Chamarajanagar Lok Sabha Election Result: ಚಾಮರಾಜನಗರದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು
Chamarajanagar Lokasabha Election Result 2024: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಭರ್ಜರಿ ಗೆಲುವು ಸಾಧಿಸಿದ್ದಾರೆ.
Chamarajanagar Lokasabha Election Result: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಬಹಳ ಪ್ರತಿಷ್ಠೆಯ ಕಣವಾಗಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್, ಎದುರಾಳಿ ಬಿಜೆಪಿ ಅಭ್ಯರ್ಥಿ ಬಾಲರಾಜ್ ಅವರ ವಿರುದ್ಧ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಸುನೀಲ್ ಬೋಸ್ ಮೊದಲ ಬಾರಿಗೆ ಸಂಸತ್ ಪ್ರವೇಶಿಸಲಿದ್ದಾರೆ.
ತಂದೆ ಪರಾಭವಗೊಂಡಿದ್ದ ಕ್ಷೇತ್ರದಲ್ಲೇ ವಿಜಯಪತಾಕೆ ಹಾರಿಸಿದ ಪುತ್ರ:
ಸುನೀಲ್ ಬೋಸ್ ಅವರ ತಂದೆ ಡಾ. ಎಚ್.ಸಿ. ಮಹಾದೇವಪ್ಪ 1991ರಲ್ಲಿ ಇದೇ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲುಂಡಿದ್ದರು. ಇದೀಗ ಪುತ್ರ ಇದೇ ಕ್ಷೇತ್ರದಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಚಾಮರಾಜನಗರವನ್ನು ಮತ್ತೆ ವಶಪಡಿಸಿಕೊಳ್ಳುವಲ್ಲಿ ಸಿಎಂ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.
ಹಳೇ ಮೈಸೂರು ಭಾಗದ ಜಾನಪದ ಕಲೆಗಳ ತವರೂರು, ಮಲೆ ಮಹದೇಶ್ವರ, ಬಿಳಿಗಿರಿರಂಗನಾಥ, ಹಿಮವದ್ ಗೋಪಾಲಸ್ವಾಮಿ ಕ್ಷೇತ್ರ ಜೊತೆಗೆ ನಾಡು-ನುಡಿಯ ಹೋರಾಟದ ನೆಲ ಎನ್ನುವ ಕಿರೀಟವೂ ಚಾಮರಾಜನಗರಕ್ಕಿದ್ದು ಈ ಬಾರಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಈ ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಯಾರೇ ಗೆಲುವು ಸಾಧಿಸಿದರೂ ಕೂಡ ಮೊದಲ ಬಾರಿಗೆ ಸಂಸತ್ ಪ್ರವೇಶಿಸಲಿದ್ದಾರೆ.
ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ (Chamarajanagar Loksabha Constituency) ಚಾಮರಾಜನಗರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳು, ಮೈಸೂರಿನ 4 ವಿಧಾನಸಭಾ ಕ್ಷೇತ್ರಗಳು ಒಟ್ಟು 8 ಕ್ಷೇತ್ರಗಳು ಲೋಕಸಭಾ ವ್ಯಾಪ್ತಿಗೆ ಬರಲಿದೆ.
ಚಾಮರಾಜನಗರದ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ಹಾಗೂ ಹನೂರು ಮತ್ತು ಮೈಸೂರು ಜಿಲ್ಲೆಯ ವರುಣ, ನಂಜನಗೂಡು, ಎಚ್.ಡಿ.ಕೋಟೆ ಹಾಗೂ ಟಿ.ನರಸೀಪುರ ಕ್ಷೇತ್ರ ಚಾಮರಾಜನಗರಕ್ಕೆ ಒಳಪಡಲಿದ್ದು ಸಿಎಂ ಸಿದ್ದರಾಮಯ್ಯ (CM Siddaramaiah) ಕ್ಷೇತ್ರ ಕೂಡ ಚಾಮರಾಜನಗರ ಲೋಕ ಅಖಾಡ ವ್ಯಾಪ್ತಿಯಲ್ಲಿದೆ
ಇದನ್ನೂ ಓದಿ- ಲೋಕದ ಡೊಂಕ ನೀವೇಕೆ ತಿದ್ದುವಿರಿ.. ಎಂದು ವಚನ ಹೇಳಿದ್ದ ಡಿಕೆಶಿಗೆ ವಚನದ ಮೂಲಕವೇ ತಿರುಗೇಟು ಕೊಟ್ಟ ಮಾಜಿ ಸಿಎಂ
ಹಾಲಿ ಬಿಜೆಪಿ ವಶದಲ್ಲಿದ್ದ ಕ್ಷೇತ್ರವನ್ನು ಮತ್ತೇ ತನ್ನ ವಶ ಆಗಲಿದೆ ಎಂಬುದು ಕೈ ಪಾಳೇಯದ ವಿಶ್ವಾಸವಾದರೇ ಕ್ಷೇತ್ರದಲ್ಲಿ ಎರಡನೇ ಬಾರಿ ಕಮಲ ಅರಳಲಿದೆ ಎಂಬುದು ಬಿಜೆಪಿಗರ ಮಾತಾಗಿದೆ.
ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಎಸ್.ಬಾಲರಾಜು (S Balraj) ಬಿಜೆಪಿ ಹಾಗೂ ಜಾತ್ಯತೀತ ಜನತಾದಳ ಮೈತ್ರಿ ಅಭ್ಯರ್ಥಿಯಾಗಿದ್ದು, ಕಾಂಗ್ರೆಸ್ನಿಂದ ಸಚಿವ ಎಚ್.ಸಿ.ಮಹಾದೇವಪ್ಪ ಪುತ್ರ ಸುನಿಲ್ ಬೋಸ್ (Sunil Bose) ಕಣಕ್ಕಿಳಿದಿದ್ದಾರೆ. ಚಾಮರಾಜನಗರ ಲೋಕಸಭಾ ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾದ ಕ್ಷೇತ್ರವಾಗಿದೆ. ಕ್ಷೇತ್ರದಲ್ಲಿ ಬಿಜೆಪಿ ಓರ್ವ ಶಾಸಕನೂ ಇಲ್ಲದಿರುವುದು, ಸಿದ್ದರಾಮಯ್ಯ ವರುಣ ಕೂಡ ಕ್ಷೇತ್ರಕ್ಕೆ ಒಳಪಡುವುದು ಹಾಗೂ ಗ್ಯಾರಂಟಿಗಳ ಮಹಿಮೆಯಿಂದ ಕಾಂಗ್ರೆಸ್ ಗೆಲ್ಲಲ್ಲಿದೆ ಎಂಬುದು ಕೈ ಪಕ್ಷದ ವಿಶ್ವಾಸವಾದರೇ ಮೋದಿ ನಾಮಬಲ ಹಾಗೂ ಬಾಲರಾಜು ಸಜ್ಜನ ರಾಜಕಾರಣಿ ಎಂಬ ದಿಸೆಯಲ್ಲಿ ಮತಗಳು ಸಿಕ್ಕು ಕಮಲ ಅರಳುವ ಲೆಕ್ಕಾಚಾರದಲ್ಲಿ ಬಿಜೆಪಿ ತೊಡಗಿದೆ.
ಮತದಾನದ ವಿವರ:
ಏ.26 ರಂದು ಚಾಮರಾಜನಗರ ಲೋಕಸಭಾ ಕ್ಷೇತ್ರವ್ಯಾಪ್ತಿಯಲ್ಲಿ ಚುನಾವಣೆ ನಡೆದಿದ್ದು ಶೇ 76.81 ರಷ್ಟು ಮತದಾನವಾಗಿದೆ.
ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 8,78,702 ಪುರುಷರು, 8,99,501 ಮಹಿಳೆಯರು, 107 ಇತರರು ಸೇರಿದಂತೆ ಒಟ್ಟು 17,78,310 ಮತದಾರರಿದ್ದಾರೆ. ಈ ಪೈಕಿ 6,82,961 ಪುರುಷರು, 6,82,952 ಮಹಿಳೆಯರು, 31 ಇತರೆ ಮಂದಿ ಸೇರಿದಂತೆ ಒಟ್ಟು 13,65,944 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.
ಇದನ್ನೂ ಓದಿ- ಚಾಮರಾಜನಗರದಲ್ಲಿ ಕಾಂಗ್ರೆಸ್- ಬಿಜೆಪಿ ಜಿದ್ದಾಜಿದ್ದಿ: ಯಾರೇ ಗೆದ್ದರೂ ಮೊದಲ ಬಾರಿ ಸಂಸತ್ ಪ್ರವೇಶ
2019 ರ ಚುನಾವಣಾ ಫಲಿತಾಂಶ:
2019 ರಲ್ಲಿ ಎರಡು ಬಾರಿ ಸಂಸದರಾಗಿದ್ದ ಆರ್.ಧ್ರುವನಾರಾಯಣ ಕಾಂಗ್ರೆಸ್ ನಿಂದ ಹಾಗೂ ಹಿರಿಯ ರಾಜಕಾರಣಿ ವಿ.ಶ್ರೀನಿವಾಸಪ್ರಸಾದ್ ಬಿಜೆಪಿಯಿಂದ ಸ್ಪರ್ಧಿಸಿ ತೀವ್ರ ಜಿದ್ದಾಜಿದ್ದಿ ಮತಯುದ್ಧದಲ್ಲಿ ವಿ.ಶ್ರೀನಿವಾಸ ಪ್ರಸಾದ್ ಗೆದ್ದಿದ್ದರು. ಆ ಮೂಲಕ, ಚಾಮರಾಜನಗರದಲ್ಲಿ ಮೊದಲ ಬಾರಿಗೆ ಕಮಲ ಅರಳಿತ್ತು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.