ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಈವರೆಗೂ ಸ್ಪಂದಿಸಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮಾಡುವಂತೆ ಮುಖ್ಯಮಂತ್ರಿಯವರು ಪತ್ರ ಬರೆದಿದ್ದಾರೆ. ಎಸ್ಐಟಿ ಪತ್ರ ಬರೆದಿದೆ.ಆದರೆ ಈವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ‌ ಎಂದು ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಕೇಂದ್ರ ಸರ್ಕಾರವು ಕಾನೂನಿನ ಚೌಕಟ್ಟಿನಲ್ಲಿ ಸಹಾಯ ಮಾಡಬೇಕು.ಬರೀ ಟೀಕೆ ಮಾಡಿದರೆ ಅರ್ಥವಿಲ್ಲ.ಪ್ರಜ್ವಲ್ ರೇವಣ್ಣ ಮೇಲೆ ವಾರಂಟ್ ಜಾರಿ ಮಾಡಿರುವುದನ್ನು ತಿಳಿಸಲಾಗಿದೆ.ವಾರಂಟ್ ಜಾರಿಯಾದ ನಂತರ ಪಾಸ್‌ಪೋರ್ಟ್ ರದ್ದುಗೊಳಿಸುವುದು ಕೇಂದ್ರ ಸರ್ಕಾರದ ಕರ್ತವ್ಯ ಎಂದು ಪರಮೇಶ್ವರ್ ತಿಳಿಸಿದ್ದಾರೆ.


ಇದನ್ನೂ ಓದಿ : ಕೈ ಸರ್ಕಾರಕ್ಕೆ ಒಂದು ವರ್ಷ : ಡಿನ್ನರ್ ಪಾರ್ಟಿ ಆಯೋಜನೆ; ಯಾವೆಲ್ಲಾ ವಿಷಯ ಟೇಬಲ್ ಮೇಲೆ?


ಉಪಮುಖ್ಯಮಂತ್ರಿಯವರದ್ದು ಎನ್ನಲಾದ ಆಡಿಯೋ ಕುರಿತು ಹೆಚ್.ಡಿ.ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಅವರು ಪ್ರತಿಯೊಂದಕ್ಕು ಮಾತನಾಡುತ್ತಿದ್ದಾರೆ.ಕಾನೂನಿನ ಚೌಕಟ್ಟಿನಲ್ಲಿ ಎಸ್ಐಟಿ ಏನೆಲ್ಲ ಕೆಲಸ ಮಾಡಬೇಕೋ ಅದನ್ನು ಮಾಡುತ್ತಿದೆ. ಕುಮಾರಸ್ವಾಮಿ ತನಿಖೆ ಹೀಗೆ ನಡೆಯಬೇಕು,ಹಾಗೇ ಮಾಡಬೇಕು ಅಂತ ಹೇಳಿದ ಹಾಗೇ ಕಾಣುತ್ತಿದೆ ಎಂದು ಆರೋಪಿಸಿದರು.


ಬಿಜೆಪಿಯವರ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು,ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ ಎಂಬುದನ್ನು ನಾನು ಮತ್ತು ಮುಖ್ಯಮಂತ್ರಿಯವರು ಅಂಕಿ-ಅಂಶ ಮೂಲಕ ಪ್ರಕಟಿಸಿದ್ದೇವೆ.ಯಾರ ಕಾಲದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗಿದ್ದವು ಎಂಬುದಕ್ಕೆ ಅಂಕಿ-ಅಂಶಗಳಿವೆ.ಅದಕ್ಕೆ ಬಿಜೆಪಿಯವರು ಮೊದಲು ಉತ್ತರ ನೀಡಲಿ ಎಂದರು.


ಖಾಸಗಿ ವಲಯದಲ್ಲಿ ಮೀಸಲಾತಿ‌ ನೀಡಬೇಕೆಂದು ಬಹಳ ಹಿಂದಿನಿಂದಲೂ ಒತ್ತಾಯಿಸಿದವರು ನಾವು. ಲಕ್ಷಾಂತರ ಹುದ್ದೆಗಳನ್ನು ಯಾರಿಗೂ ಗೊತ್ತಿಲ್ಲದೆ ನೇಮಕ ಮಾಡಿಕೊಳ್ಳುತ್ತಿದ್ದರು.ಹೀಗಾಗಿ ಹೊರಗುತ್ತಿಗೆ ಹುದ್ದೆಗಳಿಗೆ ಮೀಸಲಾತಿ ನೀಡಲಾಗುತ್ತಿದೆ.ನೇಮಕ ಮಾಡಿಕೊಳ್ಳುವಾಗ ಮೆರಿಟ್‌ನಲ್ಲಿ ಹೊಂದಾಣಿಕೆಯಾಗುವುದು ಬೇಡ.ದಲಿತ ಸಮುದಾಯದ ಪದವೀದರರು ಮೆರಿಟ್‌ನಲ್ಲಿ ಬರುತ್ತಿದ್ದಾರೆ.ಮೆರಿಟ್ ಮೇಂಟೇನ್ ಮಾಡಿ,ಗುಣಮಟ್ಟ ಹಾಳಾಗಲ್ಲ ಎಂದು ತಿಳಿಸಿದರು.


ಇದನ್ನೂ ಓದಿ : Karnataka Weather Update: ಪ್ರಸಕ್ತ ವರ್ಷ ಕರ್ನಾಟಕದಾದ್ಯಂತ 23 ಮಿಮೀ ಅಧಿಕ ಮಳೆ!


ಸ್ಥಳೀಯ ಸಂಸ್ಥೆಯ ಚುನಾವಣೆ ನೆನೆಗುದಿಗೆ ಬಿದ್ದಿವೆ. ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಾದರೆ ಸ್ಥಳೀಯ ಸಂಸ್ಥೆಗಳಲ್ಲಿ ಜನಪ್ರಿತಿನಿಧಿಗಳು ಬೇಕು. ಕೋರ್ಟ್‌ನ ಆದೇಶ ಯಾವಾಗ ಬೇಕಾದರೂ ಬರಬಹುದು. ಇದನ್ನು ಗಮನದಲ್ಲಿಟ್ಟುಕೊಂಡು ಚುನಾವಣೆಗೆ ತಯಾರಿ ಮಾಡಿಕೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷರು ತಿಳಿಸಿರಬಹುದು ಎಂದು ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews