ಟಿಕೆಟ್ ಘೋಷಣೆಗೂ ಮುನ್ನ ಸುನೀಲ್ ಬೋಸ್ ನಾಮಿನೇಷನ್ ಡೇಟ್ ಪ್ರಕಟ

Lok Sabha Election 2024: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ‌ ಡಿ.ಕೆ.ಶಿವಕುಮಾರ್ ಹಾಗೂ ಸಚಿವರ ಅನುಮತಿಯೊಂದಿಗೆ ಪ್ರವಾಸಪಟ್ಟಿ ಹೊರಡಿಸಿದ್ದು ಸುನೀಲ್ ಬೋಸ್ ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಹೆಸರಿಸಲಾಗಿದೆ.

Written by - Yashaswini V | Last Updated : Mar 27, 2024, 02:47 PM IST
  • ಇಂದು ಸಂಜೆ ದೆಹಲಿಯಲ್ಲಿ ಕಾಂಗ್ರೆಸ್ ಸಿಇಸಿ ಸಭೆ
  • ಸಭೆ ಬಳಿಕ ಅಧಿಕೃತವಾಗಿ ಟಿಕೆಟ್ ಘೋಷಣೆ ಸಾಧ್ಯತೆ
  • ಟಿಕೆಟ್ ಘೋಷಣೆಗೂ ಮೊದಲೇ ಸುನೀಲ್ ಬೋಸ್ ನಾಮಪತ್ರ ಸಲ್ಲಿಕೆಗೆ ಮುಹೂರ್ತ ನಿಗದಿ
ಟಿಕೆಟ್ ಘೋಷಣೆಗೂ ಮುನ್ನ ಸುನೀಲ್ ಬೋಸ್ ನಾಮಿನೇಷನ್ ಡೇಟ್ ಪ್ರಕಟ title=

Chamarajanagar Lok sabha Constituency Congress candidate: ಕಾಂಗ್ರೆಸ್ ಸಿಇಸಿ ಸಭೆಗೂ ಮುನ್ನವೇ ಸಚಿವ ಎಚ್.ಸಿ.ಮಹಾದೇವಪ್ಪ ಪುತ್ರ ಸುನೀಲ್ ಬೋಸ್ ಅವರ ನಾಮಪತ್ರ ಸಲ್ಲಿಸುವ ದಿನಾಂಕ ಫಿಕ್ಸ್ ಆಗಿದ್ದು ಏ.3 ರಂದು ಸುನೀಲ್ ಬೋಸ್ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರವಾಸ ಪಟ್ಟಿ ಹೊರಡಿಸಿದೆ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ‌ ಡಿ.ಕೆ.ಶಿವಕುಮಾರ್ ಹಾಗೂ ಸಚಿವರ ಅನುಮತಿಯೊಂದಿಗೆ ಪ್ರವಾಸಪಟ್ಟಿ ಹೊರಡಿಸಿದ್ದು ಸುನೀಲ್ ಬೋಸ್ ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಹೆಸರಿಸಲಾಗಿದೆ.

ಇದನ್ನೂ ಓದಿ- Bengaluru Water Crisis: ಬೆಂಗಳೂರಿನಲ್ಲಿನ ನೀರಿನ ಸಮಸ್ಯೆಗೆ ಪರಿಹಾರ ಸೂತ್ರ ಹುಡುಕಿದ ನಟ ಚಿರಂಜೀವಿ...!

ಇಂದು ಸಂಜೆ ದೆಹಲಿಯಲ್ಲಿ ಕಾಂಗ್ರೆಸ್ ಸಿಇಸಿ ಸಭೆ ನಡೆಯಲಿದ್ದು ಬಳಿಕ ಅಧಿಕೃತವಾಗಿ ಟಿಕೆಟ್ ಘೋಷಣೆ ಮಾಡಲಾಗುವುದು ಎಂದು ತಿಳಿದುಬಂದಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಮೈಸೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಏ.1 ಹಾಗೂ 2 ರಂದು ಕಾರ್ಯಕರ್ತರ ಸಭೆ ನಡೆಸಲಿದ್ದು ಏ.3 ರ ಬೆಳಗ್ಗೆ 11 ಕ್ಕೆ ಸುನಿಲ್ ಬೋಸ್ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪ್ರವಾಸ ಪಟ್ಟಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ- ನಮ್ಮ ಗ್ಯಾರಂಟಿ ಯೋಜನೆಗಳಿಗೆ ಐದು ವರ್ಷಗಳ ವಾರಂಟಿ ಇದೆ: ಡಿಸಿಎಂ ಡಿ.ಕೆ. ಶಿವಕುಮಾರ್

ತೀವ್ರ ಕಗ್ಗಂಟಾಗಿ ಉಳಿದಿದ್ದ ಕಾಂಗ್ರೆಸ್ ನ ಟಿಕೆಟ್ ಕೊನೆಗೂ ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸುವಲ್ಲಿ ಮಹಾದೇವಪ್ಪ ಯಶ ಕಂಡಿದ್ದಾರೆ. ಇನ್ನು, ಚಾಮರಾಜನಗರದ ಕೈ ಶಾಸಕರು ಈಗಾಗಲೇ ಮುಖಂಡರ ಸಭೆ ನಡೆಸಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ರಣತಂತ್ರ ಹೆಣೆದಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News