ಚಾಮರಾಜನಗರ: 79 ಶಾಲಾ ವಿದ್ಯಾರ್ಥಿಗಳು ಸೇರಿ 419 ಮಂದಿಗೆ ಕೊರೊನಾ, ಓರ್ವ ಸೋಂಕಿತ ಸಾವು
ಚಾಮರಾಜನಗರ ಜಿಲ್ಲೆಯಲ್ಲಿ ಕೊರೊನಾ ಏರುಗತಿ ಕಂಡಿದ್ದು ಇಂದು ಹೊಸದಾಗಿ 419 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 1911 ಕ್ಕೆ ಏರಿಕೆಯಾಗಿದೆ.
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಕೊರೊನಾ ಏರುಗತಿ ಕಂಡಿದ್ದು ಇಂದು ಹೊಸದಾಗಿ 419 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 1911 ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ: South Africa vs India, 2nd ODI : ಹರಿಣಗಳ ವಿರುದ್ಧ ಭಾರತಕ್ಕೆ ಏಕದಿನ ಸರಣಿ ಸೋಲು
ಇಂದಿನ ಹೊಸ ಪ್ರಕರಣಗಳಲ್ಲಿ ಹೊಂಡರಬಾಳಿನಲ್ಲಿರುವ ನವೋದಯ ಶಾಲೆಯ 25 ಮಂದಿ ವಿದ್ಯಾರ್ಥಿಗಳು, ಉಡಿಗಾಲದ ಜೆಎಸ್ಎಸ್ ಶಾಲೆಯ 20 ವಿದ್ಯಾರ್ಥಿಗಳು ಸೇರಿದಂತೆ 79 ವಿದ್ಯಾರ್ಥಿಗಳಿಗೆ ಕೊರೊನಾ ವಕ್ಕರಿಸಿದ್ದು ಶಾಲಾ ವಿದ್ಯಾರ್ಥಿಗಳಲ್ಲೇ ಹೆಚ್ಚು ಸೋಂಕು ಬಾಧಿಸುತ್ತದೆ.ಬಹುತೇಕ ಎಲ್ಲರೂ ಹೋಂ ಐಸೋಲೇಷನ್ ನಲ್ಲೇ ಇದ್ದು ಆರೋಗ್ಯವಾಗಿದ್ದಾರೆಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದನ್ನೂ ಓದಿ : KL Rahul : ಸರಣಿ ಸೋಲಿನಿಂದ ಬೇಸತ್ತ ಕೆಎಲ್ ರಾಹುಲ್ : ದುಃಖದಿಂದ ಸೋಲಿಗೆ ಕಾರಣ ತಿಳಿಸಿದ ಕ್ಯಾಪ್ಟನ್
ಇಂದು 100 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು 1379 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ.ಇಂದು 3711 ಮಂದಿ ಪ್ರಾಥಮಿಕ, ದ್ವಿತೀಯ ಸಂಪರ್ಕಿತರ ಮೇಲೆ ನಿಗಾ ಇರಿಸಿದ್ದು 2 ಸಾವಿರಕ್ಕೂ ಅಧಿಕ ಮಂದಿಗೆ ಕೋವಿಡ್ ಟೆಸ್ಟ್ ನಡೆಸಲಾಗಿದೆ.
ಮೂರನೇ ಅಲೆಯಲ್ಲಿ ಕೊರೊನಾ ಸೋಂಕಿಗೆ ಎರಡನೇ ವ್ಯಕ್ತಿಯೊಬ್ಬರು ಇಂದು ಬಲಿಯಾಗಿದ್ದಾರೆ. ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದ 45 ವರ್ಷದ ವ್ಯಕ್ತಿಯೊಬ್ಬರು ಅಸುನೀಗಿದ್ದು ಇವರು 18 ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದನ್ನೂ ಓದಿ: Watch: ಉಲ್ಟಾ ಬ್ಲೌಸ್ ಧರಿಸಿ ಸುದ್ದಿಯಾದ ಬಿಗ್ ಬಾಸ್ ಒಟಿಟಿ ಖ್ಯಾತಿಯ ಉರ್ಫಿ ಜಾವೇದ್..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.