Pariksha Pe Charcha: ಪ್ರಧಾನಿ ಮೋದಿಯೊಟ್ಟಿಗೆ ಚಾಮರಾಜನಗರ ವಿದ್ಯಾರ್ಥಿನಿ ಮಾತು

ದೇಶದಾದ್ಯಂತ ವಿದ್ಯಾರ್ಥಿಗಳೊಂದಿಗೆ ಏ.1ರಂದು ನಡೆಸಲಿರುವ ಪರೀಕ್ಷಾ ಪೇ ಚರ್ಚಾ (Pariksha Pe Charcha) ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಶ್ರೇಯಾ ಭಾಗಿಯಾಗಲಿದ್ದು  ವರ್ಚುವಲ್‌ ಮೂಲಕವೇ  'ತರಗತಿಯಲ್ಲಿ ಡಿಜಿಟಲ್‌ ಸಂವಾದ' ಎಂಬ ವಿಷಯದ ಬಗ್ಗೆ ಪ್ರಧಾನಿ ಅವರೊಟ್ಟಿಗೆ ಮಾತನಾಡಲಿದ್ದಾಳೆ.

Written by - Zee Kannada News Desk | Last Updated : Mar 30, 2022, 09:35 AM IST
  • ದೇಶದಾದ್ಯಂತ ವಿದ್ಯಾರ್ಥಿಗಳೊಂದಿಗೆ ಏ.1ರಂದು ನಡೆಸಲಿರುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ
  • ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ವಿದ್ಯಾರ್ಥಿನಿ ಶ್ರೇಯಾ
  • ಚಾಮರಾಜನಗರ ಕೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿನಿ ಆಗಿರುವ ಶ್ರೇಯಾ
Pariksha Pe Charcha: ಪ್ರಧಾನಿ ಮೋದಿಯೊಟ್ಟಿಗೆ ಚಾಮರಾಜನಗರ ವಿದ್ಯಾರ್ಥಿನಿ ಮಾತು  title=
Pariksha Pe Charcha 2022

ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಅವರ ಐದನೇ ಆವೃತ್ತಿಯ ಪರೀಕ್ಷಾ ಪೇ ಚರ್ಚಾ (Pariksha Pe Charcha) ಸಂವಾದ ಕಾರ್ಯಕ್ರಮಕ್ಕೆ ಚಾಮರಾಜನಗರ ಕೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿನಿ (Kendriya  Vidyalaya Student) ಆಯ್ಕೆಯಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಲಿದ್ದಾಳೆ‌.

ದೇಶದಾದ್ಯಂತ ವಿದ್ಯಾರ್ಥಿಗಳೊಂದಿಗೆ ಏ.1ರಂದು ನಡೆಸಲಿರುವ ಪರೀಕ್ಷಾ ಪೇ ಚರ್ಚಾ (Pariksha Pe Charcha) ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಶ್ರೇಯಾ ಭಾಗಿಯಾಗಲಿದ್ದು  ವರ್ಚುವಲ್‌ ಮೂಲಕವೇ  'ತರಗತಿಯಲ್ಲಿ ಡಿಜಿಟಲ್‌ ಸಂವಾದ' ಎಂಬ ವಿಷಯದ ಬಗ್ಗೆ ಪ್ರಧಾನಿ ಅವರೊಟ್ಟಿಗೆ ಮಾತನಾಡಲಿದ್ದಾಳೆ.

ಇದನ್ನೂ ಓದಿ- ಮಾಸ್ಕ್ ದಂಡ ನಿಯಮಕ್ಕೆ ಬಹುತೇಕ ಫುಲ್ ಸ್ಟಾಪ್!

ಇನ್ನು, ಈ ಬಾರಿಯ ಪರೀಕ್ಷಾ ಪೇ ಚರ್ಚಾ ಸಂವಾದ ನವದೆಹಲಿಯ ತಾಳ್ಕಟೋರಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಸಂವಾದಕ್ಕೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವುದಕ್ಕೂ ಮೊದಲು ಸೃಜನಶೀಲ ಬರವಣಿಗೆ ಸ್ಪರ್ಧೆ ನಡೆಸಲಾಗುತ್ತದೆ. ಆ ಬಳಿಕ ವಿದ್ಯಾರ್ಥಿಗಳನ್ನು (Students)  ಆಯ್ಕೆ ಮಾಡಲಾಗುತ್ತದೆ. ಇದೇ ಮೊದಲ ಬಾರಿಗೆ ಜಿಲ್ಲೆಯ ವಿದ್ಯಾರ್ಥಿನಿಯೊಬ್ಬಳು ಆಯ್ಕೆಯಾಗಿದ್ದಾಳೆ.

ಇದನ್ನೂ ಓದಿ- ಮಲೆಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆ ಆರಂಭ: ಎರಡು ವರ್ಷಗಳ ಬಳಿಕ ಕಳೆಗಟ್ಟಿದ ಸಂಭ್ರಮ

ಪರೀಕ್ಷೆ ಬಗ್ಗೆ ಮಕ್ಕಳಲ್ಲಿರುವ ಭಯ, ಒತ್ತಡ ಹೋಗಲಾಡಿಸುವ ಉದ್ದೇಶದಿಂದ ಹಾಗೂ ಅವರಲ್ಲಿ ಧೈರ್ಯ ತುಂಬುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಐದು ವರ್ಷದಿಂದ ಈ ಸಂವಾದ ನಡೆಸುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News