BC Nagesh : 2023ರ ಫೆಬ್ರವರಿಯಲ್ಲಿ ಶಿಕ್ಷಕರ ಹುದ್ದೆಗೆ ಮತ್ತೆ ಸಿಇಟಿ ಪರೀಕ್ಷೆ : ಬಿಸಿ ನಾಗೇಶ್
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಬೆಂಗಳೂರು : ಸ್ವಾವಲಂಬಿ, ಸ್ವಾಭಿಮಾನಿ ಜೀವನ ನಡೆಸಲು ದಿಕ್ಕು ತೋರಿಸುವ ಶಿಕ್ಷಣವನ್ನು ನೀಡಬೇಕೆಂದು ಸ್ವಾತಂತ್ರ್ಯಪೂರ್ವದಲ್ಲಿ ನಮ್ಮ ಹಿರಿಯರು ಕಂಡ ಕನಸು ನನಸು ಮಾಡಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ‘ರಾಷ್ಟ್ರೀಯ ಶಿಕ್ಷಣ ನೀತಿ-2020’ನ್ನು ಜಾರಿಗೆ ತರುತ್ತಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ ಉಪಕ್ರಮದಡಿ, ಇಂಡಿಯನ್ ಅಕಾಡೆಮಿ ಸಮೂಹ ವಿದ್ಯಾಸಂಸ್ಥೆಯಿಂದ ನವೀಕರಣಗೊಂಡಿರುವ ಬಿಬಿಎಂಪಿ ಮತ್ತು ಸರ್ಕಾರದ ಐದು ಶಾಲೆಗಳನ್ನು ಬೆಂಗಳೂರಿನ ತಿಮ್ಮಯ್ಯ ರಸ್ತೆಯಲ್ಲಿರುವ ಕಾರ್ಪೊರೇಷನ್ ಶಾಲೆಯಲ್ಲಿ ನಡೆದ ಕಾರ್ಯಕ್ರಮಲ್ಲಿ ಉದ್ಘಾಟಿಸಿ ಸಚಿವರು ಮಾತನಾಡಿದರು.
ಇದನ್ನೂ ಓದಿ : KBJNL ಕಚೇರಿ ಬೆಂಗಳೂರಿನಿಂದ ಆಲಮಟ್ಟಿಗೆ ಸ್ಥಳಾಂತರ ಮಾಡಿ ಎರಡು ಭಾರಿ ಆದೇಶ : ಆದ್ರೆ, ಕ್ಯಾರೆ ಅಂತಿಲ್ಲಾ ಈ ಅಧಿಕಾರಿ!
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅನೇಕ ಸಂಸ್ಥೆಗಳು, ಉದ್ಯಮಿಗಳು ಕೈಜೋಡಿಸುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯ ಶಿಕ್ಷಣ ಸುಧಾರಣೆ ಸಲಹೆಗಾರರಾದ ಡಾ. ಎಂ.ಆರ್. ದೊರೆಸ್ವಾಮಿ ಅವರ ಪ್ರಯತ್ನ ಉತ್ತಮವಾದದ್ದು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಇಂಡಿಯನ್ ಅಕಾಡೆಮಿ ಸಮೂಹ ವಿದ್ಯಾಸಂಸ್ಥೆಗಳ ಮುಖ್ಯಸ್ಥರಾದ ಸೋಮಶೇಖರ್ ನೆರವಾಗಿರುವುದು ಶ್ಲಾಘನೀಯ. ಶಾಲೆಗಳ ಅಭಿವೃದ್ಧಿಯಲ್ಲಿ ಸಂಘ-ಸಂಸ್ಥೆಗಳು, ಕಾರ್ಪೊರೇಟ್ ಸಂಸ್ಥೆಗಳ ಸಹಕಾರ ಸಾರ್ಥಕವಾಗಬೇಕೆಂದರೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸಬೇಕು. ನಮ್ಮೆಲ್ಲರ ಜವಾಬ್ದಾರಿಯಾಗಬೇಕು. ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಂಘ-ಸಂಸ್ಥೆಗಳು ಮುಂದೆ ಬರಬೇಕು' ಎಂದು ಸಚಿವರು ಕರೆ ನೀಡಿದರು. ನಮ್ಮ ಸರ್ಕಾರವೂ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ, ಅಗತ್ಯತೆ ಅನುಸಾರ ಮೂಲಸೌಕರ್ಯ ಉತ್ತಮಗೊಳಿಸಲು 8,100 ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ ಎಂದು ಸಚಿವರು ನುಡಿದರು.
‘ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶೌಚಗೃಹಗಳ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 250 ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಶೌಚಗೃಹ ನಿರ್ಮಾಣಕ್ಕೆ ಯಾವುದೇ ಸಮಸ್ಯೆ ಇಲ್ಲ. ಅವುಗಳ ನಿರ್ವಹಣೆಯಲ್ಲಿ ಸಮಸ್ಯೆ ಇದೆ. ಶೌಚಗೃಹಗಳ ಸ್ವಚ್ಛತೆಗೆ ಪ್ರತಿಯೊಬ್ಬರು ಮಹತ್ವ ನೀಡಬೇಕಿದೆ. ಮಕ್ಕಳಿಗೆ ಈ ನಿಟ್ಟಿನಲ್ಲಿ ಶಿಕ್ಷಕರು ಹಾಗೂ ಮನೆಯಲ್ಲಿ ಪಾಲಕರು ತಿಳುವಳಿಕೆ ನೀಡಬೇಕು’ ಎಂದು ಸಚಿವರು ಹೇಳಿದರು.
ಇದನ್ನೂ ಓದಿ : 40% ಸರ್ಕಾರದ ಬಿಜೆಪಿ ಭ್ರಷ್ಟೋತ್ಸವ ನಿಲ್ಲುವುದು ಯಾವಾಗ?: ಕಾಂಗ್ರೆಸ್ ಪ್ರಶ್ನೆ
‘ಈ ಹಿಂದೆ 10 ಸಾವಿರ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ, ಸುಮಾರು 3,800 ಶಿಕ್ಷಕರು ಮಾತ್ರ ಭರ್ತಿಯಾಗಿದ್ದರು. ಈ ಬಾರಿ 15 ಸಾವಿರ ಶಿಕ್ಷಕರ ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯ ಹುದ್ದೆಗಳು ಭರ್ತಿಯಾಗಬಹುದು ಎಂಬ ವಿಶ್ವಾಸವಿದೆ. ನವೆಂಬರ್‌ನಲ್ಲಿ ಟಿಇಟಿ ಪರೀಕ್ಷೆ ಹಾಗೂ ಮುಂದಿನ ವರ್ಷ ಫೆಬ್ರವರಿಯಲ್ಲಿ ಮತ್ತೊಂದು ಸುತ್ತಿನ ಸಿಇಟಿ ಪರೀಕ್ಷೆ ನಡೆಸಿ ಉಳಿದ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡಲಿದೆ. ಈ ಮೂಲಕ ಶಿಕ್ಷಕರ ಕೊರತೆ ನೀಗಿಸುವ ಪ್ರಯತ್ನ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ರಾಜ್ಯ ಶಿಕ್ಷಣ ಸುಧಾರಣೆ ಸಲಹೆಗಾರರಾದ ಡಾ. ಎಂ.ಆರ್. ದೊರೆಸ್ವಾಮಿ, ಇಂಡಿಯನ್ ಅಕಾಡೆಮಿ ಸಮೂಹ ವಿದ್ಯಾಸಂಸ್ಥೆಗಳ ಮುಖ್ಯಸ್ಥರಾದ ಡಾ.ಟಿ. ಸೋಮಶೇಖರ್ ಉಪಸ್ಥಿತರಿದ್ದರು.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.