ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಮತ್ತೆ ಕಂಟಕ ಶುರುವಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ಜಾರಿ ಮಾಡಿದೆ. ನವೆಂಬರ್ 23ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ಸೂಚನೆ ನೀಡಲಾಗಿದೆ.


COMMERCIAL BREAK
SCROLL TO CONTINUE READING

ಅಕ್ಟೋಬರ್ 5ರಂದು ಸಿಬಿಐ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(D.K. Shivakumar) ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿದ್ದರು. ಇದೀಗ ಸಿಬಿಐ ದಾಳಿಯ ಬಳಿಕ ಇದೇ ಮೊದಲ ಬಾರಿಗೆ ಸಿಬಿಐ ಡಿಕೆ ಶಿವಕುಮಾರ್ ಅವರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ನವೆಂಬರ್ 23ರಕ್ಕೆ ದೆಹಲಿಯ ಸಿಬಿಐ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿರುವ ಸಿಬಿಐ ಅಧಿಕಾರಿಗಳು, ಡಿಕೆ ಶಿವಕುಮಾರ್ ಗೆ ಶಾಕ್ ನೀಡಿದೆ.


ಮಾಜಿ ಸಚಿವೆ, ನಟಿ ಉಮಾಶ್ರೀ ಅವರ ಇನ್ನೋವಾ ಕಾರು ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ


ಈ ಕುರಿತಂತೆ ಪ್ರತಿಕ್ರಿಯಿಸಿರುವಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಬಿಐ ನಿಂದ ವಿಚಾರಣೆಗೆ ಹಾಜರಾಗುವಂತೆ ಕರೆದಿದೆ. ನವೆಂಬರ್ 23ರಕ್ಕೆ ವಿಚಾರಣೆಗೆ ಬರುವಂತೆ ಸೂಚಿಸಿದೆ. ಹೀಗಾಗಿ ತಾವು ವಿಚಾರಣೆಗೆ ಹಾಜರಾಗುವುದಾಗಿಯೂ ತಿಳಿಸಿದ್ದಾರೆ.


ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ಡೆ ವಿರೋಧಿಸಿ ರೈತರಿಂದ ಜಾಥಾ