ಬೆಂಗಳೂರು: ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಏಪ್ರಿಲ್ 29 ಮತ್ತು 30ರಂದು ನಡೆಸಲಾಗಿದ್ದ ಸಿಇಟಿ ಫಲಿತಾಂಶ ಇಂದು ಪ್ರಕಟವಾಗಲಿದೆ.


COMMERCIAL BREAK
SCROLL TO CONTINUE READING

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶನಿವಾರ ಬೆಳಗ್ಗೆ 11 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಬಗ್ಗೆ ಮಾಹಿತಿ ನೀಡಲಿದ್ದು, ಮಧ್ಯಾಹ್ನ 1 ಗಂಟೆ ವೇಳೆಗೆಪ್ರಾಧಿಕಾರದ http://kea.kar.nic.inhttp://cet.kar.nic.in,   http://karresults.nic.in ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. 


ಕರ್ನಾಟಕ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಸಿಇಟಿ ಫಲಿತಾಂಶ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ. ಈ ಬಾರಿ 1.94,311 ಲಕ್ಷಕ್ಕೂ ಅಧಿಕ ಮಂದಿ ನೋಂದಣಿ ಮಾಡಿಕೊಂಡಿದ್ದು, ಶೇಕಡಾ 92ರಷ್ಟುವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.