ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಚುನಾವಣೆಯ ಹೊಂದಾಣಿಕೆಗಾಗಿ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದೆ. ಈ ಪಾಪರ್ ಸರ್ಕಾರದ ಬಳಿ ಬರ ಪರಿಹಾರ ನೀಡಲು ಹಣವಿಲ್ಲ. ಆದರೆ ನೀರನ್ನು ಮಾತ್ರ ನೀಡುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಬಿಸಿಸಿಐ ನಿರ್ಧಾರ ಮೆಚ್ಚಿದ ರೋಹಿತ್ ಶರ್ಮಾ: 'ಪ್ರೋತ್ಸಾಹ ಯೋಜನೆ' ಜಾರಿ ಬಗ್ಗೆ ಏನಂದ್ರು ಕ್ಯಾಪ್ಟನ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ನಿರಂತರವಾಗಿ ಕಾವೇರಿ ನೀರು ಹರಿಸಿದೆ. ರೈತರು ಹೋರಾಟ ಮಾಡುತ್ತಿದ್ದಾರೆ. ಜನರು ಖಾಲಿ ಬಿಂದಿಗೆ ಹಿಡಿದುಕೊಂಡು ಬೀದಿಗಿಳಿದಿದ್ದಾರೆ. ಬೆಂಗಳೂರಿನಲ್ಲಿ ನೀರಿಗೆ ಕೊರತೆಯಾಗಿದೆ. ಇಷ್ಟಾದರೂ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಾರೆ ಎಂದರೆ ಇಂತಹ ನಾಚಿಕೆಗೆಟ್ಟ ಸರ್ಕಾರ ಇತಿಹಾಸದಲ್ಲೇ ಇಲ್ಲ ಎನ್ನಬೇಕು. ನಮ್ಮ ಕುಡಿಯುವ ನೀರನ್ನು ಚುನಾವಣಾ ಹೊಂದಾಣಿಕೆಗಾಗಿ ಬಿಟ್ಟುಕೊಡುತ್ತಾರೆ. ಈಗಾಗಲೇ ಓಟಿಗಾಗಿ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸ ಮಾಡಿದ್ದಾರೆ. ಈಗ ಹೊಂದಾಣಿಕೆಗಾಗಿ ರಾಜ್ಯಕ್ಕೆ ಕಾಂಗ್ರೆಸ್ ದ್ರೋಹ ಬಗೆಯುತ್ತಿದೆ ಎಂದು ಹೇಳಿದರು.
ಮೇಕೆದಾಟು ಯೋಜನೆ ಜಾರಿ ಮಾಡುತ್ತೇವೆಂದು ಹೋರಾಟ ಮಾಡಿ, ಈಗ ಕೇಂದ್ರ ಸರ್ಕಾರ ಮಾಡಬೇಕು ಎನ್ನುತ್ತಿದ್ದಾರೆ. ಆಯವ್ಯಯದಲ್ಲಿ ಮೇಕೆದಾಟು ಯೋಜನೆಗೆ ನಯಾ ಪೈಸೆ ನೀಡಿಲ್ಲ. ಇವರಿಗೆ ಮಾನವಿದ್ದರೆ 10 ಸಾವಿರ ಕೋಟಿ ರೂಪಾಯಿಯನ್ನು ಈ ಯೋಜನೆಗೆ ಮೀಸಲಿಡಬೇಕಿತ್ತು. ಜಾಗತಿಕ ಮಟ್ಟದಲ್ಲಿ ಬೆಂಗಳೂರಿನ ಮಾನವನ್ನು ತೆಗೆದಿದ್ದು, ಜನರಿಗೆ ಕಲುಷಿತ ನೀರು ನೀಡಲಾಗುತ್ತಿದೆ. ಖಜಾನೆಯನ್ನು ಲೂಟಿ ಹೊಡೆಯುವುದರಲ್ಲಿ ಎಲ್ಲರೂ ನಿರತರಾಗಿದ್ದಾರೆ ಎಂದರು.
ಕಾಂಗ್ರೆಸ್ ನಾಯಕರಿಗೆ ಬರ ಪರಿಹಾರ ತರಲು ಯೋಗ್ಯತೆ ಇಲ್ಲವಾದರೆ ರಾಜೀನಾಮೆ ಕೊಟ್ಟು ಹೋಗಲಿ. ನಾವು ಸರ್ಕಾರ ನಡೆಸುವಾಗ ಕೇಂದ್ರದ ಕಡೆ ನೋಡದೆ ರೈತರಿಗೆ ಪರಿಹಾರ ನೀಡಲಾಗಿತ್ತು. ಈಗಿನ ಸರ್ಕಾರ ಪಾಪರ್ ಆಗಿದ್ದು, ಕುಡಿಯುವ ನೀರಿಗೂ ಹಣವಿಲ್ಲ. ಕುಡಿಯುವ ನೀರು ಕೊಡುವ ಯೋಗ್ಯತೆ ಇಲ್ಲವಾದರೆ ಕುರ್ಚಿ ಬಿಟ್ಟು ತೊಲಗಲಿ ಎಂದು ಆಗ್ರಹಿಸಿದರು.
ಬರ ಪರಿಹಾರಕ್ಕೆ ಚುನಾವಣಾ ನೀತಿ ಸಂಹಿತೆ ಅನ್ವಯವಾಗುವುದಿಲ್ಲ. ಎಸ್ ಡಿ ಆರ್ ಎಫ್ ಹಣ ಈಗಾಗಲೇ ರಾಜ್ಯ ಸರ್ಕಾರಕ್ಕೆ ತಲುಪಿದೆ. ಎನ್ ಡಿ ಆರ್ ಎಫ್ ಹಣವನ್ನು ಕೇಂದ್ರ ಸರ್ಕಾರ ಒಟ್ಟಿಗೆ ತೀರ್ಮಾನ ಮಾಡಿ ಎಲ್ಲ ರಾಜ್ಯಗಳಿಗೆ ನೀಡುತ್ತದೆ. ಬಿಜೆಪಿ ಸರ್ಕಾರ ತಕ್ಷಣ ಪ್ರವಾಹ ಹಾನಿ ಪರಿಹಾರ ನೀಡಿದ್ದು, ಬಳಿಕ ಕೇಂದ್ರ ಸರ್ಕಾರ ಹಣ ನೀಡಿತ್ತು. ಮನಮೋಹನ್ ಸಿಂಗ್ ಸರ್ಕಾರವಿದ್ದಾಗ ಇದೇ ರೀತಿ ತಡವಾಗಿ ಪರಿಹಾರ ನೀಡಲಾಗಿತ್ತು. ಆಗ ಬಾಯಿ ಬಡಿದುಕೊಳ್ಳದ ಕಾಂಗ್ರೆಸ್, ಈಗ ಮಾತ್ರ ಬಾಯಿ ಬಡಿಯುತ್ತಿದೆ. ಕೇಂದ್ರದೊಂದಿಗೆ ಉತ್ತಮ ಸಂಬಂಧ ಇಟ್ಟುಕೊಳ್ಳದೆ ರಾಜಕೀಯ ಮಾಡುತ್ತಿದ್ದಾರೆ. ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿಯವರು ಪ್ರಧಾನಿಯ ಬಗ್ಗೆ ಉತ್ತಮವಾಗಿ ಮಾತನಾಡಿದ್ದಾರೆ. ಕರ್ನಾಟಕದ ಕಾಂಗ್ರೆಸ್ ನಾಯಕರು ಅವರ ಬಳಿ ಟ್ಯೂಶನ್ ಪಡೆಯಲಿ ಎಂದರು.
ಇದನ್ನೂ ಓದಿ: ಮೋದಿ ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದು ದೇವೇಗೌಡರು ಹೇಳಿದ್ದು ಮರೆತುಹೋಯ್ತಾ!? ಸಿಎಂ
ಲೋಕಸಭಾ ಚುನಾವಣೆಯಲ್ಲಿ ಯಾರಿಗೇ ಟಿಕೆಟ್ ಕೊಟ್ಟರೂ ಬಿಜೆಪಿ ಕಾರ್ಯಕರ್ತರು ಭಿನ್ನಾಭಿಪ್ರಾಯವಿಲ್ಲದೆ ನಿಷ್ಠೆಯಿಂದ ಕೆಲಸ ಮಾಡುವ ಮನೋಭಾವ ಹೊಂದಿದ್ದಾರೆ. ಪಕ್ಷ ಅಂತಿಮವಾಗಿ ಸೂಚಿಸುವ ಅಭ್ಯರ್ಥಿಗಳ ಪರವಾಗಿ ಎಲ್ಲರೂ ಕೆಲಸ ಮಾಡಲಿದ್ದಾರೆ. ಒಂದು ಬಾರಿ ಟಿಕೆಟ್ ಘೋಷಣೆಯಾದ ಬಳಿಕ ಎಲ್ಲರೂ ಒಂದಾಗಿ ಕೆಲಸ ಮಾಡಲಿದ್ದಾರೆ ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ