ಬೆಂಗಳೂರು : ಚಂದ್ರಶೇಖರ ಗುರೂಜಿ ಹಂತಕರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಹೆಚ್ಚಿನ ವಿಚಾರಣೆಗೆಂದು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದೀಗ ವಿಚಾರಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹಂತಕರಾದ ಮಹಾಂತೇಶ ಶಿರೂರ ಹಾಗೂ ಮಂಜುನಾಥ ಮರೇವಾಡನನ್ನು ವಿದ್ಯಾನಗರ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಆರೋಪಿಗಳಿಬ್ಬರನ್ನು ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ದಿವಾಣಿ ನ್ಯಾಯಾಲಯ ಮತ್ತು ಜೆಎಂಎಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಇದನ್ನೂ ಓದಿ : ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ : ಶೀಘ್ರ ಸಿಗಲಿದೆ ಶಿಕ್ಷಕಿ ಸ್ಥಾನಮಾನ
ಕಳೆದ 12 ರಂದು ಹೆಚ್ಚಿನ ವಿಚಾರಣೆಗೆಂದು ಪೊಲೀಸರು, ಮಹಾಂತೇಶ ಶಿರೂರ ಹಾಗೂ ಮಂಜುನಾಥ ಮರೇವಾಡನನ್ನ ಮೊದಲು 6 ದಿನಗಳ ಕಾಲ ವಶಕ್ಕೆ ಪಡೆದಿದ್ದರು. ನಂತರ ಮತ್ತೆ ಆರು ದಿನಗಳವರೆಗೆ ಕಸ್ಟಡಿಗೆ ತೆಗೆದು ಕೊಂಡಿದ್ದರು. ಇದೀಗ ಪ್ರಕರಣದ ವಿಚಾರಣೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಪೊಲೀಸರು ಮತ್ತೆ ಆರೋಪಿಗಳನ್ನು ತಮ್ಮ ವಶಕ್ಕೆ ಪಡೆಯಲು ಮನವಿ ಮಾಡಲಿಲ್ಲ. ಪೋಲಿಸ್ಸ್ಫ್ ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಬ್ಬರನ್ನೂ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.
ಜುಲೈ 5 ನೇ ತಾರೀಕಿನಂದು ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ಚಂದ್ರಶೇಖರ್ ಗುರೂಜಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು.
ಇದನ್ನೂ ಓದಿ : Vegetable Price: ಹೇಗಿದೆ ಗೊತ್ತಾ ಈರುಳ್ಳಿ, ಟೊಮ್ಯಾಟೋ ಬೆಲೆ? ಇಲ್ಲಿದೆ ತರಕಾರಿ ದರದ ಸಂಪೂರ್ಣ ವಿವರ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ