ಕೇಂದ್ರ ಸರ್ಕಾರ ಕೇವಲ ಮಾತಿನ ಸರ್ಕಾರ: ಹೆಚ್.ವಿಶ್ವನಾಥ್

ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ ಎಂದು ಹೆಚ್ವಾ.ವಿಶ್ವನಾಥ್ ವಾಗ್ದಾಳಿ ನಡೆಸಿದರು. 

Updated: Aug 12, 2018 , 01:39 PM IST
ಕೇಂದ್ರ ಸರ್ಕಾರ ಕೇವಲ ಮಾತಿನ ಸರ್ಕಾರ: ಹೆಚ್.ವಿಶ್ವನಾಥ್

ಮೈಸೂರು: ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರ ಕೇವಲ ಮಾತಿನ ಸರ್ಕಾರ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಹೇಳಿದ್ದಾರೆ.

ಇಲ್ಲಿನ ಖಾಸಗಿ ಹೋಟೆಲೊಂದರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರಕಾರ ಮನ್ ಕಿ ಬಾತ್ ಮೂಲಕ ಕೇವಲ ಆಕಾಶವಾಣಿಯಲ್ಲೇ ಸರ್ಕಾರ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. 

ಮುಂದುವರೆದು ಮಾತನಾಡಿದ ಅವರು, ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ, ದೇವರಾಜ ಅರಸು, ಬಂಗಾರಪ್ಪ ಅವರು ಕಟ್ಟಿದ್ದ ಪಕ್ಷಗಳು ಇದುವರೆಗೂ ಉಳಿದಿಲ್ಲ. ಆದರೆ ಜೆಡಿಎಸ್ 1983ರಿಂದ ಜನರ ಮನಸ್ಸಿನಲ್ಲಿ ಪ್ರಬಲ ಪ್ರಾಂತೀಯ ಪಕ್ಷವಾಗಿ ಉಳಿದುಕೊಂಡಿದೆ. ಜನತಾ ಪರಿವಾರದ ಎರಡನೇ ದರ್ಜೆಯ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ. ಎಲ್ಲರನ್ನೂ ಸೇರಿಸಿಕೊಂಡು ಪ್ರಬಲ ಪ್ರಾಂತೀಯ ಪಕ್ಷ ಸಂಘಟನೆ ಮಾಡುವುದಾಗಿ ಹೆಚ್.ವಿಶ್ವನಾಥ್ ಹೇಳಿದರು.