ಐಶ್ವರ್ಯ ಗೌಡ ಕೇಸಿನಲ್ಲಿ ಅನಿತಾ ಕುಮಾರಸ್ವಾಮಿ,ನಿಖಿಲ್ ಹೆಸರು ಪ್ರಸ್ತಾಪ : ಮಹಿಳೆ ಯಾವಾಗ? ಎಲ್ಲಿ ಭೇಟಿ ಮಾಡಿದ್ದರು ಹೇಳಲಿ :ಹೆಚ್.ಡಿ.ಕೆ

ಘಟನೆ ನಡೆದಿದ್ದು 2016-2019ರಲ್ಲಿಯಂತೆ. ದೂರು ಸ್ವೀಕರಿಸುವುದು ಈಗ.  ಈ ಸರಕಾರ ಯಾವಾಗ ಏನು ಬೇಕಾದರೂ ಮಾಡುತ್ತದೆ. ಸರಕಾರದಲ್ಲಿ ಅಧಿಕಾರ ವರ್ಗವನ್ನು ಯಾವ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ ಇವರು ಎನ್ನುವುದು ಗೊತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ  ಕುಮಾರಸ್ವಾಮಿ ಹೇಳಿದ್ದಾರೆ. 

Written by - Ranjitha R K | Last Updated : Jan 3, 2025, 05:01 PM IST
  • ಈ ಸರಕಾರ ಯಾವಾಗ ಏನು ಬೇಕಾದರೂ ಮಾಡುತ್ತದೆ.
  • 2016ರಲ್ಲಿ ಪ್ರಕರಣ ನಡೆದಿದೆ ಎಂದು 2024ರಲ್ಲಿ ದೂರು ಕೊಡುತ್ತಾರೆ.
  • 2018ರಲ್ಲಿ ನಾನೇ ಸಿಎಂ ಇದ್ದೆ, ಆಗ ಯಾಕೆ ದೂರುದಾರರು ಬರಲಿಲ್ಲ
ಐಶ್ವರ್ಯ ಗೌಡ ಕೇಸಿನಲ್ಲಿ ಅನಿತಾ ಕುಮಾರಸ್ವಾಮಿ,ನಿಖಿಲ್ ಹೆಸರು ಪ್ರಸ್ತಾಪ : ಮಹಿಳೆ ಯಾವಾಗ? ಎಲ್ಲಿ ಭೇಟಿ ಮಾಡಿದ್ದರು ಹೇಳಲಿ :ಹೆಚ್.ಡಿ.ಕೆ  title=

ಬೆಂಗಳೂರು: ಐಶ್ವರ್ಯ ಗೌಡ ಎನ್ನುವ ಮಹಿಳೆ ಯಾವಾಗ, ಎಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆಂಬ ಮಾಹಿತಿ ಕೊಟ್ಟರೆ ಒಳಿತು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಐಶ್ವರ್ಯ ಗೌಡ ಕೇಸ್ ನಲ್ಲಿ ನಿಖಿಲ್, ಅನಿತಾ ಕುಮಾರಸ್ವಾಮಿ ಅವರ ಹೆಸರುಗಳು ಪ್ರಸ್ತಾಪವಾಗಿವೆ. ಇದರ ಹಿಂದೆ ಯಾರ ಕೈಗಳಿವೆ ಎನ್ನುವುದು ಗೊತ್ತಾಗುತ್ತದೆ.ಈಗ ರಾಜ್ಯದಲ್ಲಿ ಚಿನ್ನ, ಬೆಳ್ಳಿ ಕೇಸ್ ನಲ್ಲಿ ಅವರ ಹೆಸರುಗಳನ್ನು ಎಳೆದು ತರಲಾಗುತ್ತಿದೆ. ಅಂದಹಾಗೆ ಐಶ್ವರ್ಯ ಗೌಡ ಎಂಬ ಮಹಿಳೆ ಇವರಿಬ್ಬರನ್ನು ಯಾವಾಗ  ಭೇಟಿ ಮಾಡಿದ್ದರು? ಈ ಸರಕಾರದಲ್ಲಿ ಎಷ್ಟರ ಮಟ್ಟಿಗೆ ತನಿಖೆ ನಡೆಯುತ್ತಿದೆ ಎನ್ನುವುದು  ಗೊತ್ತಿದೆ. ಮಾಧ್ಯಮಗಳಲ್ಲಿ ಈ ವಿಷಯ ಬಂದ ಮೇಲೆ ನಾನು ಮಾಹಿತಿ ಪಡೆದುಕೊಂಡಿದ್ದೇನೆ. ಕೇಸ್ ಹಿನ್ನಲೆ ತಿಳಿದಿಕೊಂಡಿದ್ದೇನೆ ಎಂದರು.

ಇದನ್ನೂ ಓದಿ :ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಅನುಮಾನಸ್ಪದ ಸಾವು: ಪ್ರಾಂಶುಪಾಲ ಸೇರಿ ಇಬ್ಬರು ಅಮಾನತು

ಘಟನೆ ನಡೆದಿದ್ದು 2016-2019ರಲ್ಲಿಯಂತೆ. ದೂರು ಸ್ವೀಕರಿಸುವುದು ಈಗ.  ಈ ಸರಕಾರ ಯಾವಾಗ ಏನು ಬೇಕಾದರೂ ಮಾಡುತ್ತದೆ. ಸರಕಾರದಲ್ಲಿ ಅಧಿಕಾರ ವರ್ಗವನ್ನು ಯಾವ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ ಇವರು ಎನ್ನುವುದು ಗೊತ್ತಿದೆ. 2016ರಲ್ಲಿ ಪ್ರಕರಣ ನಡೆದಿದೆ ಎಂದು 2024ರಲ್ಲಿ ದೂರು ಕೊಡುತ್ತಾರೆ. 2018ರಲ್ಲಿ ನಾನೇ ಸಿಎಂ ಇದ್ದೆ. ಆಗ ಯಾಕೆ ನನ್ನ ಬಳಿ ದೂರುದಾರರು ಬರಲಿಲ್ಲ, ಪೊಲೀಸರಿಗೆ ಯಾಕೆ ದೂರು ನೀಡಲಿಲ್ಲ? ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.

ನಿಖಿಲ್ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಅವರಿಬ್ಬರೂ ಇವರ ಮುಖಗಳನ್ನೇ ನೊಡಿಲ್ಲ. ಹೇಗೆ ಅವರ ಪರಿಚಯ ಅಂತ ಸುದ್ದಿಯಾಗುತ್ತಿದೆ,    ಇದರ ಹಿಂದೆ ಯಾರಿದ್ದಾರೆ? ನನ್ನ ಮಗ, ಪತ್ನಿಯನ್ನು ಯಾಕೆ ಈ ಪ್ರಕರಣದಲ್ಲಿ ಎಳೆದು ತಂದಿದ್ದೀರಿ? ಇದನ್ನು ಸರಕಾರ ಎಂದು ಕರೆಯಲು ಸಾಧ್ಯವೇ? ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ :ಬಸ್ ಪ್ರಯಾಣ ದರ ಏರಿಕೆ: ಹೆಚ್.ಡಿ.ಕುಮಾರಸ್ವಾಮಿ ಕಿಡಿ

ರಾಜ್ಯದಲ್ಲಿ ಸರಕಾರವೇ ಇಲ್ಲ. ಸ್ವೇಚ್ಚಾಚ್ಚಾರವಾಗಿ ಆಡಳಿತ ನಡೆಸುತ್ತಿದ್ದಾರೆ. ಇವರಿಗೆ ಹೇಳೋರು ಕೇಳೋರು ಯಾರು ಇಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ನಾನು ಯಾರನ್ನೂ ದೂರುವುದಿಲ್ಲ. ಎಲ್ಲವನ್ನು ಕಾಲವೇ ನಿರ್ಣಯ ಮಾಡುತ್ತದೆ. ನಮ್ಮ ಕಾಲವೂ ಬರುತ್ತದೆ. ಇವರು ಇಡೀ ವ್ಯವಸ್ಥೆಯನ್ನು ಬಹಳ ಕೆಳಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಈ ಸರಕಾರ ಬಂದ ಮೇಲೆ ಎಷ್ಟು ಆತ್ಮಹತ್ಯೆಗಳು ನಡೆದವು. ಯಾಕೆ ಇಷ್ಟು ಆತ್ಮಹತ್ಯೆಗಳು ಆಗುತ್ತಿವೆ? ಜೀವ ಕಳೆದುಕೊಂಡ ನತದೃಷ್ಟರು ಮರಣಪತ್ರದಲ್ಲಿ ಏನೆಲ್ಲಾ ಬರೆಯುತ್ತಿದ್ದಾರೆ. ಯಾರ ಯಾರ ಹೆಸರುಗಳನ್ನು ಉಲ್ಲೇಖ ಮಾಡುತ್ತಿದ್ದಾರೆ. ಮಂತ್ರಿಗಳ ಮೇಲೆ ಆರೋಪ ಬಂದರೂ ಸತ್ಯಾಂಶ ಹೊರಗೆ ಬರುತ್ತಿಲ್ಲ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು. ಸಂಕ್ರಾಂತಿ ಕಳೆದ ಮೇಲೆ ಎಲ್ಲಾ ವಿಷಯಗಳ ಬಗ್ಗೆ ಮಾತನಾಡುತ್ತೇನೆ  ಎಂದು ಕುಮಾರಸ್ವಾಮಿ ಹೇಳಿದ್ದಾರೆ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News