ಬೆಂಗಳೂರು: CET Result 2022- ಜೂನ್ ಮಧ್ಯಭಾಗದಲ್ಲಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಇದೇ 30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಇದನ್ನೂ ಓದಿ-Kasturirangan Report : ಕಸ್ತೂರಿರಂಗನ್ ವರದಿ ವಿರೋಧ : ಮಲೆನಾಡು ಶಾಸಕರ ನಿಯೋಗಕ್ಕೆ ಯಶಸ್ಸು!
ಸೋಮವಾರ ಈ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಅವರು, ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದುಕೊಳ್ಳಲು ನಡೆದಿದ್ದ ಸಿಇಟಿ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ ನಡುವೆ ಕಟ್ಟುನಿಟ್ಟಾಗಿ ನಡೆಸಲಾಗಿತ್ತು ಎಂದಿದ್ದಾರೆ.
ಇದನ್ನೂ ಓದಿ-KPSC office : ಕೆಪಿಎಸ್‌ಸಿ ಕಚೇರಿ ವಿರುದ್ದ ಪ್ರತಿಭಟನೆ: ಪೊಲೀಸರಿಂದ ಲಘು ಲಾಠಿ ಪ್ರಹಾರ
ಸಿಇಟಿ ಪರೀಕ್ಷೆ ನಡೆಸುವಾಗ ಸಿಬಿಎಸ್ ಸಿ ಮತ್ತು ಐಸಿಎಸ್ಇ ಪಠ್ಯಕ್ರಮದಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಗೂ ಅವಕಾಶ ಕೊಡಲಾಗಿತ್ತು. ಇದೀಗ ಅವರ ಫಲಿತಾಂಶ ಬಂದಿದ್ದು, ಸಿಇಟಿ ಬರೆದಿದ್ದ ಈ ವಿದ್ಯಾರ್ಥಿಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ತಮ್ಮ ಅಂಕಗಳನ್ನು ನಾಳೆ (ಜು.26) ಸಂಜೆಯೊಳಗೆ ಅಪ್ಲೋಡ್ ಮಾಡಲಾಗುತ್ತೆ ಎಂದು ಅಶ್ವಥ್ ನಾರಾಯಣ್ ಹೇಳಿದ್ದಾರೆ.
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.