ಬೆಂಗಳೂರು: ಚಾಮರಾಜಪೇಟೆಯ ಈದ್ಗಾ ಮೈದಾನ ಯಾತ ಆಸ್ತಿ ಅನ್ನೋ ವಿಚಾರದ ವಿವಾದ ದಿನೇ ದಿನೇ ಹೆಚ್ಚಾಗ್ತಿದೆ. ಇದರ ಬಿಸಿ ನಡುವೆ ಮೈಸೂರು ಆಡಳಿತ ಕಾಲದಿಂದಲೂ ಇದ್ದ ದಾಖಲೆಗಳನ್ನು ಬಿಬಿಎಂಪಿಗೆ ಕರ್ನಾಟಕದ ಸೆಂಟ್ರಲ್ ಮುಸ್ಲಿಂ ಅಸೋಸಿಯೇಷನ್ ​​(ಸಿಎಂಎ) ಸಲ್ಲಿಸಿದೆ.


COMMERCIAL BREAK
SCROLL TO CONTINUE READING

ಬಿಬಿಎಂಪಿ ವಿಶೇಷ ಆಯುಕ್ತ ಶ್ರೀನಿವಾಸ ಅವರಿಗೆ ಸುಪ್ರೀಂಕೋರ್ಟ್ ಆದೇಶ ಮಾಡಿದ್ದು, ಮೈಸೂರು ರಾಜ್ಯ ವಕ್ಫ್ ಮಂಡಳಿಯಿಂದ 1965 ರ ಅಧಿಕೃತ ಗೆಜೆಟ್ ಅಧಿಸೂಚನೆ ಸೇರಿದಂತೆ ಇನ್ನಿತರ ಹಳೇ ದಾಖಲೆಗಳ ಪ್ರತಿಗಳನ್ನು ಕಳುಹಿಸಲಾಗಿದೆ.


1965 ರ ಜೂನ್ 7 ರಂದೇ ವಕ್ಫ್ ಗೆಜೆಟ್ ಅಧಿಸೂಚನೆಯ ಅಡಿಯಲ್ಲಿ ಈದ್ಗಾ ಪ್ರದೇಶವನ್ನು ವಕ್ಫ್ ಆಸ್ತಿಯಾಗಿ ನೋಂದಾಯಿಸಲಾಗಿದೆ ಎಂದು ಅಸೋಸಿಯೇಷನ್ ​​ತಮ್ಮ ವಾದ ಮಂಡಿಸಿದೆ. ದಾಖಲೆಗಳ ಪ್ರಕಾರ, ಕ್ರಮಸಂಖ್ಯೆ 137ರಲ್ಲಿ ಚಾಮರಾಜಪೇಟೆಯ ಈದ್ಗಾ ಸುನ್ನಿ 2 ಎಕರೆ 5 ಗುಂಟೆ ಜಮೀನು ಇದ್ದು, ಇದರ ಮಾಲೀಕತ್ವ ಸೆಂಟ್ರಲ್ ಮುಸ್ಲಿಂ ಅಸೋಸಿಯೇಷನ್ ​​ಆಫ್ ಕರ್ನಾಟಕದ  ಕಾರ್ಯದರ್ಶಿಗೆ ವಹಿಸಲಾಗಿದೆ.


ಇದನ್ನೂ ಓದಿ: ಅಭಿನಯ ಚಕ್ರವರ್ತಿ' ಕಿಚ್ಚ ಸುದೀಪ್‌ಗೆ ಬ್ಯಾಟ್‌ ಗಿಫ್ಟ್‌ ಕೊಟ್ಟ ಕ್ರಿಕೆಟರ್‌ ಬಟ್ಲರ್..!‌


ಸಿಎಂಎ ಪ್ರಧಾನ ಕಾರ್ಯದರ್ಶಿ ಜಹೀರುದ್ದೀನ್ ಅಹ್ಮದ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಈದ್ಗಾ ಮೈದಾನ ನಮ್ಮದು, ಇದರ ಅಧಿಕೃತ ದಾಖಲೆಗಳನ್ನ ನಾವು ಬಿಬಿಎಂಪಿ ವಿಶೇಷ ಆಯುಕ್ತರಿಗೆ ದಾಖಲೆಗಳನ್ನು ನೀಡಿದ್ದೇವೆ ಎಂದಿದ್ದಾರೆ.


ಈ ಮೊದಲು ಗೌರವಾನ್ವಿತ ನ್ಯಾಯಾಲಯವು ರಂಜಾನ್ ಮತ್ತು ಬಕ್ರೀದ್ ಪ್ರಾರ್ಥನೆಗೆ ಮಾತ್ರ ಅನುಮತಿ ನೀಡಿತು ಮತ್ತು ಸ್ಥಳವನ್ನು ಸಾರ್ವಜನಿಕರಿಗೆ ಆಟದ ಮೈದಾನವಾಗಿ ಬಳಸಲು ಅವಕಾಶ ನೀಡಲಾಯಿತು ಎಂದು ಹೇಳಿದ್ದಾರೆ.


ಇದನ್ನೂ ಓದಿ: ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು 9000 ರೂ.ಮೌಲ್ಯದ ಇಂಜೆಕ್ಷನ್ ತೆಗೆದುಕೊಳ್ಳುತ್ತಿದ್ದ ಈ ನಟಿ..!


ಈ ಹಿಂದೆ ನಡೆದ ಕಾನೂನು ಹೋರಾಟದಲ್ಲಿಯೂ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನಿಂದಲೂ ತಮಗೆ ಜಯವಾಗಿತ್ತು. ಇದಾಗ್ಯೂ ಉದ್ದೇಶ ಪೂರ್ವಕವಾಗಿ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.