ಚಾಮರಾಜನಗರ: ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವ ಸ್ಥಾನದಿಂದ ವಂಚಿತರಾಗಿದ್ದ ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ನಿಗಮ ಮಂಡಲಿ ಅಧ್ಯಕ್ಷ ಸ್ಥಾನ ಕೊಡಲಾಗಿದೆ.ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ನ ಅಧ್ಯಕ್ಷ ಸ್ಥಾನ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಆದೇಶ ಹೊರಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಬಾಗಲಕೋಟೆಯಲ್ಲಿ 75ನೇ ಗಣರಾಜ್ಯೋತ್ಸವದ ಸಂಭ್ರಮಾಚರಣೆ


ಬಿಜೆಪಿ ಪ್ರಭಾವಿ ನಾಯಕ ಸೋಮಣ್ಣ ಅವರನ್ನು ಸೋಲಿಸಿ ಚಾಮರಾಜನಗರದಲ್ಲಿ 4 ಬಾರಿ ಪುಟ್ಟರಂಗಶೆಟ್ಟಿ ಶಾಸಕರಾಗಿದ್ದಾರೆ.ಸರ್ಕಾರ ರಚನೆ ಸಂದರ್ಭದಲ್ಲಿ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ಕೊಡಲಾಗುತ್ತದೆ ಎಂಬ ನಿರೀಕ್ಷೆ ಇತ್ತು. ಅದು ಕೈ ತಪ್ಪಿದ ಬಳಿಕ ಉಪಸಭಾಪತಿ ಹುದ್ದೆ ಕೊಡಲಾಗುತ್ತದೆ ಎಂಬ ಮಾತುಗಳು ಹರಿದಾಡಿದ್ದವು.


ಇದನ್ನೂ ಓದಿ: ಪರೇಡ್ ವೇಳೆ ಭದ್ರತಾ ಲೋಪ: ಸಿಎಂ ಸಿದ್ದರಾಮಯ್ಯ ಬಳಿ ಏಕಾಏಕಿ ನುಗ್ಗಿದ ವ್ಯಕ್ತಿ!


ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಇಂದು ಗಣತಂತ್ರ ಹಬ್ಬದ ಉಡುಗೊರೆ ರೀತಿ ನಿಗಮ ಮಂಡಲಿ ಸ್ಥಾನ ನೀಡಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ