ಬೆಂಗಳೂರು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವ ವಿಚಾರವಾಗಿ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದ ಈ ವಿಚಾರವಾಗಿ ಕೇಂದ್ರ ಸರ್ಕಾರ ದೇಶದ ಕ್ಷಮೆಯನ್ನು ಕೋರಬೇಕು ಎಂದು ಆಗ್ರಹಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Bengaluru: ತುರ್ತುಚಿಕಿತ್ಸೆಗಳಿಗೆ ಮಾತ್ರ ಆಸ್ಪತ್ರೆಗೆ ಪ್ರವೇಶ, ಜಿಲ್ಲಾಧಿಕಾರಿಗಳ ಆದೇಶ


ತಳಸಮುದಾಯದ ಮಹಾಪುರುಷರ ಬಗ್ಗೆ  ಬಿಜೆಪಿ ಪಕ್ಷ ಮತ್ತು ಕೇಂದ್ರ ಸರ್ಕಾರಕ್ಕೆ ಇರುವ ಪೂರ್ವಗ್ರಹ ಮತ್ತು ತಿರಸ್ಕಾರಕ್ಕೆ ಸಾಕ್ಷಿ.ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಯಾವ ಕಾರಣಕ್ಕಾಗಿ ಅವಕಾಶ ನಿರಾಕರಿಸಲಾಗಿದೆ? ನಾರಾಯಣ ಗುರುಗಳು ಹಿಂದೂ ಧರ್ಮಕ್ಕೆ ಸೇರಿದವರಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.


ಡಿ.ಕೆ.ಶಿವಕುಮಾರ್ ಈ ರೀತಿ ಬೇಜವಾಬ್ದಾರಿಯ ಹೇಳಿಕೆ ಕೊಡುವುದು ಸರಿಯಲ್ಲ: ಸಚಿವ ಅಶ್ವತ್ಥ ನಾರಾಯಣ


ಶತಮಾನದ ಹಿಂದೆಯೇ ಅಸ್ಪೃಶ್ಯತೆ ಮತ್ತು ಪುರೋಹಿತಷಾಹಿ ವ್ಯವಸ್ಥೆ ವಿರುದ್ದ ಸಿಡಿದೆದ್ದು ಹಿಂದೂ ಧರ್ಮದ ಸುಧಾರಣೆಗೆ ತಮ್ಮನ್ನು ಅರ್ಪಿಸಿಕೊಂಡಿದ್ದ ನಾರಾಯಣ ಗುರುಗಳಿಗೆ ಅವಮಾನಿಸಿರುವ ಬಿಜೆಪಿ ಮತ್ತು ಕೇಂದ್ರ ಸರ್ಕಾರಕ್ಕೆ ಹಿಂದೂ ಧರ್ಮದ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ? ತಮ್ಮ ಮೂಗಿನಡಿಯಲ್ಲಿಯೇ ನಾರಾಯಣ ಗುರುಗಳಿಗೆ ಮಾಡಿರುವ ಅವಮಾನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇನ್ನೂ ಪ್ರತಿಕ್ರಿಯಿಸದೆ ಇರುವುದು ಆಶ್ಚರ್ಯಕರ.ಇದನ್ನು ಹೇಗೆ ಅರ್ಥೈಸಬೇಕು?ಈ ಅವಮಾನಕ್ಕೆ ಸಹಮತ ಇದೆಯೆಂದೇ? ಎಂದು ಅವರು ಪ್ರಶ್ನಿಸಿದರು.


ನಾನು ಮುಖ್ಯಮಂತ್ರಿಯಾಗಿದ್ದಾಗ ನಾರಾಯಣ ಗುರುಗಳ ಜಯಂತಿಯನ್ನು ರಾಜ್ಯ ಸರ್ಕಾರವೇ ಅಧಿಕೃತವಾಗಿ ಆಚರಿಸಬೇಕೆಂಬ ನಿರ್ಧಾರ ಕೈಗೊಂಡೆ.ಇದರಿಂದಾಗಿ ಇಂದು ರಾಜ್ಯದ ಮೂಲೆಮೂಲೆಗೆ ಗುರುಗಳ ಚಿಂತನೆಯ ಸಂದೇಶ ತಲುಪುತ್ತಿದೆ‌ ಎಂಬ ಹೆಮ್ಮೆ ಮತ್ತು ತೃಪ್ತಿ ನನ್ನದು ಎಂದು ಅವರು ಹೇಳಿದರು.


ಇದನ್ನೂ ಓದಿ: ಪ್ರಧಾನಿ ಕಿವಿಮಾತಿಗೆ ತಲೆದೂಗಿದ ರಾಜ್ಯ ಸರ್ಕಾರಗಳು: 'Lockdown' ಪದ ಬಳಕೆಯಿಂದ ದೂರ


ನಾರಾಯಣ ಗುರುಗಳಿಗೆ ಮಾಡಿರುವ ಅವಮಾನಕ್ಕಾಗಿ ಕೇಂದ್ರ ಸರ್ಕಾರ ದೇಶದ ಕ್ಷಮೆ ಕೇಳಬೇಕು.ಈ ಬಾರಿಯ ಗಣರಾಜ್ಯೋತ್ಸವದಲ್ಲಿ ನಾರಾಯಣ ಗುರುಗಳ ಸ್ತಬ್ಧ ಚಿತ್ರಕ್ಕೆ ಪ್ರಾಧಾನ್ಯ ಕೊಟ್ಟು ಅವಕಾಶ ನೀಡಬೇಕು ಎಂದು ಸಿದ್ಧರಾಮಯ್ಯ ಅವರು ಆಗ್ರಹಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.