ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದ ಸ್ಕಾಲರ್‍ಶಿಪ್...!

2020-21 ನೇ ಸಾಲಿಗೆ ರಾಷ್ಟೀಯ ವಿದ್ಯಾರ್ಥಿ ವೇತನ ಪೋರ್ಟಲ್ (ಎನ್.ಎಸ್.ಪಿ) ಅನ್ವಯ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖ್, ಭೌದ್ದರು ಹಾಗೂ ಪಾರ್ಸಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 30ರ ವರೆಗೆ ವಿಸ್ತರಿಸಲಾಗಿದೆ. 

Last Updated : Nov 5, 2020, 05:49 PM IST
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದ ಸ್ಕಾಲರ್‍ಶಿಪ್...! title=
ಸಾಂದರ್ಭಿಕ ಚಿತ್ರ

ಬೆಂಗಳೂರು: 2020-21 ನೇ ಸಾಲಿಗೆ ರಾಷ್ಟೀಯ ವಿದ್ಯಾರ್ಥಿ ವೇತನ ಪೋರ್ಟಲ್ (ಎನ್.ಎಸ್.ಪಿ) ಅನ್ವಯ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖ್, ಭೌದ್ದರು ಹಾಗೂ ಪಾರ್ಸಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 30ರ ವರೆಗೆ ವಿಸ್ತರಿಸಲಾಗಿದೆ. 

ವಿದ್ಯಾರ್ಥಿವೇತನ ಯೋಜನೆಗೆ ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್‍ನ ವೆಬ್‍ಸೈಟ್ www.sochalarships.gov.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು  (www.gokdom.kar.nic.in ಅಥವಾ  www.dom.karnataka.gov.in ನಲ್ಲಿ ದೊರೆಯವುದು)ಆನ್‍ಲೈನ್ ಅರ್ಜಿಸುವ ಬಗ್ಗೆ ವಿವರವಾದ ಸೂಚನೆಗಳು/ಕ್ರಮಾವಳಿಗಳು ಮತ್ತು ಸಂದೇಹಗಳಿಗೆ ಉತ್ತರಗಳು   (ಎಫ್‍ಎಕ್ಯೂಗಳು) www.gokdom.kar.nic.in ಅಥವಾ  www.dom.karnataka.gov.in ರಲ್ಲಿ ದೊರೆಯುವುದು.

ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿ/ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಮೆಟ್ರಿಕ್ ನಂತರದ ಮತ್ತು ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕಾಗಿ ಸಂಪರ್ಕಿಸಬಹುದು. 
 

Trending News