ನಾಳೆಯಿಂದ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ : ಕರ್ಫ್ಯೂ ಅವಧಿಯಲ್ಲಿ ದಿಢೀರ್ ಬದಲಾವಣೆ
ಇಂದಿನ ಬದಲು ನಾಳೆಯಿಂದ ರಾಜ್ಯದಲ್ಲಿ ರಾತ್ರಿ ಕರ್ಫೂ ಜಾರಿಯಾಗಲಿದೆ. ರಾತ್ರಿ 11 ಗಂಟೆಯಿಂದ ಮುಂಜಾನೆ 5 ಗಂಟೆವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ.
ಬೆಂಗಳೂರು: ಹೊಸ ಸ್ವರೂಪದ ಕರೋನಾ ಹರಡುತ್ತಿರುವ ಹಿನ್ನೆಲೆಯಲ್ಲಿ ಹೇರಲು ನಿರ್ಧರಿಸಿದ್ದ ರಾತ್ರಿ ಕರ್ಫ್ಯೂ ಸಮಯದಲ್ಲಿ ದಿಢೀರ್ ಬದಲಾವಣೆ ಮಾಡಲಾಗಿದೆ. ಇಂದು ರಾತ್ರಿಯಿಂದಲೇ ಕರ್ಫ್ಯೂ ಜಾರಿ ಎಂದು ಈ ಮೊದಲು ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ್ದರು. ಆದರೆ ಇಂದು ರಾತ್ರಿ ಬದಲಾಗಿ ನಾಳೆ ರಾತ್ರಿಯಿಂದ ಕರ್ಫ್ಯೂ ಜಾರಿಯಾಗಲಿದೆ ಎಂದು ಸಿಎಂ ಕಚೇರಿ ತಿಳಿಸಿದೆ.
ನಾಳೆ ಅಂದರೆ ಡಿ.24ರ ರಾತ್ರಿ 11 ಗಂಟೆಯಿಂದ ಮುಂಜಾನೆ 5 ಗಂಟೆವರೆಗೆ ರಾತ್ರಿ ಕರ್ಫ್ಯೂ (Night Curfew) ಜಾರಿಯಲ್ಲಿರಲಿದೆ. ಈ ರಾತ್ರಿ ಕರ್ಫ್ಯೂ ಜನವರಿ 2ರವರೆಗೆ ಇರಲಿದೆ. ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ ಡಿ.24ರ ರಾತ್ರಿ ನಡೆಯಲಿರುವ ಕ್ರಿಸ್ಮಸ್ (Christmas) ವಿಶೇಷ ಧಾರ್ಮಿಕ ಕಾರ್ಯಗಳನ್ನು ಯಾವುದೇ ಅಡೆತಡೆಯಿಲ್ಲದೆ ನಡೆಸಬಹುದಾಗಿದೆ. ಈ ಹಿಂದೆ ಇಂದು ರಾತ್ರಿ 10 ಗಂಟೆಯಿಂದ ಮುಂಜಾನೆ 6 ಗಂಟೆವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಸಿಎಂ ಯಡಿಯೂರಪ್ಪ ( B S Yadiyurappa) ಹೇಳಿದ್ದರು.
ಜಾಗತಿಕವಾಗಿ COVID 19 ಪೀಡಿತರ ಪಟ್ಟಿಯಲ್ಲಿ 8ನೇ ಸ್ಥಾನದತ್ತ ಧಾವಿಸುತ್ತಿರುವ ಭಾರತ
ಇಂಗ್ಲೆಂಡ್ ನಿಂದ ಭಾರತಕ್ಕೆ ಬಂದ ಪ್ರಯಾಣಿಕರಲ್ಲಿ ಕರೋನಾ ಸೋಂಕು (Covid 19) ಕಂಡು ಬಂದ ಹಿನ್ನೆಲೆಯಲ್ಲಿ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿತ್ತು. ರಾಜ್ಯದಲ್ಲಿ ಹೊಸ ಸ್ವರೂಪದ ಕರೋನಾ ವೈರಸ್ ಹರಡಲು ಬಿಡುವುದಿಲ್ಲ ಎಂದಿದ್ದ ಸಿಎಂ ಯಡಿಯೂರಪ್ಪ ತೀವ್ರ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದರು. ವಿಮಾನ ನಿಲ್ದಾನಗಳಲ್ಲಿ ತಪಾಸಣೆ ಕಾರ್ಯಗಳನ್ನು ಚುರುಕುಗೊಳಿಸಲಾಗಿತ್ತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G
iOS Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.