ಚಾಮರಾಜನಗರ: ಅನ್ನ ಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡುತ್ತಿಲ್ಲ ಎಂದು ಆರೋಪಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ನೇತೃತ್ವದಲ್ಲಿ ಇಂದು ಚಾಮರಾಜನಗರದಲ್ಲಿ ಕೈ ಕಹಳೆ ಮೊಳಗಿಸಿತು.


COMMERCIAL BREAK
SCROLL TO CONTINUE READING

ಚಾಮರಾಜನಗರದ ಚಾಮರಾಜೇಶ್ವರ ದೇಗುಲ ಮುಂಭಾಗದಿಂದ ಸಚಿವ ವೆಂಕಟೇಶ್, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಹಾಗೂ ಎ‌‌.ಆರ್‌.ಕೃಷ್ಣಮೂರ್ತಿ ಸೇರಿದಂತೆ ಮುಖಂಡರು, ಕಾರ್ಯಕರ್ತರು ಮೆರವಣಿಗೆ ಹೊರಟು ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಭುವನೇಶ್ವರಿ ವೃತ್ತದಲ್ಲಿ ರಸ್ತೆತಡೆ ನಡೆಸಿದರು.


ಈ ವೇಳೆ ಸಚಿವ ವೆಂಕಟೇಶ್ ಮಾತನಾಡಿ, ಅಕ್ಕಿ ಕೊಡಲು ಮೊದಲು ಒಪ್ಪಿಗೆ ಕೊಟ್ಟಿದ್ದರು. ಬಳಿಕ, ಇದ್ದಕ್ಕಿದ್ದಂತೆ ನಿರಾಕರಿಸಿದ್ದಾರೆ. ಕೇಂದ್ರ ಸರ್ಕಾರ ಅಕ್ಕಿ ಕೊಡಲು ರಾಜ್ಯಕ್ಕೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಕಿಡಿಕಾರಿದರು.


ಇದನ್ನೂ ಓದಿ- PUC Supplementary Result 2023: ಪಿಯುಸಿ ಪೂರಕ ಫಲಿತಾಂಶ ಇಂದು ಪ್ರಕಟ: ಇಲ್ಲಿದೆ ಡೈರೆಕ್ಟ್ ಲಿಂಕ್


ನಾವೇನು ಅಕ್ಕಿಯನ್ನು ಉಚಿತವಾಗಿ ಕೇಳಿಲ್ಲ. ಹಣ ಕೊಡುತ್ತೇವೆ ಕೊಡಿ ಎಂದರೂ ಅಕ್ಕಿ ಕೊಡಲಿಲ್ಲ, ಕಾಂಗ್ರೆಸ್ ಸರ್ಕಾರಕ್ಕೆ ಒಳ್ಳೆಯ ಹೆಸರು ಬರಲಿದೆ ಎಂದು ದುರುದ್ದೇಶದಿಂದ ಅಕ್ಕಿ ಕೊಡಲು  ಬಿಜೆಪಿ ಕೇಂದ್ರ ಸರ್ಕಾರ ನಿರಾಕರಿಸಿದೆ.


ನಾವೇನು ಅಕ್ಕಿಯನ್ನು ಅಂಬಾನಿ, ಅದಾನಿಗೆ ಕೊಡುತ್ತಿಲ್ಲ- ಬಡವರಿಗೆ ಕೊಡುತ್ತಿದ್ದೇವೆ, ಬಡವರ ವಿರುದ್ಧ ಇರುವ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ನಡೆಗೆ ನಮ್ಮ ಧಿಕ್ಕಾರ ಇರಲಿ ಎಂದು ಧಿಕ್ಕಾರದ ಘೋಷಣೆ ಕೂಗಿದರು.


ಇದನ್ನೂ ಓದಿ- ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ರಾಜಕೀಯ ಪ್ರೇರಿತ ಪ್ರತಿಭಟನೆ: ಬಸವರಾಜ ಬೊಮ್ಮಾಯಿ


ಬಿಜೆಪಿ ಅವರು ಅಕ್ಕಿ ಕೊಡದಿದ್ದರೂ ನಾವು ಕಾರ್ಯಕ್ರಮವನ್ನು ಜಾರಿ ಮಾಡುತ್ತೇವೆ, ಬಡವರಿಗೆ ಉಚಿತವಾಗಿ 10 ಕೆಜಿ ಅಕ್ಕಿಯನ್ನು ಕೊಡುತ್ತೇವೆ, ಶಕ್ತಿ ಯೋಜನೆಯನ್ನು ಜನರು ಬಳಸಿಕೊಳ್ಳುತ್ತಿರುವುದನ್ನು ಕಂಡು ಬಿಜೆಪಿ ಅವರು ಸಹಿಸುತ್ತಿಲ್ಲ ಎಂದು ಆರೋಪ ಮಾಡಿದರು.


ಜಿಲ್ಲಾಡಳಿತ ಭವನದವರೆಗೂ ಕಾಂಗ್ರೆಸ್ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿತು. ರಸ್ತೆ ತಡೆ ನಡೆಸಿದ್ದರಿಂದ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು, ಸರಕು ತುಂಬಿದ ಲಾರಿಗಳು ಸಾಲುಗಟ್ಟಿ ನಿಂತಿದ್ದವು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ