ಚಾಮರಾಜನಗರ: ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ  ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗದ ವ್ಯಾಪ್ತಿಯ ಮೊಳೆಯೂರು ವಲಯದ  ಹಿಡುಗಲಪಂಚೀ ಕೆರೆ ಬಳಿ ನಡೆದಿದೆ.


COMMERCIAL BREAK
SCROLL TO CONTINUE READING

ಮೃತ ಆನೆಯು ಹೆಣ್ಣಾನೆಯಾಗಿದ್ದು 25-30 ವರ್ಷ ವಯಸ್ಸಿನದು ಎಂದು ಅಂದಾಜು ಮಾಡಲಾಗಿದೆ.ಭಾನುವಾರ ಮಧ್ಯಾಹ್ನ 1 ಕ್ಕೆ  ಅರಣ್ಯ ಪ್ರದೇಶದಲ್ಲಿ ಸಿಬ್ಬಂದಿಗಳು ಗಸ್ತು ಮಾಡುವಾಗ ಕಾಡಾನೆಯೊಂದು ಕೆರೆಯ ಸಮೀಪ ಬಿದ್ದಿರುವುದನ್ನು ಗಮನಿಸಿ, ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಮುಂದಿನ ಏಳು ದಿನಗಳ ಕಾಲ ರಾಜ್ಯದೆಲ್ಲೆಡೆ ಭಾರಿ ಮಳೆ- ಹವಾಮಾನ ಇಲಾಖೆ ಮೂನ್ಸೂಚನೆ


ಕೂಡಲೇ ಬಂಡೀಪುರ ಸಿಎಫ್ಒ ಎಸ್.ಪ್ರಭಾಕರನ್, ಹೆಡಿಯಾಲ‌ ಎಸಿಎಫ್  ಜಿ.ರವೀಂದ್ರ,  ಪಶುವೈಧ್ಯಾಧಿಕಾರಿ ಡಾ. ವಾಸೀಂ ಮಿರ್ಜಾ ಸ್ಧಳಕ್ಕೆ ಭೇಟಿ ನೀಡಿ, ಕಾಡಾನೆಯನ್ನು ಪರಿಶೀಲಿಸಿದಾಗ ಆನೆಯು ಅನಾರೋಗ್ಯಕ್ಕೆ ಒಳಗಾಗಿದ್ದು ತಿಳಿದುಬಂದಿದೆ.


ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರೆದ ಮಳೆ ಆರ್ಭಟ


ಈ ಸಂಬಂಧ ಇಲಾಖಾ ವೈಧ್ಯರಿಂದ ವೈದ್ಯಕೀಯ ಚಿಕಿತ್ಸೆ ಮಾಡಿಸಿದರೂ ಸೋಮವಾರದಂದು  ಚಿಕಿತ್ಸೆ ಫಲಸದೇ ಕಾಡಾನೆ ಮೃತಪಟ್ಟಿದೆ.


ಮೃತ ಕಾಡಾನೆಯ ಮರಣೋತ್ತರ ಪರೀಕ್ಷೆಯನ್ನು ನಡೆಸಿ, ಕಾಡಾನೆಯ ಅಂಗಾಂಗಳನ್ನು ಸಂಗ್ರಹಿಸಿ, ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಸ್ಯಾಂಪಲ್‍ಗಳನ್ನು ಕಳುಹಿಸಿ  ಮೃತ ಹೆಣ್ಣಾನೆಯನ್ನು ಅಲ್ಲಿಯೇ ಹೂಳಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.