಜ್ಯ ಸರ್ಕಾರದ ವಿರುದ್ದ ಬೃಹತ್ ಹೋರಾಟ ನಡೆಸುತ್ತಿದೆ. ಇದು ಮುಂದಿನ ದಿನಗಳಲ್ಲಿ ಮತ್ತಷ್ಟು ಕಾವು ಪಡೆಯಲಿದೆ.
ಇದನ್ನೂ ಓದಿ-ಪ್ರೀತಿಸಿ ನಂಬಿಸಿ ವಂಚಿಸಿದ್ದಾರಂತೆ 70 ರ ಅಜ್ಜ ! ಠಾಣೆ ಮೆಟ್ಟಿಲೇರಿದ್ದಾರೆ 63 ರ ಅಜ್ಜಿ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.