ಬೆಂಗಳೂರು : ಹೊಸ ವರ್ಷಾಚರಣೆ (New Year) ಸಮೀಪದಲ್ಲೇ ಸಿಸಿಬಿ ಪೊಲೀಸರು (CCB Police) ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ. ಪಾರ್ಟಿಗಳಿಗೆ ಸರಬರಾಜು ಮಾಡಲು ಶೇಖರಿಸಿದ್ದ ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಅಲ್ಲದೆ, ಡ್ರಗ್ಸ್ (Drugs) ಜಾಲದಲ್ಲಿ ತೊಡಗಿದ್ದ ಮೂವರು ನೈಜೀರಿಯ ಮೂಲದ ಆರೋಪಿಗಳನ್ನು ಬಂಧಿಸಲಾಗಿದೆ.
ಹೊಸ ವರ್ಷ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಪೋಲಿಸರು ಕಟ್ಟೆಚ್ಚರ ವಹಿಸಿದ್ದಾರೆ. ಪಾರ್ಟಿಗಳಿಗೆ ಮಾದಕ ದ್ರವ್ಯಗಳು ಸರಬರಾಜಾಗದಂತೆ ತಡೆಯಲು ಕಠಿಣ ಕ್ರಮಗಳನ್ನು ಅನುಸರಿಸುತ್ತಿದ್ದಾರೆ. ಇದೀಗ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು (CCB Police), ಡ್ರಗ್ಸ್ ಜಾಲದಲ್ಲಿ ತೊಡಗಿದ್ದ ನೈಜೀರಿಯ ಮೂಲದ ಮೂವರು ಆರೋಪಿಗಳನ್ನು (Drug case arrest) ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 80 ಲಕ್ಷ ಮೌಲ್ಯದ ಕೋಕೇನ್, ಎಂಡಿಎಂಎ, ಹ್ಯಾಶಿಶ್ ವಶ ಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ : ಭಾರತ ವಿಶ್ವಗುರು ಆಗಬೇಕೆನ್ನುವವರಿಂದ ಉನ್ನತ ಶಿಕ್ಷಣ ಉಳ್ಳವರ ಪಾಲಾಗುತ್ತಿದೆ: ಎಚ್ಡಿಕೆ
ಆರೋಪಿಗಳು ಮಾದಕ ವಸ್ತುಗಳನ್ನ ಸೋಪ್ ಬಾಕ್ಸ್ ಗಳಲ್ಲಿ ತರಿಸಿದ್ದರು. ಬಾಗಲೂರು ಠಾಣೆ ವ್ಯಾಪ್ತಿಯ ಮನೆಯಲ್ಲಿ ವಾಸವಾಗಿದ್ದ ಇವರು, ಮಾದಕ ವಸ್ತುಗಳನ್ನ ಮನೆಯಲ್ಲಿ ಶೇಖರಿಸಿಟ್ಟುಕೊಂಡು ಮಾರಾಟಕ್ಕೆ ಯತ್ನಿಸಿದ್ದರು ಎನ್ನಲಾಗಿದೆ. ಹೊಸ ವರ್ಷದ ಸಂದರ್ಭದಲ್ಲಿ ನಡೆಯುವ ಪಾರ್ಟಿಗಳಿಗೆ ಡ್ರಗ್ಸ್ ಸಪ್ಲೆ (Drugs supply) ಮಾಡಲು ಪ್ರಯತ್ನ ನಡೆಸುತ್ತಿದ್ದರು ಎನ್ನಲಾಗಿದೆ. ಕಾಲೇಜು ವಿದ್ಯಾರ್ಥಿಗಳು, ಐಟಿ ಉದ್ಯೋಗಿಗಳು, ಕೋಟಿ ಕುಳಗಳಿಗೆ ಡ್ರಗ್ಸ್ ಸಪ್ಲೈ ಮಾಡಲು ಸ್ಕೆಚ್ ಹಾಕಿದ್ದರು ಎಂದು ಆರೋಪಿಸಲಾಗಿದೆ.
ಬಂಧಿತ ಆರೋಪಿಗಳು ಮುಂಬೈಯಿಂದ ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನೂ ತರಿಸುತ್ತಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ. ಬಂಧಿತರಿಂದ 400 ಗ್ರಾಂ ಎಂಡಿಎಂಎ, 40 ಗ್ರಾಂ ಕೋಕೇನ್, 400 ಗ್ರಾಂ ಹ್ಯಾಶಿಶ್ ಮತ್ತು ಮಾದಕ ವಸ್ತಗಳು ತುಂಬಿದ್ದ 5 ಸೋಪ್ ಬಾಕ್ಸ್, ಒಂದು ತೂಕದ ಯಂತ್ರ, 5 ಮೊಬೈಲ್ ಫೋನ್ (mobile) ವಶಕ್ಕೆ ಪಡೆಯಲಾಗಿದೆ. ಬಂಧಿತರು ಬ್ಯುಸಿನೆಸ್ ವಿಸಾದಡಿ ಭಾರತಕ್ಕೆ ಬಂದಿದ್ದರೂ. ಆರೋಪಿಗಳ ವಿರುದ್ಧ ಬಾಗಲೂರು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ : Uttara Kannada: ಹೈಸ್ಕೂಲ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಆಸ್ಪತ್ರೆಗೆ ದಾಖಲು
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.