ಮೈಸೂರು: ಸರ್ಕಾರ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನು (Chamundeshwari Constituency Development Authority) ರಚಿಸಿದ್ದು, ಇದಕ್ಕೆ ರಾಜಮಾತೆ ಪ್ರಮೋದಾದೇವಿಯವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ಆಗಸ್ಟ್ 22 ರಂದು ತಡೆಯಾಜ್ಞೆ ತೆರವುಗೊಂಡಿದೆ. ನ್ಯಾಯಾಲಯದ ತೀರ್ಮಾನವಾದಂತೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.
ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ನ್ಯಾಯಾಲಯ ತಡೆಯಾಜ್ಞೆ ತೆರವುಗೊಳಿಸಿದ ಬಳಿಕ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.
ರಾಜಮಾತೆ ಪ್ರಮೋದಾದೇವಿ( Rajamate Pramodadevi)ಯವರು ಹಾಗೂ ಸಂಸದ ಯದುವೀರ್ (MP Yaduveer) ಅವರು ಸಭೆ ನಡೆಸುವುದು ಕಾನೂನುಬಾಹಿರ ಎಂದು ಆಡಳಿತ ಮಂಡಳಿ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಬಗ್ಗೆ ಮಾತನಾಡಿ ಹಿಂದೆಯೂ ಆಡಳಿತ ಮಂಡಳಿ ಇತ್ತು. ಹಿಂದೆ ಸದಸ್ಯರನ್ನು, ಅಧ್ಯಕ್ಷರನ್ನು ಸರ್ಕಾರ ನೇಮಿಸುತ್ತಿತ್ತು. ಸರ್ಕಾರದ ಅಧೀನದಲ್ಲಿಯೇ ಇತ್ತು ಎಂದರು.
ಇದನ್ನೂ ಓದಿ- ಆಪರೇಷನ್ ಕಮಲ ಆಫರ್ ಮಾಡಿದ ಮಗನಿಗೆ ಗ್ರಹಚಾರ ಬಿಡಿಸ್ತೀನಿ: ಶಾಸಕ ಸಿ.ಪುಟ್ಟರಂಗಶೆಟ್ಟಿ
ಕೋವಿಡ್ ಭ್ರಷ್ಟಾಚಾರ ಕುರಿತ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಕ್ರಮ:-
ಕೋವಿಡ್ ಸಂದರ್ಭದಲ್ಲಿ ಆಗಿರುವ ಭ್ರಷ್ಟಾಚಾರ (Corruption) ಕುರಿತ ವರದಿ ಸಲ್ಲಿಕೆಯಾಗಿದ್ದು ಈ ಬಗ್ಗೆ ಗುರುವಾರ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಅಂದು ವರದಿ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ಮಾಧ್ಯಮ ಮಿತ್ರರ ಪ್ರಶ್ನೆಯೊಂದಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರತಿಕ್ರಿಯಿಸಿದರು.
ರಾಜಕೀಯ ಉದ್ದೇಶದಿಂದ ವರದಿ ತರಿಸಲಾಗಿದೆ ಎಂದು ಸಂಸದ ಡಾ ಕೆ ಸುಧಾಕರ್ (MP Dr K Sudhakar) ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಏಕೆ ಮುಟ್ಟಿ ನೋಡಿಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.
ವರದಿಯಲ್ಲಿ ಏನಿದೆ ಎಂದು ನನಗೆ ತಿಳಿದಿಲ್ಲ. ತಪ್ಪು ಮಾಡಿರುವುದರಿಂದ ಚಡಪಡಿಸುತ್ತಿದ್ದಾರೆ. ಸುಳ್ಳು ವರದಿ ತರಸಿಕೊಂಡಿದ್ದಾರೆ ಎಂದು ಹೇಳಿಕೆ ನೀಡಲು ವರದಿ ಬಹಿರಂಗವಾಗಿಲ್ಲ. ಆದರೂ ಈ ರೀತಿ ಹೇಳಿಕೆ ನೀಡುತ್ತಾರೆ ಎಂದರೆ ಮನಸ್ಥಿತಿ ಏನಾಗಿದೆ ತಿಳಿಯುತ್ತದೆ ಎಂದರು .
ಇದನ್ನೂ ಓದಿ- ಗೌರಿ-ಗಣೇಶ ಹಬ್ಬಕ್ಕಾಗಿ ಊರಿಗೆ ಹೋಗುವವರಿಗೆ ಕೆಎಸ್‌ಆರ್‌ಟಿಸಿ ಗುಡ್ ನ್ಯೂಸ್, ಟಿಕೆಟ್ ಬುಕ್ಕಿಂಗ್ ಮೇಲೆ ರಿಯಾಯಿತಿಯೂ ಲಭ್ಯ
ಏಳು ಸಾವಿರ ಕೋಟಿ ರೂಪಾಯಿ ಭ್ರಷ್ಟಾಚಾರ ಆಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ ವರದಿ ಬಗ್ಗೆ ನನಗೆ ತಿಳಿದಿಲ್ಲ, ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದಷ್ಟೆ ಹೇಳಿದರು.
ತಪ್ಪು ಮಾಡಿದವರ ಮೇಲೆ ಕ್ರಮ:
ಮುಡಾ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅವರನ್ನು ಸರ್ಕಾರ ಅಮಾನತು ಮಾಡಿರುವ ಬಗ್ಗೆ ಮಾತನಾಡಿ ನಗರಾಭಿವೃದ್ಧಿ ಇಲಾಖೆ ಅಮಾನತು ಮಾಡಿದೆ . ಇಬ್ಬರೂ ಆಯುಕ್ತರ ಮೇಲೆ ಆರೋಪ ಕೇಳಿಬಂದಿತ್ತು. ಒಬ್ಬರನ್ನು ಮಾತ್ರ ಅಮಾನತು ಮಾಡಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿ ಆಯೋಗ ರಚಿಸಲಾಗಿದ್ದು, ಅವರ ವರದಿ ಪ್ರಕಾರ ಯಾರು ತಪ್ಪು ಮಾಡಿದ್ದರೂ ಅವರ ಮೇಲೆ ಕ್ರಮ ವಹಿಸಲಾಗುವುದು ಎಂದರು.
2009ರ ಹಿಂದಿನ ಬಡಾವಣೆಗಳಿಗೆ 50:50 ಅನುಪಾತ ಅನ್ವಯವಾಗುವುದಿಲ್ಲವಾದರೂ ಅನ್ವಯ ಮಾಡಿದ್ದಾರೆ ಎಂದು ಅಮಾನತು ಆದೇಶದಲ್ಲಿ ಇದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.
ನಾನು ಸುಳ್ಳು ಹೇಳಿಲ್ಲ ಹಾಗೂ ತಪ್ಪು ಮಾಡಿಲ್ಲ:-
ಚಾಮುಂಡಿ ಬೆಟ್ಟಕ್ಕೆ (Chamundi Hill) ಹೋಗಿ ತಾಯಿಯ ದರ್ಶನ ಮಾಡುತ್ತಿದ್ದೇನೆ. ವಿರೋಧ ಪಕ್ಷದವರಿಗೆ ಸುಳ್ಳು ಹೇಳಿರುವುದು ರುಜುವಾತಾಗದೆ ಹೋದರೆ ಕಷ್ಟವಾಗುತ್ತದೆ ಎಂದು ಯೋಚಿಸುತ್ತಿದ್ದಾರೆ. ನಾನು ಸುಳ್ಳು ಹೇಳಿಲ್ಲ ಹಾಗೂ ತಪ್ಪು ಮಾಡಿಲ್ಲ ಎಂದರು.
ಮುಖ್ಯಮಂತ್ರಿಯನ್ನು ಶಾಸಕರು, ವರಿಷ್ಠರು ಆಯ್ಕೆ ಮಾಡುತ್ತಾರೆ:
ಶಾಸಕ ಆರ್.ವಿ.ದೇಶಪಾಂಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿಗಳಾಗಿರುತ್ತಾರೆ. ಸಿಎಂ ಒಪ್ಪಿಗೆ ಕೊಟ್ಟರೆ ಮುಖ್ಯಮಂತ್ರಿಯಾಗುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಮುಖ್ಯಮಂತ್ರಿಯನ್ನು ಶಾಸಕರು, ವರಿಷ್ಠರು ಆಯ್ಕೆ ಮಾಡುತ್ತಾರೆ ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.