ನವದೆಹಲಿ: ದೇಶದಲ್ಲಿ ಗೋಧಿ ಬೆಲೆ ಸ್ಥಿರತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ನಿಗಾ ವಹಿಸಲು ಕೇಂದ್ರ ಸರ್ಕಾರ ಕ್ರಮಕ್ಕೆ ಮುಂದಾಗಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ನೂತನ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಮಿತಿ ಸಭೆಯಲ್ಲಿ ಈ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದು, ಆಹಾರೋತ್ಪನ್ನಗಳ ಬೆಲೆ ಸ್ಥಿರತೆ ಕಾಯ್ದುಕೊಳ್ಳಲು ಇರುವ ಮಾರ್ಗಗಳ ಕುರಿತು ಮಾಹಿತಿ ಕಲೆ ಹಾಕಲಾಯಿತು ಎಂದು ಹೇಳಿದ್ದಾರೆ.
ಅಗತ್ಯ ವಸ್ತುಗಳ ಬೆಲೆಗಳನ್ನು ಪರಿಶೀಲಿಸಲೆಂದೇ ನಡೆದ ಈ ಸಭೆಯಲ್ಲಿ ವಿಶೇಷವಾಗಿ ಗೋಧಿ ದಾಸ್ತಾನು ಮತ್ತು ಬೆಲೆ ಬಗ್ಗೆ ಪ್ರಸ್ತಾಪಿಸಿ, ಚರ್ಚಿಸಲಾಯಿತು.
2024ರ ಜೂನ್ 18ರವರೆಗೆ 266 ಲಕ್ಷ ಮೆಟ್ರಿಕ್ ಟನ್ ಗೋಧಿ ಸಂಗ್ರಹಿಸಲಾಗಿದೆ. 2023ರಲ್ಲಿ ಇದೇ ವೇಳೆಗೆ 262 LMT ಗೋಧಿ ಸಂಗ್ರಹ ಇತ್ತೆಂದು ಸಚಿವ ಜೋಶಿ ತಿಳಿಸಿದ್ದಾರೆ.
ಇದನ್ನೂ ಓದಿ: ಬ್ಲಡ್ ಶುಗರ್ ನಿಯಂತ್ರಣಕ್ಕೆ ಒಂದು ಚಮಚ ತುಪ್ಪ ಸಾಕು! ಈ ಪುಡಿಯ ಜೊತೆ ಬೆರೆಸಿ ಸೇವಿಸಿದರೆ ದಿನಪೂರ್ತಿ ನಾರ್ಮಲ್ ಆಗಿರುತ್ತೆ
ಗೋಧಿ ದಾಸ್ತಾನು ಮತ್ತು ಬೆಲೆಗಳ ಬಗ್ಗೆ ಸಮಗ್ರ ಚರ್ಚೆ ನಡೆದಿದ್ದು, 2023ಕ್ಕೆ ಹೋಲಿಸಿದರೆ ಈ ಬಾರಿ 4 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಗೋಧಿ ದಾಸ್ತಾನಿದೆ. PDS ಮತ್ತು ಇತರ ಕಲ್ಯಾಣ ಯೋಜನೆಗಳ ಅಗತ್ಯವನ್ನು ಪೂರೈಸಿದ ನಂತರ ಸುಮಾರು 184 LMTನಷ್ಟು ಗೋಧಿ ದಾಸ್ತಾನು ಲಭ್ಯವಿರಲಿದೆ ಎಂದು ಹೇಳಿದ್ದಾರೆ.
ಗೋಧಿ ಬೆಲೆಗಳ ಮೇಲೆ ನಿಕಟವಾಗಿ ನಿಗಾ ಇಡಲು ಮತ್ತು ದೇಶದ ಗ್ರಾಹಕರಿಗೆ ಬೆಲೆ ಸ್ಥಿರತೆಗಾಗಿ ಸೂಕ್ತ ನೀತಿ ರೂಪಿಸಿ ಕ್ರಮ ಕೈಗೊಳ್ಳಬಹುದು ಎಂದು ಸಭೆಯಲ್ಲಿ ಸಚಿವ ಪ್ರಲ್ಹಾದ ಜೋಶಿ ಸಲಹೆ ನೀಡಿದ್ದಾರೆ.
ಇದನ್ನೂ ಓದಿ: ಟಿ20 ವಿಶ್ವಕಪ್’ನಲ್ಲಿ ಸೆಮೀಸ್ ಪ್ರವೇಶಿಸಬೇಕಂದ್ರೆ ಈ 3 ಕಠಿಣ ಸವಾಲು ಜಯಿಸಲೇಬೇಕು ಟೀಂ ಇಂಡಿಯಾ!
ರಾಜ್ಯ ಸಚಿವರು ಮತ್ತು ಉನ್ನತ ಅಧಿಕಾರಿಗಳ ಸಭೆ' ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ರಾಜ್ಯ ಸಚಿವರು ಮತ್ತು ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಪ್ರಲ್ಹಾದ ಜೋಶಿ ಅವರೂ ಪ್ರತ್ಯೇಕ ಸಭೆ ನಡೆಸಿದರು.
ಅಧ್ಯಕ್ಷತೆ ವಹಿಸಿದ್ದ ಸಚಿವರು, ಸಚಿವಾಲಯದ ವಿವಿಧ ಕಾರ್ಯಗಳ ಬಗ್ಗೆ ಕುರಿತು ಚರ್ಚೆ ನಡೆಸಿದರು. ಸಚಿವಾಲಯ ಮತ್ತು ಅದರ ಕಚೇರಿಗಳ ಕಾರ್ಯನಿರ್ವಹಣೆ ಪರಿಶೀಲಿಸಿ ಕಾರ್ಯಕ್ಷಮತೆಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವಂತೆ ನಿರ್ದೇಶನ ನೀಡಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.









