ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅಭಯ್ ಶ್ರೀನಿವಾಸ್ ಒಕಾ ಅವರನ್ನು ನೇಮಕ ಮಾಡಲಾಗಿದೆ. 


COMMERCIAL BREAK
SCROLL TO CONTINUE READING

ಈ ಹಿಂದೆ ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ಅಭಯ್ ಶ್ರೀನಿವಾಸ್ ಓಕಾ ಅವರನ್ನು ನೂತನ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿಗಳು ನೇಮಕ ಮಾಡಿದ್ದಾರೆ. 


ಕಳೆದ ಜನವರಿಯಲ್ಲಿ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕವಾದ ಬಳಿಕ ತೆರವಾಗಿದ್ದ ಸ್ಥಾನಕ್ಕೆ ನ್ಯಾಯಮೂರ್ತಿ ಅಭಯ್ ಓಕಾ ಅವರನ್ನು ನೇಮಕ ಮಾಡಲಾಗಿದೆ.