ನನಗೂ ಏಪ್ರಾನ್, ಸ್ಟೆಥಸ್ಕೋಪ್ ಹಾಕಿಕೊಂಡು ಓಡಾಡೋ ಆಸೆ ಇತ್ತು, ಮೆಡಿಕಲ್ ಸೀಟೇ ಸಿಗಲಿಲ್ಲ: ಸಿಎಂ ಸಿದ್ದರಾಮಯ್ಯ

Siddaramaiah : ಯಾವುದೇ ವೃತ್ತಿಯಾದರೂ ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಮಾಡಿದರೆ ಅದಕ್ಕಿಂತ ದೊಡ್ಡ ಸಾರ್ಥಕತೆ ಮತ್ತೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Written by - Prashobh Devanahalli | Edited by - Zee Kannada News Desk | Last Updated : Aug 29, 2023, 09:39 PM IST
  • ಕೆ.ಆರ್.ಮೆಡಿಕಲ್ ಕಾಲೇಜಿನ ಶತಮಾನೋತ್ಸವ
  • ಶತಮಾನೋತ್ಸವವನ್ನು ಸಂಭ್ರಮದಿಂದ ಆಚರಿಸೋಣ
  • ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
ನನಗೂ ಏಪ್ರಾನ್, ಸ್ಟೆಥಸ್ಕೋಪ್ ಹಾಕಿಕೊಂಡು ಓಡಾಡೋ ಆಸೆ ಇತ್ತು, ಮೆಡಿಕಲ್ ಸೀಟೇ ಸಿಗಲಿಲ್ಲ: ಸಿಎಂ ಸಿದ್ದರಾಮಯ್ಯ  title=
ಸಿದ್ದರಾಮಯ್ಯ

ಮೈಸೂರು : ಯಾವುದೇ ವೃತ್ತಿಯಾದರೂ ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಮಾಡಿದರೆ ಅದಕ್ಕಿಂತ ದೊಡ್ಡ ಸಾರ್ಥಕತೆ ಮತ್ತೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಶತಮಾನೋತ್ಸವ ಆಚರಿಸುತ್ತಿರುವ ಕೆ.ಆರ್.ಆಸ್ಪತ್ರೆ ನವೀಕೃತ ಸುಟ್ಟ ಗಾಯಗಳ ಚಿಕಿತ್ಸಾ ಕಟ್ಟಡ ಮತ್ತು ರೇಡಿಯಾಲಜಿ ವಿಭಾಗ ಹಾಗೂ ಎಂ.ಆರ್.ಐ ಯಂತ್ರೋಪಕರಣ ಉದ್ಘಾಟಿಸಿ ಮಾತನಾಡಿದರು. 

ಪ್ರತಿಯೊಬ್ಬರೂ ಅವರವರ ವೃತ್ತಿ ಘನತೆಯನ್ನು ಕಾಪಾಡಿಕೊಳ್ಳಬೇಕು. ವೈದ್ಯ ವೃತ್ತಿ‌ ಬಹಳ ಶ್ರೇಷ್ಠವಾದದ್ದು. ನಮ್ಮ ತಪ್ಪಿನಿಂದ ಯಾವ ರೋಗಿಯೂ ಸಾಯಬಾರದು, ನರಳಬಾರದು ಎನ್ನುವ ವೃತ್ತಿ ಘನತೆ ಪ್ರತಿಯೊಬ್ಬ ವೈದ್ಯರಲ್ಲೂ ಇರಬೇಕು ಎಂದು ಕರೆ ನೀಡಿದರು. 

ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರಕ್ಕೆ 100 ದಿನ: ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಿದ ಬಿಜೆಪಿ 

ತಮ್ಮ ವಿದ್ಯಾರ್ಥಿ ಜೀವನದ ಆಸೆಯನ್ನು ನೆನಪಿಸಿಕೊಂಡ ಮುಖ್ಯಮಂತ್ರಿಗಳು, "ನನಗೂ ಏಪ್ರಾನ್ ಹಾಕೊಂಡು, ಸ್ಟೆಥಸ್ಕೋಪ್ ಕುತ್ತಿಗೆಗೆ ಹಾಕಿಕೊಂಡು ಓಡಾಡ್ಬೇಕು ಅನ್ನೋ ಆಸೆ ಇತ್ತು. ಕೆ.ಆರ್.ಮೆಡಿಕಲ್ ಕಾಲೇಜಿನ ಕ್ಯಾಂಟೀನ್ ಗೆ ನಾನು ಹೈಸ್ಕೂಲ್ ಓದುವಾಗ ಬರುತ್ತಿದ್ದೆ. ಆಗೆಲ್ಲಾ ನನಗೆ ಈ ಆಸೆ ಬರುತ್ತಿತ್ತು. ಆದರೆ ನನಗೆ ಮೆಡಿಕಲ್ ಸೀಟೇ ಸಿಗಲಿಲ್ಲ. ಸೀಟು ಸಿಕ್ಕಿದ್ದರೆ ವೈದ್ಯನಾಗುತ್ತಿದ್ದೆ, ಮುಖ್ಯಮಂತ್ರಿ ಆಗುತ್ತಿರಲಿಲ್ಲ ಎಂದು ನೆನಪಿಸಿಕೊಂಡರು. 

ಕೆ.ಆರ್.ಮೆಡಿಕಲ್ ಕಾಲೇಜು ಸಾವಿರಾರು ವೈದ್ಯರನ್ನು ಈ ದೇಶಕ್ಕೆ ಕೊಟ್ಟಿದೆ. ದೇಶದ ನಾನಾ ರಾಜ್ಯಗಳಲ್ಲಿ ಮತ್ತು ವಿದೇಶಗಳಲ್ಲೂ ಈ ಕಾಲೇಜಿನಲ್ಲಿ ಸಿದ್ದಗೊಂಡ ವೈದ್ಯರು ವೃತ್ತಿ ಘನತೆ ಹೆಚ್ಚಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 

ಕೆ.ಆರ್.ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಶತಮಾನೋತ್ಸವವನ್ನು ಸಂಭ್ರಮದಿಂದ ಆಚರಿಸೋಣ. ಇದಕ್ಕೆ ಅಗತ್ಯವಾದ ಎಲ್ಲಾ ಸಹಕಾರವನ್ನು ಸರ್ಕಾರ ನೀಡಲಿದೆ ಎಂದರು. 

ಇದನ್ನೂ ಓದಿ: ನೂರು ದಿನಕ್ಕೆ ಭಂಡ ಕಾಂಗ್ರೆಸ್ಸಿನ 100 ಕರ್ಮ ಕಾಂಡಗಳು: ಬಿಜೆಪಿ ಟೀಕೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News