ನವದೆಹಲಿ: ಧಾರವಾಡ ಜಿಲ್ಲೆಯ ರೈತರ ಬೇಡಿಕೆಗೆ ಅನುಗುಣವಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಧಾರವಾಡ ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳ ಮೂಲಕ ಹೆಸರುಕಾಳು ಹಾಗೂ ಉದ್ದು ಖರೀದಿಯನ್ನು ಕೂಡಲೇ ಆರಂಭಿಸಲು ಅನುಮೋದನೆ ನೀಡಿ ಆದೇಶ ಹೊರಡಿಸಿದೆ.


COMMERCIAL BREAK
SCROLL TO CONTINUE READING

ಕೇಂದ್ರ ಕೃಷಿ ಸಚಿವರಾದಶ್ರೀ ನರೇಂದ್ರ ಸಿಂಗ್ ತೋಮರ್ ಈ ಬಗ್ಗೆ ಆದೇಶ ಪ್ರತಿ ಹೊರಡಿಸಿದ್ದು ರೈತರಿಗೆ ಸಂತಸ ತಂದಿದೆ. ಈ ವಿಷಯವನ್ನು ಕೇಂದ್ರ ಸಚಿವ ಶ್ರೀ ಪ್ರಲ್ಹಾದ ಜೋಶಿ ತಿಳಿಸಿದ್ದು ಜಿಲ್ಲೆಯ ರೈತರು ಇದರ ಸದುಪಯೋಗ ಪಡೆಯಬೇಕೆಂದು ಕೋರಿದ್ದಾರೆ.


ಶುಕ್ರವಾರದಿಂದ ನೋಂದಣಿ ಕಾರ್ಯ ಆರಂಭವಾಗಿದ್ದು, ಹೆಸರು ಮತ್ತು ಉದ್ಫು ಖರೀದಿ ಕೇಂದ್ರ ತೆರೆಯಬೇಕು ಎಂದು ಕ್ಷೇತ್ರದ ರೈತರಿಂದ  ಬಹಳ ಬೇಡಿಕೆ ಬಂದಿತ್ತು.  ಈ ವಿಚಾರವಾಗಿ ಕೇಂದ್ರ ಕೃಷಿ ಸಚಿವರಲ್ಲಿ ಮನವಿ ಮಾಡಿ ಖರೀದಿ ಕೇಂದ್ರ ತೆರೆಯಲು ಒತ್ತಾಯಿಸಿದ್ದರ ಪರಿಣಾಮವಾಗಿ ಕೇಂದ್ರ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಿ ಖರೀದಿ ಕೇಂದ್ರ ತೆರೆಯಲು ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಶುಕ್ರವಾರದಿಂದ ನೋಂದಣಿ ಕಾರ್ಯ ಆರಂಭವಾಗಿದೆ.ಆ ಮೂಲಕ ರೈತರು ಬೆಳೆದ ಹೆಸರು ಕಾಳು ಹಾಗೂ ಉದ್ದನ್ನು ಸರ್ಕಾರ ಬೆಂಬಲ ಬೆಲೆಯಡಿ ಖರೀದಿ ಮಾಡಲಿದೆ ಎಂದು ಜೋಶಿ ತಿಳಿಸಿದ್ದಾರೆ.


ಕೊರೊನಾ ನಿರ್ವಹಣೆಯಲ್ಲಿ ಹುಬ್ಬಳ್ಳಿ ಕಿಮ್ಸ್ ರಾಜ್ಯಕ್ಕೆ ಮಾದರಿ - ಕೇಂದ್ರ ಸಚಿವ ಪ್ರಲ್ಹಾದ ಜೋಶಿ


ಹೆಸರು ಕಾಳಿಗೆ ಕ್ವಿಂಟಾಲ್ ಗೆ 7,196 ರೂ. ಗಳಂತೆ ಪ್ರತಿ ಎಕರೆಗೆ 4 ಕ್ವಿಂಟಾಲ್ ಹಾಗೂ ಉದ್ದು ಬೆಳೆಯನ್ನು 6000 ರೂ ನಂತೆ ಪ್ರತಿ ಎಕರೆಗೆ 3 ಕ್ವಿಂಟಾಲ್. ಗರಿಷ್ಟ 6 ಕ್ವಿಂಟಾಲ್ ಖರೀದಿ ಪ್ರಮಾಣ ನಿಗದಿಪಡಿಸಲಾಗಿದೆ ಎಂದು ಜೋಶಿ ತಿಳಿಸಿದ್ದಾರೆ.


ಧಾರವಾಡ ಜಿಲ್ಲೆಯ ಅಣ್ಣಿಗೇರಿ, ನವಲಗುಂದ ತಾಲೂಕಿನ ಮೊರಬ ಮತ್ತು ಹೆಬ್ಬಾಳದಲ್ಲಿ ಹೆಸರುಕಾಳು ಖರೀದಿ ಕೇಂದ್ರವನ್ನು ಆರಂಭಿಸುವಂತೆ ಆ ಭಾಗದ ರೈತರು ನನಗೆ ಪತ್ರ ಬರೆದು ಒತ್ತಾಯಿಸಿದ್ದರು ಎಂದು ತಿಳಿಸಿರುವ ಸಚಿವ ಜೋಶಿ, ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಒಟ್ಟು 11 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ, ಅಗತ್ಯ ದಾಖಲಾತಿಗಳೊಂದಿಗೆ ಆಕ್ಟೊಬರ್ 15ರೊಳಗೆ ನೋಂದಣಿ ಮಾಡಿಕೊಳ್ಳಲು ಸಮಯಾವಕಾಶವಿದ್ದು, ಡಿಸೆಂಬರ್ 15ರ ವರೆಗೆ ಖರೀದಿ ಪ್ರಕ್ರಿಯೆ ನಡೆಯಲಿದೆ ಜಿಲ್ಲೆಯ ರೈತರು ಇದರ ಸದುಪಯೋಗ ಪಡೆಯಬೇಕೆಂದು ಕೋರಿದ್ದಾರೆ.