Kuvempu Birthday: ವಿಶ್ವ ಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಜಯಂತಿ ಆಚರಣೆ

Kuvempu birth anniversary: ಬೆಂಗಳೂರಿನ ಆರ್.ಟಿ.ನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ರಾಷ್ಟ್ರಕವಿ ಕುವೆಂಪು ಜಯಂತಿಯನ್ನ ಆಚರಿಸಲಾಯ್ತು. 

Written by - Zee Kannada News Desk | Last Updated : Dec 29, 2024, 06:55 PM IST
  • ಸಾಹಿತ್ಯ ಕ್ಷೇತ್ರದ ರಸಋಷಿ ಕುವೆಂಪು ಅವರ 120ನೇ ಜಯಂತಿ ಆಚರಣೆ
  • ಆರ್.ಟಿ.ನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ರಾಷ್ಟ್ರಕವಿಯ ಸ್ಮರಣೆ
  • ವಿಶ್ವ ಮಾನವ ದಿನವಾಗಿ ಮನುಜಪಥ, ವಿಶ್ವಪಥ ಸಾರಿದ ಕುವೆಂಪು ಜನ್ಮದಿನ ಆಚರಣೆ
Kuvempu Birthday: ವಿಶ್ವ ಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಜಯಂತಿ ಆಚರಣೆ title=
ಕುವೆಂಪು 120ನೇ ಜಯಂತಿ ಆಚರಣೆ

Kuvempu Birthday: ಕರ್ನಾಟಕ ಸಾಹಿತ್ಯ ಕ್ಷೇತ್ರದ ರಸಋಷಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ (ಕುವೆಂಪು) ಅವರ 120ನೇ ಜಯಂತಿ ಆಚರಣೆ ಇಂದು (ಡಿಸೆಂಬರ್ 29). ಮನುಜಪಥ, ವಿಶ್ವಪಥ ಸಾರಿದ ರಾಷ್ಟ್ರಕವಿ ಕುವೆಂಪು ಜನ್ಮದಿನವನ್ನು ವಿಶ್ವ ಮಾನವ ದಿನ ಎಂದು ಆಚರಿಸಲಾಗುತ್ತದೆ.

ಇದನ್ನೂ ಓದಿ: ಯಾವುದೇ ಸೂಕ್ತ ಭದ್ರತೆಯಿಲ್ಲದೇ ಮೆಟ್ರೋ ಕಾಮಗಾರಿ

ವಿಶ್ವ ಮಾನವ ಸಂದೇಶ ಸಾರಿದ ಕನ್ನಡದ ಪ್ರಥಮ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿ ಕುವೆಂಪು ಅವರ ಸಾಹಿತ್ಯಕ್ಕೆ ಕೊಡುಗೆ ಅಪಾರ. ಅವರನ್ನು ಸ್ಮರಿಸುವ ನಿಟ್ಟಿನಲ್ಲಿ ಬೆಂಗಳೂರಿನ ಆರ್.ಟಿ.ನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ರಾಷ್ಟ್ರಕವಿ ಕುವೆಂಪು ಜಯಂತಿಯನ್ನ ಆಚರಿಸಲಾಯ್ತು. 

ಇದನ್ನೂ ಓದಿ: ಹೊಸ ವರ್ಷಾಚರಣೆ ವೇಳೆ ದುರ್ವರ್ತನೆ ತೋರಿದರೆ ಕಠಿಣ ಕ್ರಮ: ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕವಿ ಸುಬ್ಬು ಹೊಲೆಯಾರ್ ಆಗಮಿಸಿ, ಕುವೆಂಪು ಅವರ ವೈಚಾರಿಕ ಚಿಂತನೆ ಕುರಿತು ಮಾತನಾಡಿದರು. ಸಮಾರಂಭದಲ್ಲಿ ಆರ್.ಟಿ.ನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಎಂ.ಸಿ.ಮರಿಯಪ್ಪ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News