ಮಂಗಳೂರು : ಪ್ರತಿ ನಾಗರಿಕನಿಗೆ ತೊಂದರೆಯಾಗದಂತೆ ನೋಡಿಕೊಳ್ಳೋದು ಸರ್ಕಾರದ ಜಬಾವ್ದಾರಿ. ಆದರೆ ದುರಾದೃಷ್ಟವಶಾತ್ ಸರ್ಕಾರ ಮುಂದೆ ಎಷ್ಟೇ ಮೊರೆ ಹೋದರೂ ಇದು ಸಾಧ್ಯವಾಗಿಲ್ಲ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ, ರಾಜ್ಯದಲ್ಲಿ ಆಝಾನ್ ವಿರುದ್ಧ ಸುಪ್ರಭಾತ ಅಭಿಯಾನದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. 


COMMERCIAL BREAK
SCROLL TO CONTINUE READING

ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ, ಬೆಳಗ್ಗಿನ ಅಜಾನ್ ಜಾತ್ಯಾತೀತ ರಾಷ್ಟ್ರಕ್ಕೆ ಹೇಳಿ ಮಾಡಿಸಿರೋದು ಅಲ್ಲ. ಅಲ್ಲಾ ಒಬ್ಬನೇ. ದೇವರು ಬೇರೆ ಯಾರೂ ದೇವರಿಲ್ಲ ಅನ್ನೋದನ್ನು ಪ್ರತಿಯೊಬ್ಬ ಹಿಂದೂ ಕೇಳೋಕೆ ಸಾಧ್ಯ ಇಲ್ಲ. ಬೆಳಗ್ಗಿನ ಜಾವದ ಅಝಾನ್ ಎಲ್ಲರ ನಿದ್ದೆ ಹಾಳು ಮಾಡುತ್ತದೆ. ಇದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶ ಕೂಡಾ ಇದೆ. ಆದರೆ ಕರ್ನಾಟಕ ಸರ್ಕಾರ ಸುದೀರ್ಘ ನಿದ್ರೆಯಲ್ಲಿದೆ. ಸರ್ಕಾರಕ್ಕೆ ಎಷ್ಟೇ ಒತ್ತಡ ಹಾಕಿದರೂ ಬೆಳಗ್ಗಿನ ಆಝಾನ್ ಧ್ವನಿ ನಿಲ್ಲಿಸುವ ಪ್ರಯತ್ನ ಮಾಡುತ್ತಿಲ್ಲ ಎಂದರು.


ಇದನ್ನೂ ಓದಿ : ಉದ್ಘಾಟನೆಗೊಂಡ ಎರಡೇ ತಿಂಗಳಲ್ಲಿ ಧರೆಗುರುಳಿದ ಸ್ಟೇಡಿಯಂ ಗ್ಯಾಲರಿ!


ಅಝಾನ್ ನಿಲ್ಲಿಸುವ ಬದಲು ಹಿಂದೂ ದೇವಾಲಯಗಳಿಗೆ ಆರು ಗಂಟೆ ಮೊದಲು ಹಾಕುವ ಧ್ವನಿ ವರ್ಧಕದ ಧ್ವನಿ ಕಡಿಮೆ ಮಾಡುವ ದಾರ್ಷ್ಯ ತೋರಿದೆ. ಸರ್ಕಾರದ ನಿರ್ಧಾರ ತೆಗೆದುಕೊಳ್ಳದೇ ಇದ್ದಾಗ ಸಮಾಜವೇ ಮುಂದೆ ನಿಂತು ನಿರ್ಧಾರ ತೆಗೆದುಕೊಂಡಿದೆ. ನೀವು ಕಾನೂನು ಮೀರಿದವರನ್ನು ಹಿಡಿಯದಿದ್ದರೆ ನಾವೂ ಕಾನೂನು ಮೀರುತ್ತೇವೆ. ಹಿಡಿಯೋದಿದ್ದರೆ ಎಲ್ಲರನ್ನೂ ಹಿಡಿಯಿರಿ ಎಂಬ ಸವಾಲನ್ನು ಸಮಾಜ ಹಾಕಿದೆ. ಇದು ಸ್ವಾಗತಾರ್ಹ ನಿರ್ಧಾರವಾಗಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. 


ಇದನ್ನೂ ಓದಿ : ಭ್ರಷ್ಟಾಚಾರ ಮತ್ತು ವಿಳಂಬ ಧೋರಣೆ ಸಹಿಸುವುದಿಲ್ಲ: ಡಿಸಿಗಳಿಗೆ ಸಿಎಂ ಖಡಕ್ ಸೂಚನೆ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.