ವಿಜಯಪುರ- ಮಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು ವೇಳಾಪಟ್ಟಿಯಲ್ಲಿ ಬದಲಾವಣೆ

ವಿಜಯಪುರ ಮತ್ತು ಮಂಗಳೂರು ಜಂಕ್ಷನ್ ನಡುವೆ ಸಂಚರಿಸುವ ದೈನಂದಿನ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಖ್ಯೆ 07377 ಮತ್ತು 07378 ಬದಲಾದ ವೇಳಾಪಟ್ಟಿಯೊಂದಿಗೆ ರೈಲುಗಳ ಸೇವೆಯನ್ನು ಮುಂದುವರಿಸಲಾಗುತ್ತಿದೆ.   

Written by - Zee Kannada News Desk | Last Updated : Apr 1, 2024, 11:48 PM IST
  • 07377 ಮತ್ತು 07378 ಬದಲಾದ ವೇಳಾಪಟ್ಟಿಯೊಂದಿಗೆ ರೈಲುಗಳ ಸೇವೆಯನ್ನು ಮುಂದುವರಿಸಲಾಗುತ್ತಿದೆ.
  • ಭಾರತೀಯ ರೈಲ್ವೆ ವೆಬ್ ಸೈಟ್ www.enquiry.indianrail.gov.in ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದೆ.
ವಿಜಯಪುರ- ಮಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು ವೇಳಾಪಟ್ಟಿಯಲ್ಲಿ ಬದಲಾವಣೆ title=

ರೈಲು ಸಂಖ್ಯೆ 07377 ವಿಜಯಪುರ - ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಮಾರ್ಚ್  31 ರವರೆಗೆ ಸೂಚಿಸಲಾಗಿತ್ತು. ಆದರೆ ಈಗ ಏಪ್ರಿಲ್ 1 ರಿಂದ ಸೆಪ್ಟೆಂಬರ್ 30, 2024 ರವರೆಗೆ ವಿಸ್ತರಣೆ ಮಾಡಲಾಗುತ್ತಿದೆ 

ಇದನ್ನು ಓದಿ :ಆತ್ಮೀಯವಾಗಿ ನಡೆದ ಡಾ.ರಾಜಪ್ಪ ದಳವಾಯಿ ಬೀಳ್ಕೊಡುಗೆ ಸಮಾರಂಭ

ರೈಲು ಸಂಖ್ಯೆ 07378 ಮಂಗಳೂರು ಜಂಕ್ಷನ್ - ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಏಪ್ರಿಲ್ 1 ರವರೆಗೆ ಸೂಚಿಸಲಾಗಿತ್ತು. ಇದೀಗ ಏಪ್ರಿಲ್ 2 ರಿಂದ ಅಕ್ಟೋಬರ್ 1, 2024 ರವರೆಗೆ ವಿಸ್ತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದೆ. 

ರೈಲು ಸಂಖ್ಯೆ 07377 / 07378 
ವಿಜಯಪುರ - ಮಂಗಳೂರು ಜಂಕ್ಷನ್, ಗುಂತಕಲ್ - ಎಸ್‌ಎಸ್‌ಎಸ್ ಹುಬ್ಬಳ್ಳಿ,  ಕಬಕಪುತ್ತೂರು - ಮಂಗಳೂರು ಸೆಂಟ್ರಲ್  ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲುಗಳ  ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದ್ದು, ಏಪ್ರಿಲ್ 1, 2024 ರಿಂದ ಜಾರಿಗೆ ಬರುವಂತೆ ಪರಿಷ್ಕರಣೆ ಮಾಡಿದೆ. 

ರೈಲು ಸಂಖ್ಯೆ 07338 ಗುಂತಕಲ್ - ಎಸ್‌ಎಸ್‌ಎಸ್ ಹುಬ್ಬಳ್ಳಿ  ಡೈಲಿ ಪ್ಯಾಸೆಂಜರ್ ಸ್ಪೆಷಲ್
ರೈಲು ಸಂಖ್ಯೆ 06484 ಕಬಕಪುತ್ತೂರು - ಮಂಗಳೂರು ಸೆಂಟ್ರಲ್ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಏಪ್ರಿಲ್ 1, 2024 ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದೆ.

ಇದನ್ನು ಓದಿ : IPL 2024 : ಅಬ್ಬರಿಸಿದ ಯಜುವೇಂದ್ರ, ಬೌಲ್ಟ್ ಬೌಲಿಂಗ್, 6 ವಿಕೆಟ್ ಗಳಿಂದ ಜಯ ಗಳಿಸಿದ ರಾಜಸ್ಥಾನ ರಾಯಲ್ಸ್

ಈ ರೈಲುಗಳ ಪರಿಷ್ಕೃತ ವೇಳಾಪಟ್ಟಿಗಾಗಿ, swr.indianrailways.gov.in ಮತ್ತು ಸಹಾಯವಾಣಿ ಸಂಖ್ಯೆ 139ಗೆ ಅಥವಾ ಭಾರತೀಯ ರೈಲ್ವೆ ವೆಬ್ ಸೈಟ್ www.enquiry.indianrail.gov.in ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News